Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ...

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ “ಅವಿರತ್” ತಾಂತ್ರಿಕ-ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 Jun 2025 8:17 PM IST
share
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ “ಅವಿರತ್” ತಾಂತ್ರಿಕ-ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

ಕಲಬುರಗಿ: ತಾಂತ್ರಿಕ ಸ್ಪರ್ಧೆಗಳು ಮತ್ತು ಉತ್ಸವಗಳನ್ನು ನಿಯಮಿತವಾಗಿ ಆಯೋಜಿಸುವುದರಿಂದ, ವಿದ್ಯಾರ್ಥಿಗಳಲ್ಲಡಗಿರುವ ಪ್ರತಿಭೆಗಳನ್ನು ಬಹಿರಂಗಪಡಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಹಾಗೂ ಶಿಸ್ತಿನ ಮನೋಭಾವವನ್ನು ಅಳವಡಿಸಿಕೊಳ್ಳಲು ಪರಿಪೂರ್ಣ ಅವಕಾಶವನ್ನು ಒದಗಿಸಿದಂತಾಗುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ್ ಹೇಳಿದರು.

ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಶನಿವಾರದಂದು, ಈ ಹಿಂದೆ ಅಪ್ಪಾ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಎಂದು ಕರೆಯಲ್ಪಡುತ್ತಿದ್ದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗ ಆಯೋಜಿಸಿದ್ದ 2 ದಿನಗಳ ತಾಂತ್ರಿಕ-ಸಾಂಸ್ಕೃತಿಕ “ಅವಿರತ್” ಉತ್ಸವವನ್ನು ಉದ್ಘಾಟಿಸಿದ ಶ್ರೀ ದೇಶಮುಖ್, ವಿಶ್ವವಿದ್ಯಾಲಯವು ಇಂತಹ ಸ್ಪರ್ಧೆಗಳನ್ನು ನಿಯಮಿತವಾಗಿ ಆಯೋಜಿಸುತ್ತಿರುವುದು ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇತರ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿರುವುದು ತಿಳಿದು ಅತೀವ ಸಂತೋಷವಾಗಿದೆ ಎಂದು ಹೇಳಿದರು.

ಸ್ಪರ್ಧೆಗಳು ತಾಂತ್ರಿಕ ಅಂಶಕ್ಕೆ ಮಾತ್ರ ಸೀಮಿತವಾಗಿಲ್ಲ, ಸಾಂಸ್ಕೃತಿಕ ಇತರ ಕಾರ್ಯಕ್ರಮಗಳು ಸೇರಿದಂತೆ ತಮ್ಮ ವೈವಿಧ್ಯಮಯ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸಲಾಗಿದೆ ಎಂದು ದೇಶಮುಖ್ ಹೇಳಿದರು.

ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ತಮ್ಮ ಅಧ್ಯಕೀಯ ಭಾಷಣದಲ್ಲಿ, ವಿದ್ಯಾರ್ಥಿಗಳು ಇಂತಹ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಮಯಪ್ರಜ್ಞೆ ಮತ್ತು ಸ್ಪರ್ಧಾತ್ಮಕ ಸ್ವಭಾವವನ್ನು ಮೈಗೂಡಿಸಿಕೊಳ್ಳುತ್ತಾರೆ ಎಂದು ಹೇಳಿದರು. ಅದೇ ರೀತಿ ಇಂತಹ ಸ್ಪರ್ಧೆಗಳು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಸಂಬಂಧಗಳು ಮತ್ತು ಒಡನಾಟವನ್ನು ಬೆಳೆಸಲು ಸಹಾಯ ಮಾಡುತ್ತವೆ ಹಾಗೂ ಅವರ ಅನುಭವಗಳನ್ನು ಹಂಚಿಕೊಳ್ಳಲು ಮತ್ತು ಬಾಂಧವ್ಯವನ್ನು ಬೆಳೆಸಲು ಅವಕಾಶವನ್ನು ಒದಗಿಸುತ್ತಿವೆ ಎಂದರು.

ಈ ಉತ್ಸವದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಮತ್ತು ಅವರ ಕೌಶಲ್ಯಗಳನ್ನು ಸುಧಾರಿಸಲು ಅವಕಾಶವನ್ನು ಪಡೆಯುತ್ತಾರೆ.

ತಾಂತ್ರಿಕ-ಸಾಂಸ್ಕೃತಿಕ ಉತ್ಸವದ ಭಾಗವಾಗಿ ಅನೇಕ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ ಎಂದು ಗಮನಿಸಿ ಸಂತೋಷವಾಗಿದೆ ಮತ್ತು ವಿದ್ಯಾರ್ಥಿಗಳು ಕ್ರೀಡಾ ಮತ್ತು ಹಬ್ಬದ ವಾತಾವರಣದಲ್ಲಿ ಎರಡು ದಿನಗಳ ಸ್ಪರ್ಧೆಗಳನ್ನು ಆನಂದಿಸುತ್ತಾರೆ ಎಂದು ಆಶಿಸಿದರು.

ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ತಮ್ಮ ಭಾಷಣದಲ್ಲಿ, ಇಂತಹ ಸ್ಪರ್ಧೆಗಳು ತಮ್ಮ ವಿವೇಕವನ್ನು ಬಳಸಿಕೊಳ್ಳಲು ಮತ್ತು ಎಲ್ಲಾ ಪ್ರಯತ್ನಗಳಲ್ಲಿ ಪರಿಪೂರ್ಣತೆಯನ್ನು ಸಾಧಿಸಲು ಅವಕಾಶವನ್ನು ಒದಗಿಸುತ್ತವೆ. ಈ ಸ್ಪರ್ಧೆಯು ವಿದ್ಯಾರ್ಥಿಗಳ ಸಮಯ ನಿರ್ವಹಣಾ ಕೌಶಲ್ಯಗಳನ್ನು ಉತ್ತಮಗೊಳಿಸಲು ಮತ್ತು ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದರು.

ಎರಡು ದಿನಗಳ ಕಾಲ ನಡೆಯುವ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹ್ಯಾಕಥಾನ್, ರೋಬೋಟ್ ರೇಸ್, ಪ್ರಾಜೆಕ್ಟ್ ಎಕ್ಸ್‍ಪೆÇೀ, ಕ್ಯಾಡ್-ವಾರ್, ಟೆಕ್-ಟೈಟಾನ್, ಸ್ವರ-ಸಂಗಮ, ನೃತ್ಯಸಂಗಮ, ಸ್ಟ್ಯಾಂಡ್‍ಅಪ್ ಕಾಮಿಡಿ ಮತ್ತು ಛಾಯಾಗ್ರಹಣದಂತಹ ತಾಂತ್ರಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪರೀಕ್ಷಿಸಿಕೊಳ್ಳಲಿದ್ದಾರೆ.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಡಾ. ಕಿರಣ್ ಮಾಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಡಾ. ಶಿವಕುಮಾರ ಜವಳಿಗಿ ಸ್ವಾಗತಿಸಿದರು ಮತ್ತು ಇಸಿಇ ವಿಭಾಗದ ಚೇರಪರ್ಸನ್ ಡಾ. ಶಶಿಧರ್ ಸೊನ್ನಾದ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X