Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಜಿಲ್ಲೆಯ ಎರಡು ಮಹತ್ವದ ನೀರಾವರಿ...

ಕಲಬುರಗಿ ಜಿಲ್ಲೆಯ ಎರಡು ಮಹತ್ವದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

105.20 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಒಪ್ಪಿಗೆ : ಸಚಿವ ಪ್ರಿಯಾಂಕ್‌ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ3 Sept 2026 7:58 PM IST
share
ಕಲಬುರಗಿ ಜಿಲ್ಲೆಯ ಎರಡು ಮಹತ್ವದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಮಹತ್ವದ ನೀರಾವರಿ ಹಾಗೂ ಜಲಸಂರಕ್ಷಣಾ ಯೋಜನೆಗಳಿಗೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಆಳಂದ ತಾಲೂಕಿನ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆ: ಬೋರಿ ನದಿಯಿಂದ ನೀರನ್ನು ಎತ್ತಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 12 ಕೆರೆಗಳಿಗೆ ತುಂಬಿಸುವ 56 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಗೆ 2023–24ನೇ ಸಾಲಿನಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಇದೀಗ ಯೋಜನೆಯನ್ನು ಮುಂದುವರಿಸಲು ಸಂಪುಟ ಒಪ್ಪಿಗೆ ನೀಡಿದೆ.

ಯೋಜನೆಯಡಿ 28.94 ಎಂಸಿಎಫ್‌ಟಿ ನೀರನ್ನು 12 ಕೆರೆಗಳಿಗೆ ತುಂಬಿಸಲಾಗುವುದು. ಬೋರಿ ನದಿಯಿಂದ ನೀರೆತ್ತಲು ಪಂಪಿಂಗ್ ವ್ಯವಸ್ಥೆ ನಿರ್ಮಿಸುವುದರ ಜೊತೆಗೆ ಅಗತ್ಯ ಪಂಪ್‌ಹೌಸ್, ವಿದ್ಯುತ್ ಉಪಕೇಂದ್ರ, ಪೈಪ್‌ಲೈನ್ ಹಾಗೂ ವಿತರಣಾ ಜಾಲವನ್ನು ನಿರ್ಮಿಸಲಾಗುವುದು. ಇದರಿಂದ ಆಳಂದ ತಾಲೂಕಿನ ಕೆರೆಗಳಿಗೆ ನೀರು ಲಭ್ಯವಾಗುವುದರ ಜೊತೆಗೆ ಜಲಮೂಲಗಳ ಸಮರ್ಪಕ ಬಳಕೆ ಹಾಗೂ ನೀರಾವರಿ ಸೌಲಭ್ಯಕ್ಕೆ ಉತ್ತೇಜನ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿವಿಧ ಸಣ್ಣ ನೀರಾವರಿ ಕಾಮಗಾರಿಗಳಿಗೆ 49.20 ಕೋಟಿ ರೂ.:

ಕಲಬುರಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಣ್ಣ ನೀರಾವರಿ ಹಾಗೂ ಜಲಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಲು 49.20 ಕೋಟಿ ರೂ. ಮೊತ್ತದ ಯೋಜನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ. ಯೋಜನೆಯಡಿ ವಿವಿಧ ಪ್ರದೇಶಗಳಲ್ಲಿನ ಕೆರೆಗಳು, ನಾಲಾಗಳು ಹಾಗೂ ಜಲಮೂಲಗಳ ಅಭಿವೃದ್ಧಿ, ಸರಣಿ ಚೆಕ್‌ಡ್ಯಾಂ ನಿರ್ಮಾಣ, ನಾಲಾ ಆಳಗೊಳಿಸುವಿಕೆ ಮತ್ತು ಅಗಲೀಕರಣ ಸೇರಿದಂತೆ ಜಲಸಂಗ್ರಹ ಹಾಗೂ ಅಂತರ್ಜಲ ಮರುಪೂರಣಕ್ಕೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಈ ಎರಡೂ ಯೋಜನೆಗಳ ಮೂಲಕ ಕಲಬುರಗಿ ಜಿಲ್ಲೆಯ ನೀರಾವರಿ ಮೂಲಸೌಕರ್ಯವನ್ನು ಬಲಪಡಿಸುವುದು, ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಹಾಗೂ ಕೆರೆ–ನಾಲಾಗಳ ನೀರು ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

“ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ. ನೀರಾವರಿ ಹಾಗೂ ಜಲಸಂರಕ್ಷಣೆಗೆ ಸಂಬಂಧಿಸಿದ ಎರಡು ಪ್ರಮುಖ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಜಿಲ್ಲೆಯ ರೈತರು ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ನೀರಿನ ಲಭ್ಯತೆ ಹೆಚ್ಚಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಒಟ್ಟು 105.20 ಕೋಟಿ ರೂ. ಮೊತ್ತದ ಈ ಎರಡು ಯೋಜನೆಗಳು ಕಲಬುರಗಿ ಜಿಲ್ಲೆಯ ನೀರಾವರಿ ಹಾಗೂ ಜಲಸಂರಕ್ಷಣಾ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X