Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ ಪ್ರಜಾಸೌಧ ಕಾಮಗಾರಿಗೆ 5 ಕೋಟಿ...

ಅಫಜಲಪುರ ಪ್ರಜಾಸೌಧ ಕಾಮಗಾರಿಗೆ 5 ಕೋಟಿ ರೂ. ಹೆಚ್ಚುವರಿ ಅನುದಾನ: ಸಚಿವ ಸಂಪುಟ ಅನುಮೋದನೆ

15 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳಿಸಲು ಕ್ರಮ: ಪ್ರಿಯಾಂಕ್ ಖರ್ಗೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ20 Nov 2026 6:48 PM IST
share
ಅಫಜಲಪುರ ಪ್ರಜಾಸೌಧ ಕಾಮಗಾರಿಗೆ 5 ಕೋಟಿ ರೂ. ಹೆಚ್ಚುವರಿ ಅನುದಾನ: ಸಚಿವ ಸಂಪುಟ ಅನುಮೋದನೆ

ಕಲಬುರಗಿ : ಅಫಜಲಪುರ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಪ್ರಜಾಸೌಧ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು 5 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ತಾಲ್ಲೂಕಿನ ಜನರಿಗೆ ವಿವಿಧ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಪ್ರಜಾಸೌಧ ಕಟ್ಟಡ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. 2022ರ ಜನವರಿ 25ರಂದು ಸರ್ಕಾರವು 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು.

ಆದರೆ, ಅನುದಾನದ ಕೊರತೆಯಿಂದಾಗಿ ಆರಂಭದಲ್ಲಿ ಅನುಮೋದಿತ ಯೋಜನೆಯಡಿ ಮೂರು ಹಂತಗಳ ಕಾಮಗಾರಿಗಳನ್ನು ಮಾತ್ರ ಗುತ್ತಿಗೆದಾರರಿಗೆ ವಹಿಸಲಾಗಿತ್ತು. ಕಟ್ಟಡದ ಎರಡನೇ ಮತ್ತು ಮೂರನೇ ಮಹಡಿಗಳ ನಿರ್ಮಾಣ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನದ ಅಗತ್ಯವಿದ್ದ ಹಿನ್ನೆಲೆಯಲ್ಲಿ ಸರ್ಕಾರ ಇದೀಗ 5 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲು ಸಮ್ಮತಿಸಿದೆ. ಇದರಿಂದ ಪ್ರಜಾಸೌಧ ಕಟ್ಟಡದ ಒಟ್ಟು ಅಂದಾಜು ವೆಚ್ಚ 15 ಕೋಟಿ ರೂ. ಗೆ ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾಸೌಧದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಕಚೇರಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಸರ್ಕಾರಿ ಸೇವೆಗಳನ್ನು ಸುಲಭವಾಗಿ ಹಾಗೂ ತ್ವರಿತವಾಗಿ ಪಡೆಯಲು ಅನುಕೂಲವಾಗಲಿದೆ. ಗ್ರಾಮೀಣ ಭಾಗದ ಜನರು ವಿವಿಧ ಇಲಾಖೆಗಳ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವುದರ ಜೊತೆಗೆ ಆಡಳಿತಾತ್ಮಕ ಕಾರ್ಯಕ್ಷಮತೆಯೂ ಹೆಚ್ಚಲಿದೆ.

ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ. ತಾಲ್ಲೂಕು ಮಟ್ಟದಲ್ಲಿ ಉತ್ತಮ ಆಡಳಿತಾತ್ಮಕ ಸೌಲಭ್ಯ ಕಲ್ಪಿಸುವ ಮೂಲಕ ಸರ್ಕಾರಿ ಸೇವೆಗಳನ್ನು ಜನಸ್ನೇಹಿಯಾಗಿ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Tags

CabinetAfzalpurPraja Soudha
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X