Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಸವಾದಿ ಶರಣರು ಪ್ರಜ್ಞಾಪೂರ್ವಕ...

ಬಸವಾದಿ ಶರಣರು ಪ್ರಜ್ಞಾಪೂರ್ವಕ ಸಮಾಜವನ್ನು ರೂಪಿಸಿದ್ದಾರೆ : ಡಾ. ವಿವೇಕಾನಂದ್ ಸಜ್ಜನ್

ವಾರ್ತಾಭಾರತಿವಾರ್ತಾಭಾರತಿ6 Jun 2026 9:33 PM IST
share
ಬಸವಾದಿ ಶರಣರು ಪ್ರಜ್ಞಾಪೂರ್ವಕ ಸಮಾಜವನ್ನು ರೂಪಿಸಿದ್ದಾರೆ : ಡಾ. ವಿವೇಕಾನಂದ್ ಸಜ್ಜನ್

ಬೀದರ್ : ಕಲ್ಯಾಣವು ವೈಜ್ಞಾನಿಕ ಮತ್ತು ವೈಚಾರಿಕ ಪರಂಪರೆಯ ನೆಲವಾಗಿದ್ದು, ಬಸವಾದಿ ಶರಣರು ಪ್ರಜ್ಞಾಪೂರ್ವಕ ಸಮಾಜವನ್ನು ರೂಪಿಸಿದ್ದಾರೆ ಎಂದು ಬೆಂಗಳೂರು ಅಲಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿವೇಕಾನಂದ್ ಸಜ್ಜನ್ ಹೇಳಿದರು.

ಬಸವಕಲ್ಯಾಣ ನಗರದ ಬಿಕೆಡಿಬಿ ಸಭಾ ಭವನದಲ್ಲಿ ಬಸವೇಶ್ವರ್ ಪದವಿ ಕಾಲೇಜು ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಅರಿವಿನ ಪಯಣ, ಸಾಹಿತ್ಯ ಮತ್ತು ವೈಜ್ಞಾನಿಕ ಚಿಂತನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಚನಗಳು ಹೊಸ ಆಲೋಚನೆಗಳು ಹುಟ್ಟಿಸಿದ ಸಾಹಿತ್ಯವಾಗಿವೆ ಎಂದರು.

ಶಿಕ್ಷಣ ಅರಿವು ವಿಸ್ತರಿಸುವ ದಾರಿಯಾಗಿದೆ. ಅದು ಯಾವುದು ಸರಿ, ಯಾವುದು ತಪ್ಪು ಎಂಬ ಆಲೋಚನೆ ಕಟ್ಟಿಕೊಡುತ್ತದೆ. ಅಧ್ಯಯನ ವ್ಯಾಪ್ತಿ ಹೆಚ್ಚಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಬಸವಕಲ್ಯಾಣ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಶ್ರೀಕಾಂತ್ ಮೋಹನರಾವ್ ಅವರು ಮಾತನಾಡಿ, ಶಿಕ್ಷಣದಿಂದ ವಿಚಾರ ಮಾಡುವ ಮತ್ತು ವಿಮರ್ಶಿಸುವ ಗುಣ ಬೆಳೆಯುತ್ತದೆ. ಹನ್ನೆರಡನೇ ಶತಮಾನದ ಶರಣರು ವೈಚಾರಿಕ ಕ್ರಾಂತಿಯಿಂದ ಸಾಮಾಜಿಕ ಬದಲಾವಣೆ ತಂದರು. ಜಗತ್ತಿನಲ್ಲಿ ವಚನಕಾರರು ಕಾಯಕ, ದಾಸೋಹದಂತಹ ಬಹುದೊಡ್ಡ ಫಿಲಾಸಫಿ ಕಟ್ಟಿಕೊಟ್ಟಿದ್ದಾರೆ. ಯೂರೋಪಿಗಿಂತ ಮೊದಲೇ ಕಲ್ಯಾಣದಲ್ಲಿ ವೈಚಾರಿಕ ಚಿಂತನೆ ನಡೆದಿದೆ ಎಂದು ಹೇಳಿದರು.

ಭೀಮಾಶಂಕರ್ ಬಿರಾದಾರ್ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಈ ಕಾಲದ ಅಗತ್ಯವಾಗಿದೆ. ಅದರ ಜೊತೆಗೆ ಮಾನವೀಯ ಮೌಲ್ಯಗಳು ಮುಖ್ಯವಾಗಿದೆ. ಕೃತಕ ಬುದ್ಧಿಮತ್ತೆ ಹಾಗೂ ಗಣಕಯಂತ್ರಗಳು ಯೋಚಿಸುವ ಶಕ್ತಿ ಹೊಂದಿಲ್ಲ. ಮನುಷ್ಯ ಮಾತ್ರ ಆಲೋಚಿಸುವ, ವಿವೇಚಿಸುವ, ಅಳುವ, ನಗುವ, ಸಂವೇದನೆ ಹೊಂದಿದ್ದಾನೆ. ಯಂತ್ರಕ್ಕಿಂತ ಮನುಷ್ಯನ ಬದುಕು ದೊಡ್ಡದು ಎಂದರು.

ಬಿಡಿಪಿಸಿ ಅಧ್ಯಕ್ಷ ಅನಿಲಕುಮಾರ್ ರಗಟೆ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನಗಳೇ ಈ ಕಾಲದ ಚಲನೆ ನಿರ್ಧರಿಸಿವೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲ್ಲದೆ ಇಂದಿನ ಕಾಲ ಊಹಿಸಲು ಸಾಧ್ಯವಿಲ್ಲ. ಹಾಗಾಗಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಡಿಪಿಸಿ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಕುರಕೋಟೆ, ಕಾರ್ಯದರ್ಶಿ ಅಶೋಕ್ ನಾಗರಾಳೆ, ಸಹ ಕಾರ್ಯದರ್ಶಿ ಸುನಿಲಕುಮಾರ್ ರಾಯವಾಡೆ, ನಿರ್ದೇಶಕ ಬಸವರಾಜ್ ತೊಂಡಾರೆ, ಪುಷ್ಪಾವತಿ ಮಾಮಾ, ಬಸವೇಶ್ವರ್ ಪಿಯು ಕಾಲೇಜು ಪ್ರಾಚಾರ್ಯೆ ರುದ್ರಮಣಿ ಮಠಪತಿ, ಅಕ್ಕಮಹಾದೇವಿ ಕಾಲೇಜಿನ ಪ್ರಾಚಾರ್ಯೆ ಮಾಯಾ ಮುರಾಳೆ ಹಾಗೂ ಬಸವೇಶ್ವರ್ ಪಿಜಿ ಪ್ರಾಚಾರ್ಯೆ ಶಾಂತಲಾ ಪಾಟೀಲ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Vivekanand SajjanBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X