Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೂ.24ರಂದು ಆಳಂದದಲ್ಲಿ ‘ಬಸವ ಸಂಗಮ’;...

ಜೂ.24ರಂದು ಆಳಂದದಲ್ಲಿ ‘ಬಸವ ಸಂಗಮ’; ವಿಶ್ವಗುರು ಬಸವಣ್ಣ ಜಯಂತಿ

ವಾರ್ತಾಭಾರತಿವಾರ್ತಾಭಾರತಿ19 Jun 2026 8:51 PM IST
share
ಜೂ.24ರಂದು ಆಳಂದದಲ್ಲಿ ‘ಬಸವ ಸಂಗಮ’; ವಿಶ್ವಗುರು ಬಸವಣ್ಣ ಜಯಂತಿ

ಆಳಂದ: ವಿಶ್ವಗುರು ಬಸವಣ್ಣ ಅವರ 893ನೇ ಜಯಂತ್ಯೋತ್ಸವದ ಅಂಗವಾಗಿ ಜೂನ್ 24ರಂದು ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ನಡೆಯಲಿರುವ “ಬಸವ ಸಂಗಮ” ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಬಸವ ತತ್ವ, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಆನಂದ ಕೆ. ಪಾಟೀಲ ಹಾಗೂ ಉಪಾಧ್ಯಕ್ಷ ಸೋಮಶೇಖರ ಮುಲಗೆ ತಿಳಿಸಿದ್ದಾರೆ.

ಪಟ್ಟಣದ ವೀರಶೈವ ಲಿಂಗಾಯತ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಯಂತ್ಯೋತ್ಸವದ ವಾಲ್‌ಪೋಸ್ಟರ್‌ನ್ನು ಗೌರವ ಅಧ್ಯಕ್ಷ ಸಿದ್ಧೇಶ್ವರ ಶಿವಾಚಾರ್ಯರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಉತ್ಸವ ಸಮಿತಿ ಮುಖಂಡರು, ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ವರ್ಷದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಜೂನ್ 24ರಂದು ಮಧ್ಯಾಹ್ನ 3.30ಕ್ಕೆ ಲಿಂಗಾಯತ ಭವನದಲ್ಲಿರುವ ಬಸವೇಶ್ವರರ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ವಚನ ಜ್ಞಾನ ಭಂಡಾರದ ಪುಸ್ತಕಗಳೊಂದಿಗೆ ಭವ್ಯ ಮೆರವಣಿಗೆ, ತಾಯಂದಿರ ಕುಂಭೋತ್ಸವ ಹಾಗೂ ವಿವಿಧ ಕಲಾತಂಡಗಳೊಂದಿಗೆ ಶೋಭಾಯಾತ್ರೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಶ್ರೀರಾಮ ಮಾರುಕಟ್ಟೆ ತಲುಪಲಿದೆ.

ಸಂಜೆ 5 ಗಂಟೆಗೆ ನಡೆಯುವ ಬಸವ ಸಂಗಮ ಸಮಾರಂಭವು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು ಅವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿದ್ದು, ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ.

ವಿಶ್ವಗುರು ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದ್ದು, ಯುವಜನತೆ ಬಸವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟರು.

ಸಾರ್ವಜನಿಕರು, ಬಸವ ಅನುಯಾಯಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಗೌರವ ಅಧ್ಯಕ್ಷ ಸಿದ್ಧೇಶ್ವರ ಶಿವಾಚಾರ್ಯರು, ನ್ಯಾಯವಾದಿ ಬಿ.ವಿ. ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಶೇಗಜಿ ಹಾಗೂ ಇತರ ಮುಖಂಡರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಧರೆಪ್ಪ ಜಕಾಪೂರೆ, ಈರಣ್ಣಾ ಹತ್ತರಕಿ ಸೇರಿದಂತೆ ಉತ್ಸವ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X