Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಭಿವೃದ್ಧಿಗೆ ಹಣವಿಲ್ಲ ಎಂಬ ಬಿಜೆಪಿ ಆರೋಪ...

ಅಭಿವೃದ್ಧಿಗೆ ಹಣವಿಲ್ಲ ಎಂಬ ಬಿಜೆಪಿ ಆರೋಪ ಸುಳ್ಳು: ಸಚಿವ ಬಸವರಾಜ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ7 Nov 2026 6:47 PM IST
share
ಅಭಿವೃದ್ಧಿಗೆ ಹಣವಿಲ್ಲ ಎಂಬ ಬಿಜೆಪಿ ಆರೋಪ ಸುಳ್ಳು: ಸಚಿವ ಬಸವರಾಜ ರಾಯರೆಡ್ಡಿ

ಕಲಬುರಗಿ: ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಬಿಜೆಪಿ ನಾಯಕರ ಆರೋಪಗಳು ಸಂಪೂರ್ಣ ಸುಳ್ಳು. ಗ್ಯಾರಂಟಿ ಯೋಜನೆಗಳ ಜತೆಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೂ ಅಗತ್ಯವಿರುವಷ್ಟು ಅನುದಾನ ಸರ್ಕಾರದ ಬಳಿ ಇದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

ಶನಿವಾರ ಆಳಂದ ಪಟ್ಟಣದ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಅಡಿಗಲ್ಲು ನೆರವೇರಿಸಿ, ಜಂಟಿ ಕಾಲೇಜುಗಳ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ 4.48 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 55 ಸಾವಿರ ಕೋಟಿ ರೂ. (ಶೇ.11.6) ಮೀಸಲಿಡಲಾಗಿದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಖಾಲಿ ಇರುವ 800 ಹುದ್ದೆಗಳು, ವಿಶ್ವವಿದ್ಯಾಲಯಗಳ 1,000 ಪ್ರಾಧ್ಯಾಪಕರ ಹುದ್ದೆಗಳು ಹಾಗೂ 320 ಪ್ರಾಂಶುಪಾಲರ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಪ್ರಮುಖ ಅಭಿವೃದ್ಧಿ ಕಾರ್ಯಗಳು ನಡೆದಿರಲಿಲ್ಲ. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳು, ಪಾಲಿಟೆಕ್ನಿಕ್ ಕಾಲೇಜುಗಳು, ವಸತಿ ನಿಲಯಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸರ್ಕಾರದ ಆರ್ಥಿಕ ಸ್ಥಿತಿಯ ಕುರಿತು ವಿರೋಧ ಪಕ್ಷಗಳು ಮಾಡುತ್ತಿರುವ ರಾಜಕೀಯ ಪ್ರೇರಿತ ಆರೋಪಗಳನ್ನು ಜನರು ನಂಬಬಾರದು ಎಂದರು.

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಮಾತನಾಡಿ, ಸರ್ಕಾರದ ಬದ್ಧತೆಯಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ 5,000 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಸಂವಿಧಾನದ 371(ಜೆ) ವಿಧಿಯ ಅನುಷ್ಠಾನದಿಂದ ಈ ಭಾಗದ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ ಎಂದರು.

ಆಳಂದ ತಾಲೂಕಿನಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ನೂತನ ಕಟ್ಟಡಗಳನ್ನು ನಿರ್ಮಿಸಿ ಉದ್ಘಾಟಿಸಲಾಗಿದೆ. ಹಳೆಯ ಕಟ್ಟಡಗಳ ದುರಸ್ತಿಯ ಜತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Tags

Basavaraj RayareddyBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X