ಬಿ.ಎಡ್. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಬಿ.ಎಡ್. ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದ ವಿದ್ಯಾರ್ಥಿಗಳಿಗೆ 25,000 ರೂ. ಗಳ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ (National Council for Teacher Education) ದಿಂದ ಮಾನ್ಯತೆ ಪಡೆದ ಸರ್ಕಾರಿ/ಅರೆ-ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಎಲ್ಲಾ ಅವಶ್ಯಕ ದಾಖಲೆಗಳೊಂದಿಗೆ 2026ರ ಡಿಸೆಂಬರ್ 12 ರೊಳಗಾಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಳಂದ ಮೊಬೈಲ್ ಸಂಖ್ಯೆ 9686848376, ಅಫಜಲಪೂರ-9742305668, ಚಿಂಚೋಳಿ-8971524009, ಸೇಡಂ-9886786180, ಚಿತ್ತಾಪೂರ-9972554852, ಜೇವರ್ಗಿ-9845036156 ಹಾಗೂ ಕಲಬುರಗಿ-9742305668 ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಲಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260 ಗೆ ಸಂಪರ್ಕಿಸಲು ಕೋರಲಾಗಿದೆ.




