Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಹೆಣ್ಣು ಮಕ್ಕಳ ಮೇಲಿನ ತಾರತಮ್ಯ...

ಹೆಣ್ಣು ಮಕ್ಕಳ ಮೇಲಿನ ತಾರತಮ್ಯ ತೊಡೆದುಹಾಕುವುದೇ 'ಬೇಟಿ ಬಚಾವೋ ಬೇಟಿ ಪಡಾವೋ' ಯೋಜನೆಯ ಮುಖ್ಯ ಧ್ಯೇಯ: ಉಮಾ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ3 July 2025 10:22 PM IST
share
ಹೆಣ್ಣು ಮಕ್ಕಳ ಮೇಲಿನ ತಾರತಮ್ಯ ತೊಡೆದುಹಾಕುವುದೇ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಧ್ಯೇಯ: ಉಮಾ ಪೂಜಾರಿ

ಕಲಬುರಗಿ: ಹೆಣ್ಣು ಮಕ್ಕಳ ಮೇಲಿನ ತಾರತಮ್ಯವನ್ನು ತೊಡೆದುಹಾಕುವುದು ಮತ್ತು ಅವರ ಬಗ್ಗೆ ಜನರಲ್ಲಿ ನಕರಾತ್ಮಕ ಮನೋಭಾವವನ್ನು ಬದಲಾಯಿಸುವುದು 'ಬೇಟಿ ಬಚಾವೋ ಬೇಟಿ ಪಡಾವೋ' ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಜೆಂಡರ್ ಸ್ಪೇಷಲಿಸ್ಟ್ ಉಮಾ ಪೂಜಾರಿ ಹೇಳಿದರು.

ಆಳಂದ ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ರಾಜಶೇಖರ ಮಹಾಸ್ವಾಮೀಜೀ ಬಿ.ಎಡ್ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ಹಾಗೂ ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘ ಶಕ್ತಿ ಸದನ (ಸ್ವಾಧರ ಗೃಹ )ಕಲಬುರಗಿ ಸಂಯುಕ್ತಾಶ್ರಯದಲ್ಲಿ ಮಿಷನ ಶಕ್ತಿ ಯೋಜನೆ ಹಾಗೂ ಅದರ ಉಪಯೋಜನೆಗಳು ಮತ್ತು ಶಕ್ತಿ ಸದನ ಯೋಜನೆ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಮಹತ್ವ ತಿಳಿಸಿದರು.

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಭಾಗವಾಗಿ ಸುಕನ್ಯಾ ಸಮೃದ್ಧಿ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆಯಡಿ, ಹೆಣ್ಣು ಮಕ್ಕಳ ಹೆಸರಲ್ಲಿ ಪ್ರತಿ ತಿಂಗಳು 1000 ರೂಪಾಯಿಗಳನ್ನು ಖಾತೆಗೆ ಜಮಾ ಮಾಡಿದರೆ, ಈ ಮೊತ್ತವು ಒಂದು ವರ್ಷದಲ್ಲಿ 12 ಸಾವಿರ ಆಗುತ್ತದೆ. 14 ವರ್ಷಗಳಲ್ಲಿ ಒಟ್ಟು ಮೊತ್ತ 1,68,000 ಆಗಲಿದೆ. ನಂತರ 21 ವರ್ಷಗಳ ನಂತರ ನಿಮ್ಮ ಮಗಳು 6 ಲಕ್ಷಕ್ಕೂ ಹೆಚ್ಚು ಹಣ ಪಡೆಯುತ್ತಾರೆ ಎಂದರು.

ಡಾ. ಭೂಮಿಕಾ ಮಾತನಾಡಿ, ಈ ಯೋಜನೆಯನ್ನು ಎರಡು ಘಟಕಗಳಾಗಿ ವಿಂಗಡಿಸಲಾಗಿದೆ. ಮೊದಲನೆಯದು- ರಾಷ್ಟ್ರವ್ಯಾಪಿ ಅಭಿಯಾನವನ್ನು ನಡೆಸುವ ಮೂಲಕ ಸಿಎಸ್‌ರ್ (ಮಕ್ಕಳ ಲಿಂಗ ಅನುಪಾತ) ಕುಸಿತವನ್ನು ಕಡಿಮೆ ಮಾಡುವುದು. ಎರಡನೆಯದು- 2011 ರ ಜನಗಣತಿಯ ಪ್ರಕಾರ, ಕಡಿಮೆ ಲಿಂಗಾನುಪಾತ ಇರುವ 100 ಜಿಲ್ಲೆಗಳಲ್ಲಿ ಕೆಲಸ ಮಾಡುವುದು. ಇದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿವೆ. ಆದರೆ, ಈಗ ಸರ್ಕಾರ ದೇಶದ ಇತರೆ ಜಿಲ್ಲೆಗಳಲ್ಲೂ ಈ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ ಎಂದು ಮಾಹಿತಿ ನೀಡಿದರು.

ಮಹದೇವಿ ತಾಯಿ ವಿದ್ಯಾವರ್ಧಕ ಸಂಘದ ಅಧೀಕ್ಷಕಿ ಜಯಶ್ರೀ ಮಾತನಾಡಿ, ಲಿಂಗಾನುಪಾತದ ಅಂತರವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವುದು ಯೋಜನೆಯ ಉದ್ದೇಶವಾಗಿದೆ. ಯೋಜನೆಯಡಿ, ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಹೆಣ್ಣು ಮಕ್ಕಳ ಹೆಸರಲ್ಲಿ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಅವರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಈ ಹಣದಿಂದ ನಿಮ್ಮ ಮಗಳು ತನ್ನ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿಗಳು, ಪ್ರಶಿಕ್ಷಣಾರ್ಥಿಗಳು, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ಪ್ರಾಚಾರ್ಯ ಅಶೋಕರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X