Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬರ ಘೋಷಣೆಗೆ ಆಗ್ರಹಿಸಿ ನಡೆದ...

ಬರ ಘೋಷಣೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ಗೂಂಡಾಗಿರಿ ಖಂಡನೀಯ: ಕೆ.ನೀಲಾ

ವಾರ್ತಾಭಾರತಿವಾರ್ತಾಭಾರತಿ3 Sept 2026 1:24 PM IST
share
ಬರ ಘೋಷಣೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ಗೂಂಡಾಗಿರಿ ಖಂಡನೀಯ: ಕೆ.ನೀಲಾ

ಕಲಬುರಗಿ: ಬರಪೀಡಿತ ಪ್ರದೇಶ ಘೋಷಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಮುಖಂಡರು ನಾಗರಿಕರೊಂದಿಗೆ ಅನುಚಿತವಾಗಿ ವರ್ತಿಸಿ, ದಾಂಧಲೆ ಹಾಗೂ ಹಿಂಸಾತ್ಮಕ ರೀತಿಯಲ್ಲಿ ನಡೆದುಕೊಂಡಿರುವುದು ಖಂಡನೀಯ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಬಿಜೆಪಿ ನಾಯಕರು ಪ್ರತಿಭಟನೆಯ ಹೆಸರಿನಲ್ಲಿ ಶಾಂತಿ ಕದಡುವ ಹಾಗೂ ಗಲಭೆಯ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ ಸಂದರ್ಭದಲ್ಲಿ ನಾಗರಿಕರೊಂದಿಗೆ ಅನಾಗರಿಕವಾಗಿ ವರ್ತಿಸಲಾಗಿದೆ. ವಾಹನ ಸವಾರರ ಹೆಲ್ಮೆಟ್ ಕಿತ್ತುಕೊಂಡು ಒಡೆದು ಹಾಕಲಾಗಿದೆ. ಆಟೋ ಚಾಲಕರನ್ನು ನಿಂದಿಸಿ ವಾಹನದ ಕೀ ಕಿತ್ತುಕೊಳ್ಳಲಾಗಿದೆ. ಮತ್ತೊಂದು ವಾಹನದ ಟೈರ್‌ನ ಗಾಳಿ ತೆಗೆದಿರುವುದಲ್ಲದೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಅವರತ್ತ ನೀರಿನ ಬಾಟಲ್ ಎಸೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇಂತಹ ಘಟನೆಗಳು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿವೆ. ಜನರ ಸಮಸ್ಯೆಗಳ ಕುರಿತು ಶಾಂತಿಯುತವಾಗಿ ಹೋರಾಟ ನಡೆಸುವ ಬದಲು ನಾಗರಿಕರಿಗೆ ತೊಂದರೆ ನೀಡುವುದು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಕೆ. ನೀಲಾ ತಿಳಿಸಿದ್ದಾರೆ.

ಬರಪೀಡಿತ ಜಿಲ್ಲೆ ಘೋಷಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳೂ ಪ್ರಮುಖವಾಗಿವೆ ಎಂಬುದು ಬಿಜೆಪಿಯ ನಾಯಕರಿಗೂ ತಿಳಿದಿದೆ. ಆದರೂ ತಮ್ಮದೇ ಕೇಂದ್ರ ಸರ್ಕಾರದ ಜವಾಬ್ದಾರಿಗಳ ಬಗ್ಗೆ ಮಾತನಾಡದೆ, ಜನರ ಸಂಕಷ್ಟವನ್ನು ರಾಜಕೀಯವಾಗಿ ಬಳಸಿಕೊಂಡು ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಜನರ ಹಸಿವು, ಬಡತನ ಹಾಗೂ ಸಂಕಷ್ಟವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ಜನರನ್ನು ಹಿಂಸೆಯತ್ತ ಹಾಗೂ ಕೋಮು ಪ್ರಚೋದನೆಯತ್ತ ಕೊಂಡೊಯ್ಯುವ ಪ್ರವೃತ್ತಿ ಖಂಡನೀಯ. ಶಾಂತಿ, ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಬೇಕಾದ ಚುನಾಯಿತ ಪ್ರತಿನಿಧಿಗಳೇ ಹಿಂಸಾತ್ಮಕ ರೀತಿಯಲ್ಲಿ ನಡೆದುಕೊಂಡಿರುವುದು ಆತಂಕಕಾರಿ,” ಎಂದು ಕೆ. ನೀಲಾ ಹೇಳಿದ್ದಾರೆ.

Tags

BJPleadershooliganismprotestdroughtK. Neela
share
ವಾರ್ತಾಭಾರತಿ
ವಾರ್ತಾಭಾರತಿ
Next Story
X