Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೋಲಿನ ಹತಾಶೆಯಿಂದ ರಾಜ್ಯದ ಜನತೆಯ...

ಸೋಲಿನ ಹತಾಶೆಯಿಂದ ರಾಜ್ಯದ ಜನತೆಯ ವಿರುದ್ಧ ಬಿಜೆಪಿ ಸೇಡು: ಡಾ.ಶರಣಪ್ರಕಾಶ್ ಪಾಟೀಲ್

"ಎಚ್.ಡಿ. ಕುಮಾರಸ್ವಾಮಿಯರವನ್ನು ಛೂ ಬಿಟ್ಟಿದ್ದಾರೆ''

ವಾರ್ತಾಭಾರತಿವಾರ್ತಾಭಾರತಿ17 Oct 2026 1:23 PM IST
share
ಸೋಲಿನ ಹತಾಶೆಯಿಂದ ರಾಜ್ಯದ ಜನತೆಯ ವಿರುದ್ಧ ಬಿಜೆಪಿ ಸೇಡು: ಡಾ.ಶರಣಪ್ರಕಾಶ್ ಪಾಟೀಲ್

ಕಲಬುರಗಿ: "ಚುನಾವಣೆಗಳಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, ಹೀನಾಯ ಸೋಲನ್ನು ಅರಗಿಸಿಕೊಳ್ಳಲಾಗದೆ ಕರ್ನಾಟಕದ ಜನರ ವಿರುದ್ಧ ಸೇಡು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಹೀಗಾಗಿಯೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರನ್ನು ಛೂ ಬಿಡಲಾಗುತ್ತಿದೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಕುಮಾರಸ್ವಾಮಿ ತಮ್ಮ ಕೆಲಸಗಳನ್ನು ಬದಿಗಿಟ್ಟು ರಾಜ್ಯದ ಮುಖ್ಯಮಂತ್ರಿ ವಿರುದ್ಧ ಮಾತನಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ತಾವೇ ಮುಖ್ಯಮಂತ್ರಿಯಾಗಬೇಕೆಂಬ ಹತಾಶೆ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ ಎಂದು ಟೀಕಿಸಿದರು.

ಸ್ಟಿಂಗ್ ಆಪರೇಷನ್ ಹಾಗೂ ಯುವಕರ ಪ್ರತಿಭಟನೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗಳು ಖಂಡನೀಯ. ಕಾರ್ಯಕರ್ತರಿಗೆ ನೋಟಿಸ್ ನೀಡಿದ ಮಾತ್ರಕ್ಕೆ ಸಿಎಂ ಹಾಗೂ ಗೃಹಸಚಿವರ ವಿರುದ್ಧ ಬೇಕಾಬಿಟ್ಟಿಯಾಗಿ ಮಾತನಾಡುವುದು ಸರಿಯಲ್ಲ. ಕರ್ನಾಟಕದ ಜನರು, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಜನರು ಯಾರಿಗೂ ಹೆದರುವುದಿಲ್ಲ, ಯಾರ ಮುಂದೆ ಬಗ್ಗುವುದೂ ಇಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪರೀಕ್ಷೆಗಳಲ್ಲಿ ಪಾರದರ್ಶಕತೆ ಇರಬೇಕೆಂದು ಪ್ರಶ್ನಿಸುವುದು ಹಾಗೂ ತಪ್ಪನ್ನು ತಪ್ಪೆಂದು ಹೇಳುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಹಕ್ಕು. ಯುವಕರು ತಮ್ಮ ಭವಿಷ್ಯಕ್ಕಾಗಿ ಹೋರಾಟ ನಡೆಸುತ್ತಿದ್ದು, ಅವರ ಪ್ರತಿಭಟನೆಗೆ ರಾಜಕೀಯ ಬಣ್ಣ ಹಚ್ಚಿ ದೇಶದ್ರೋಹಿಗಳೆಂದು ಕರೆಯುವುದು ಸರಿಯಲ್ಲ. ಉದ್ಯೋಗಕ್ಕಾಗಿ ಯುವಕರು ಬೀದಿಗಿಳಿದು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಅವರ ಧ್ವನಿಯನ್ನು ಆಲಿಸುವ ಬದಲು ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ ಎಂದರು.

ಸಿಜೆಪಿ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ನವರು ಅವರ ಹೋರಾಟದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯುವಕರಿಗೆ ಉದ್ಯೋಗ ಒದಗಿಸುವುದು ಸರ್ಕಾರಗಳ ಆದ್ಯತೆಯಾಗಬೇಕು. ಆದರೆ, ನಿರುದ್ಯೋಗದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಹೋರಾಟಗಾರರನ್ನು ಗುರಿಯಾಗಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ರೈತರ ಪರಿಹಾರ ನೀಡಲು ಕೇಂದ್ರ ವಿಳಂಬ:

ರಾಜ್ಯ ಸರ್ಕಾರ ರೈತರ ಪರವಾಗಿ ನಿಂತಿದೆ. ಬರಗಾಲ ಎದುರಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬರಬೇಕಿತ್ತು. ಆದರೆ, ಕಳೆದ ಸಲ ರಾಜ್ಯಕ್ಕೆ ಬರಬೇಕಿದ್ದ ಬರ ಪರಿಹಾರವನ್ನು ಸಕಾಲದಲ್ಲಿ ನೀಡಲಿಲ್ಲ. ಈ ಸಂಬಂಧ ರಾಜ್ಯ ಸರ್ಕಾರ ನ್ಯಾಯಾಲಯದ ಮೊರೆ ಹೋದಾಗ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದ ಬಳಿಕವೇ ಪರಿಹಾರ ನೀಡಲಾಯಿತು ಎಂದು ಹೇಳಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ತುಘಲಕ್ ಸರ್ಕಾರದಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು.

ರಾಜ್ಯದ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳಿಗೂ ಕೇಂದ್ರದಿಂದ ಬರಬೇಕಾದ ಅನುದಾನ ಸಮರ್ಪಕವಾಗಿ ಬರುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಸಚಿವರು ವಾಗ್ದಾಳಿ ನಡೆಸಿದರು.

ಭೀಮಾ ನದಿಗೆ 15 ಟಿಎಂಸಿ ನೀರು ಹರಿಸುವ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಸಂಬಂಧ ನೀರಾವರಿ ಇಲಾಖೆಯೊಂದಿಗೆ ಚರ್ಚೆ ಮುಂದುವರಿದಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕಾಂಗ್ರೆಸ್ ಸಂಸದರಿಗೆ ಮಾತ್ರವಲ್ಲ, ಬಿಜೆಪಿ ಸಂಸದರ ಮನವಿಗಳಿಗೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಶರಣಪ್ಪ ಮಟ್ಟೂರ ಪರ ಮತ ಚಲಾಯಿಸಲು ಮನವಿ:

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಪರ ಮತ ಚಲಾಯಿಸುವಂತೆ ಸಚಿವರು ಮನವಿ ಮಾಡಿದರು.

ಅಕ್ಟೋಬರ್ 18ರಂದು ಬೆಳಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ವಿಭಾಗೀಯ ಮಟ್ಟದ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಶಾಸಕರು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಈ ಹಿಂದೆ ಎಂಎಲ್ ಸಿಯಾಗಿದ್ದ ಸಂದರ್ಭದಲ್ಲಿ ಶಿಕ್ಷಕರ ಹಲವು ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದ್ದಾರೆ. ಹೀಗಾಗಿ ಶಿಕ್ಷಕರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಶಿಕ್ಷಕರ ವಿಭಾಗದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡ ಶರಣಪ್ಪ ಮಟ್ಟೂರ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಪಕ್ಷದ ಮುಖಂಡರ ಮನವೊಲಿಕೆಯ ಬಳಿಕ ಅವರು ಅಭ್ಯರ್ಥಿಯ ಪರವಾಗಿ ಕೆಲಸ ಮಾಡಲು ಮುಂದಾಗಿದ್ದಾರೆ ಎಂದರು.

ಕಾಂಗ್ರೆಸ್ ಶಿಕ್ಷಕರ ವಿಭಾಗದ ರಾಜ್ಯ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉಂಟಾದ ಗೊಂದಲಗಳು ಹಾಗೂ ಶಿಕ್ಷಕರ ಸಮಸ್ಯೆಗಳ ಕುರಿತು ಪಕ್ಷದ ಗಮನ ಸೆಳೆದಿದ್ದೆ. ಸಮಸ್ಯೆಗಳು ಬಗೆಹರಿಯದ ಹಿನ್ನೆಲೆಯಲ್ಲಿ ಮನನೊಂದು ರಾಜೀನಾಮೆ ನೀಡುವುದಾಗಿ ತಿಳಿಸಿದ್ದೆ. ಆದರೆ, ನನ್ನ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ ಎಂದು ಹೇಳಿದರು.

ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ಸಂಸದ ರಾಧಾಕೃಷ್ಣ ದೊಡ್ಡಮನಿ ನನ್ನೊಂದಿಗೆ ಚರ್ಚಿಸಿ, ರಾಜೀನಾಮೆ ನೀಡದಂತೆ ಮನವೊಲಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಒತ್ತಾಯದ ಮೇರೆಗೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದರು.

ಈ ಹಿಂದೆ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಕರ ಬೇಡಿಕೆಗಳ ಕುರಿತು ಕ್ರಮ ಕೈಗೊಂಡಿದ್ದರು. ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸ್ಪಂದಿಸಿತ್ತು. ಹೀಗಾಗಿ ಈಗ ಪಕ್ಷದ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಲು ಕೇಂದ್ರ ಸರ್ಕಾರದಿಂದಲೂ ಹಣಕಾಸಿನ ನೆರವು ಅಗತ್ಯವಿದ್ದು, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್)ಯಿಂದ ಒಪಿಎಸ್ಗೆ ಬದಲಾವಣೆ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪಾಟೀಲ, ಎಂಎಲ್ಸಿಗಳಾದ ಜಗದೇವ ಗುತ್ತೇದಾರ್, ಚಂದ್ರಶೇಖರ್ ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿರಣ್ ದೇಶಮುಖ, ತಿಮ್ಮಯ್ಯ ಪುರ್ಲೆ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಶಿವಾನಂದ ಪಾಟೀಲ ಮರ್ತೂರ, ರೇಣುಕಾ ಸಿಂಗೆ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags

Sharan Prakash PatilKalburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X