Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಛಲವಾದಿ ನಾರಾಯಣಸ್ವಾಮಿಗೆ...

ಕಲಬುರಗಿ | ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ ಖಂಡಿಸಿ ಮೇ.24ರಂದು ಬಿಜೆಪಿಯಿಂದ ಪ್ರತಿಭಟನೆ: ಎನ್.ರವಿಕುಮಾರ್

ವಾರ್ತಾಭಾರತಿವಾರ್ತಾಭಾರತಿ23 May 2025 5:46 PM IST
share
ಕಲಬುರಗಿ | ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ ಖಂಡಿಸಿ ಮೇ.24ರಂದು ಬಿಜೆಪಿಯಿಂದ  ಪ್ರತಿಭಟನೆ: ಎನ್.ರವಿಕುಮಾರ್

ಕಲಬುರಗಿ : ಚಿತ್ತಾಪುರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಪ್ರವಾಸಿ ಮಂದಿರದಲ್ಲಿ 5 ಗಂಟೆಗಳ ಕಾಲ ದಿಗ್ಬಂಧನ ಮಾಡಿರುವ ಘಟನೆಯನ್ನು ಖಂಡಿಸಿ ಮೇ. 24ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್.ರವಿಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಮಾತನಾಡಿರುವ ನೆಪವನ್ನು ಇಟ್ಟುಕೊಂಡು ಛಲವಾದಿ ನಾರಾಯಣಸ್ವಾಮಿ ಅವರಿಗೆ ದಿಗ್ಬಂಧನ ಮಾಡಿರುವುದು ಖಂಡನಾರ್ಹ. ಇದು ಇಡೀ ರಾಜ್ಯವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಯಾವ ತಪ್ಪಿಗೆ ಈ ಶಿಕ್ಷೆ ? ಚಿತ್ತಾಪೂರಕ್ಕೆ ಹೋಗಿ ತಿರಂಗಾ ಯಾತ್ರೆ ಮಾಡಬಾರದ? ಅಲ್ಲಿ ಭಾಷಣ ಮಾಡಬಾರದಾ? ಈ ಕೃತ್ಯ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮುಖಂಡ ಅಂಬಾರಾಯ ಅಷ್ಟಗಿ, ಶಿವಾ ಅಷ್ಟಗಿ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ, ಈ ತರಹದ ಗೂಂಡಾ ವರ್ತನೆಗಳು ಬಿಜೆಪಿ ಮುಖಂಡರ ವಿರುದ್ಧ ಮಾಡುತ್ತಿರುವುದು ಸರಿಯಲ್ಲ. ಈ ಸಚಿವ ಸ್ಥಾನ ಶಾಶ್ವತ ಇಲ್ಲ. ಒಂದಲ್ಲ ಒಂದು ದಿನ ಬದಲಾಗಲಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದ್ದರೆ, ಛಲವಾದಿ ನಾರಾಯಣಸ್ವಾಮಿ ಅವರಿಗೆ ಅಪಮಾನ ಮಾಡುವುದಲ್ಲದೆ, ಕಲಬುರಗಿ ಜಿಲ್ಲೆಯ ಗೂಂಡಾ ರಾಜ್ಯವನ್ನಾಗಿ ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು. ದಿಗ್ಬಂಧನಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳಾದ ಮಹೇಶ್ ಮೇಘನ್ನನವರ್, ಶಂಕರಗೌಡ ಪಾಟೀಲ್, ಚಂದ್ರಶೇಖರ್ ತಿಗಡಿ ಸೇರಿದಂತೆ ಇತರ ಅಧಿಕಾರಿಗಳನ್ನು ವಜಾ ಮಾಡಬೇಕು ಹಾಗೂ ನಮ್ಮ ಕಾರ್ಯಕರ್ತರ ಮೇಲೆ ಹಾಕಿರುವ ಕೇಸ್‌ಗಳನ್ನು ವಾಪಸ್ ಪಡೆಯುವುದು ಸೇರಿದಂತೆ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ರವಿಕುಮಾರ್ ಆಗ್ರಹಿಸಿದರು.

ಪ್ರಮುಖ ಬೇಡಿಕೆಗಳನ್ನು ಈಡೇರಿಸುವವರೆಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಲಿರುವ ಧರಣಿ ಸತ್ಯಾಗ್ರಹವನ್ನು ಕೈ ಬಿಡುವುದಿಲ್ಲ. ಈಗಾಗಲೇ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ರಾಜ್ಯಪಾಲರು, ಡಿಐಜಿ ಸೇರಿದಂತೆ ಹಲವರಿಗೆ ಮನವಿ ಪತ್ರ ಬರೆದಿದ್ದೇವೆ. ಶನಿವಾರ ನಡೆಯಲಿರುವ ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಟಿ ರವಿ ಸೇರಿದಂತೆ ಹಲವು ನಾಯಕರುಗಳು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಶಾಸಕ ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಶಶೀಲ್ ನಮೋಶಿ, ಚಂದು ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ಸುಭಾಷ್ ಗುತ್ತೇದಾರ್, ಅಮರನಾಥ್ ಪಾಟೀಲ್, ಶಿವರಾಜ್ ರದ್ದೇವಾಡಗಿ, ನಿತಿನ್ ಗುತ್ತೇದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X