Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಹೊಸ ಕೈಗಾರಿಕಾ ವಸಾಹತು ಯೋಜನೆಗೆ ಸಚಿವ...

ಹೊಸ ಕೈಗಾರಿಕಾ ವಸಾಹತು ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ 200 ಕೋಟಿ ರೂ. ಅನುಮೋದನೆ: ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ ಸಿಂಗ್‌

ವಾರ್ತಾಭಾರತಿವಾರ್ತಾಭಾರತಿ9 May 2026 10:47 PM IST
share
ಹೊಸ ಕೈಗಾರಿಕಾ ವಸಾಹತು ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ 200 ಕೋಟಿ ರೂ. ಅನುಮೋದನೆ: ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ ಸಿಂಗ್‌

ಕಲಬುರಗಿ: ಯಾದಗಿರಿ ಮತ್ತು ಕಲಬುರಗಿ ಎರಡು ಜಿಲ್ಲೆಗಳಲ್ಲಿ ಒಟ್ಟು 210. 58 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ವಸಾಹತುಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಒಟ್ಟು 200.07 ಕೋಟಿ ರೂ. ಗಳ ವೆಚ್ಚದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದ್ದು ಸಚಿವ ಸಂಪುಟ ಸಭೆ ಅನುಮೋದಿಸಿದೆ ಎಂದು ಕೆಕೆಆರ್‌ಡಿಬಿ ಅದ್ಯಕ್ಷ ಡಾ.ಅಜಯ್‌ ಸಿಂಗ್‌ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (ಕೆಎಸ್‌ಎಸ್‌ಐಡಿಸಿ) ಸಹಯೋಗದಲ್ಲಿ ಬೃಹತ್ ಕೈಗಾರಿಕಾ ಚಟುವಟಿಕೆಗಳಿಗೆ ವೇಗ ನೀಡಲು ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ನಂದೂರು-ಕೆ ಬಳಿ ಸುಮಾರು 62.58 ಎಕರೆ ವಿಸ್ತೀರ್ಣದಲ್ಲಿ ಹೊಸ ಕೈಗಾರಿಕಾ ವಸಾಹತು ನಿರ್ಮಾಣವಾಗಲಿದೆ. ಇದರ ಒಟ್ಟು ಅಭಿವೃದ್ಧಿ ವೆಚ್ಚ 61.26 ಕೋಟಿ ರೂ. ಗಳಾಗಿದ್ದು, ಇದರಲ್ಲಿ ಕೆ.ಕೆ.ಆರ್.ಡಿ.ಬಿ ಮತ್ತು ಕೆ.ಎಸ್.ಎಸ್.ಐ.ಡಿ.ಸಿ ತಲಾ ಶೇ. 50 ರಷ್ಟು ಅನುದಾನವನ್ನು ಹಂಚಿಕೊಳ್ಳಲಿವೆ.

ಯೋಜನೆಯ ಪ್ರಮುಖ ಅಂಶಗಳು :

ಯಾದಗಿರಿ ಜಿಲ್ಲೆಯಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಯಾದಗಿರಿ ತಾಲ್ಲೂಕಿನಲ್ಲಿ 100 ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲಾಗುತ್ತಿದ್ದು, ಇದಕ್ಕೆ 96.25 ಕೋಟಿ ರೂ. ವೆಚ್ಚವಾಗಲಿದೆ. ಶಹಾಪುರ ತಾಲ್ಲೂಕಿನ ಹಳಿಸಾಗರ ಗ್ರಾಮದ ಬಳಿ 48 ಎಕರೆ ಪ್ರದೇಶದಲ್ಲಿ 42.56 ಕೋಟಿ ರೂ. ವೆಚ್ಚದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೊಳ್ಳಲಿದೆ.

ಈ ಯೋಜನೆಗಳಿಗೆ ಬೇಕಾಗುವ ಅಭಿವೃದ್ಧಿ ವೆಚ್ಚದಲ್ಲಿ 100 ಕೋಟಿ ರೂ.ಗಳನ್ನು ಕೆ.ಕೆ.ಆರ್.ಡಿ.ಬಿ ಭರಿಸಲಿದ್ದು, ಉಳಿದ 100.07 ಕೋಟಿ ರೂ. ಗಳನ್ನು ಕೆ.ಎಸ್.ಎಸ್.ಐ.ಡಿ.ಸಿ ಭರಿಸಲಿದೆ. 2025-26ನೇ ಸಾಲಿನ ಅಭಿವೃದ್ಧಿ ಕೆಲಸಗಳಿಗಾಗಿ ಈ ಅನುದಾನ ಮೀಸಲಿಡಲಾಗಿದೆ ಎಂದು ವಿವರಿಸಿದ್ದಾರೆ.

ಕೈಗಾರಿಕಾ ನಿವೇಶನಗಳ ಹಂಚಿಕೆಯಲ್ಲಿ ಸರ್ಕಾರದ ನಿಯಮದಂತೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಪ್ರತ್ಯೇಕವಾಗಿ ಭೂಮಿ ಮತ್ತು ಅನುದಾನವನ್ನು ಹಂಚಿಕೆ ಮಾಡಲಾಗಿದೆ. ನಿವೇಶನಗಳ ಹಂಚಿಕೆಯ ಸಂದರ್ಭದಲ್ಲಿ ಸರ್ಕಾರದ ಆದೇಶ ಸಂಖ್ಯೆ (ಸಿಐ 76, 2019 ದಿನಾಂಕ 22-11-2023) ರನ್ವಯ ಪಾರದರ್ಶಕ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದಿದ್ದಾರೆ.

ಈ ಯೋಜನೆಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದ್ದು, ಸ್ಥಳೀಯರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ನಿರೀಕ್ಷಿ ವ್ಯಕ್ತಪಡಿಸಿದ್ದಾರೆ.

Tags

Dr.Ajay SinghKKRDB
share
ವಾರ್ತಾಭಾರತಿ
ವಾರ್ತಾಭಾರತಿ
Next Story
X