ಕಲಬುರಗಿ| ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಕಲಬುರಗಿ: ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದನ್ನು ಖಂಡಿಸುತ್ತೇವೆ, ತಪ್ಪಿತಸ್ಥರ ವಿರುದ್ಧ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಜೀವಂತ ಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶಾಸಕ ಅವಿನಾಶ್ ಜಾಧವ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಹರ್ಷನಂದಾ ಗುತ್ತೇದಾರ್, ನಿತೀನ್ ಗುತ್ತೇದಾರ್, ಮಹಾದೇವ ಬೆಳಮಗಿ, ಉಮೇಶ್ ಪಾಟೀಲ್, ಶಿವಯೋಗಿ ನಾಗನಹಳ್ಳಿ, ಸಂತೋಷಿರಾಣಿ ಪಾಟೀಲ್ ತೆಲ್ಕೂರ, ಸಂತೋಷ್ ಹಾದಿಮನಿ, ಜಯಶ್ರೀ ಮತ್ತಿಮೂಡ, ಚಂದಮ್ಮ ಪಾಟೀಲ್, ಸುಧಾ ಹಾಲಕಾಯಿ, ಸವಿತಾ ಪಾಟೀಲ್, ಭಾಗ್ಯ ಭಾಗೋಡಿ, ಸಾವಿತ್ರಿಬಾಯಿ ಕುಳಗೇರಿ, ಅಂಬಾರಾಯ್ ಅಷ್ಟಗಿ, ಬಾಬುರಾವ್ ಹಾಗರಗುಂಡಗಿ, ವಿಶಾಲ ದರ್ಗಿ, ಶಿವರಾಜ್ ಪಾಟೀಲ್ ರದ್ದೇವಾಡಗಿ, ಶಿವ ಅಷ್ಟಗಿ, ಗೌರಿ ಚಿಚಕೋಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.







