Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಂದೇ ಮಾತರಂ ಎರಡು ಪ್ಯಾರಾ ಹಾಡಿದರೆ...

ವಂದೇ ಮಾತರಂ ಎರಡು ಪ್ಯಾರಾ ಹಾಡಿದರೆ ದೇಶದ್ರೋಹಿಗಳಾ? : ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 Aug 2026 6:25 PM IST
share
ವಂದೇ ಮಾತರಂ ಎರಡು ಪ್ಯಾರಾ ಹಾಡಿದರೆ ದೇಶದ್ರೋಹಿಗಳಾ? : ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
"ರಾಜಕೀಯ ವಿವಾದಗಳ ಬದಲು ಜನರ ಬದುಕಿನತ್ತ ಗಮನ ಹರಿಸಿ"

ಕಲಬುರಗಿ: ಸ್ವಾತಂತ್ರ್ಯಕ್ಕೂ ಮುನ್ನವೇ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಕಾಂಗ್ರೆಸ್‌ ಇಂದಿಗೂ ಅದೇ ಪರಂಪರೆಯನ್ನು ಮುಂದುವರಿಸುತ್ತಿದೆ. ಎಲ್ಲರೂ ಮೊದಲು ಇತಿಹಾಸವನ್ನು ಸರಿಯಾಗಿ ಓದಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿಯೇ ರವೀಂದ್ರನಾಥ ಠಾಗೋರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಹಲವು ಪ್ರಮುಖ ನಾಯಕರು ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುತ್ತಿದ್ದರು ಎಂದು ಹೇಳಿದರು.

“ಅವರಂತೆಯೇ ಎರಡು ಚರಣಗಳನ್ನು ಹಾಡಿದರೆ ನಾವು ದೇಶದ್ರೋಹಿಗಳಾ? ಹಾಗಾದರೆ ರವೀಂದ್ರನಾಥ ಠಾಗೋರ್ ಹಾಗೂ ಸರ್ದಾರ್ ಪಟೇಲ್ ಅವರೂ ದೇಶದ್ರೋಹಿಗಳೇ?” ಎಂದು ಖರ್ಗೆ ಪ್ರಶ್ನಿಸಿದರು.

11 ವರ್ಷ ಅಧಿಕಾರದಲ್ಲಿದ್ದಾಗ ಏಕೆ ನೆನಪಾಗಲಿಲ್ಲ? :

ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿದ್ದಾಗ ಈ ವಿಚಾರ ಏಕೆ ನೆನಪಾಗಲಿಲ್ಲ ಎಂದು ಪ್ರಶ್ನಿಸಿದ ಖರ್ಗೆ, ಈಗ ಇಂತಹ ವಿಷಯಗಳನ್ನು ಮುನ್ನೆಲೆಗೆ ತರುವ ಅಗತ್ಯವೇನು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಬಾರದು ಎಂದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಉದ್ಯೋಗ, ಶಿಕ್ಷಣ ಸೇರಿದಂತೆ ದೇಶದ ಜನರ ಮೂಲಭೂತ ಸಮಸ್ಯೆಗಳತ್ತ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದರು.

ಉದ್ಯೋಗ, ಶಿಕ್ಷಣಕ್ಕೆ ಆದ್ಯತೆ ನೀಡಿ :

ವಿವಾದಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಬದಲು ದೇಶದ ಜನರ ಬದುಕು ಸುಧಾರಿಸುವತ್ತ ಕೇಂದ್ರ ಸರ್ಕಾರ ಗಮನಹರಿಸಬೇಕು. ಉದ್ಯೋಗ, ಶಿಕ್ಷಣ ಹಾಗೂ ಬಡವರ ಕಲ್ಯಾಣಕ್ಕೆ ಆದ್ಯತೆ ನೀಡಬೇಕು. ಮನರೇಗಾದಂತಹ ಯೋಜನೆಗಳನ್ನು ಬಲಪಡಿಸುವ ಮೂಲಕ ಬಡವರಿಗೆ ಆರ್ಥಿಕ ಶಕ್ತಿ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದರು.

ರಾಹುಲ್ ಗಾಂಧಿ ಪ್ರತಿಭಟನೆ ಕುರಿತು :

ದೆಹಲಿಯ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ದೂರು ನೀಡಿದ ಕೂಡಲೇ ಎಫ್‌ಐಆರ್ ದಾಖಲಿಸಿದ್ದರೆ ಪ್ರತಿಭಟನೆ ನಡೆಸುವ ಅಗತ್ಯವಿರಲಿಲ್ಲ. ದೂರು ಸ್ವೀಕರಿಸಿದ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ ಎಂದು ಹೇಳಿದರು.

ತೆಲಂಗಾಣ ಮುಖ್ಯಮಂತ್ರಿ ಅವರ ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅನುಮತಿ ವಿಚಾರದಲ್ಲೂ ಅಸಮಾಧಾನ ವ್ಯಕ್ತಪಡಿಸಿದ ಖರ್ಗೆ, ದೇಶಕ್ಕೆ ಬಂಡವಾಳ ಹರಿದುಬರುವಂತಹ ಅವಕಾಶಗಳನ್ನು ತಡೆಯಬಾರದು ಎಂದು ಹೇಳಿದರು.

ಜನರ ಮೂಲಭೂತ ಸಮಸ್ಯೆಗಳತ್ತ ಗಮನ ಹರಿಸಿ, ವಿವಾದಾತ್ಮಕ ವಿಚಾರಗಳ ಮೂಲಕ ರಾಜಕೀಯ ಮಾಡುವುದನ್ನು ಬಿಟ್ಟು ಜನರ ಬದುಕು ಸುಧಾರಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು ಎಂದು ಖರ್ಗೆ ಆಗ್ರಹಿಸಿದರು.

Tags

Mallikarjun KhargeVande Mataram
share
ವಾರ್ತಾಭಾರತಿ
ವಾರ್ತಾಭಾರತಿ
Next Story
X