Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ...

ಚಿಂಚೋಳಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ಆಚರಣೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ22 Nov 2026 6:45 PM IST
share
ಚಿಂಚೋಳಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ಆಚರಣೆ

ಚಿಂಚೋಳಿ: ರಾಜ್ಯದ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನವನ್ನು ಚಿಂಚೋಳಿ ಪಟ್ಟಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಪುರಸಭೆ ಮಾಜಿ ಅಧ್ಯಕ್ಷ ಆನಂದಕುಮಾರ ಟೈಗರ್ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣದ ಎದುರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಭಾಷ್ ವಿ. ರಾಠೋಡ್ ಹಾಗೂ ಆನಂದಕುಮಾರ ಟೈಗರ್ ಕೇಕ್ ಕತ್ತರಿಸಿ ಸಚಿವರಿಗೆ ಜನ್ಮದಿನದ ಶುಭಾಶಯ ಕೋರಿದರು. ಈ ಪ್ರಯುಕ್ತ ಸಾರ್ವಜನಿಕರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸುಭಾಷ್ ವಿ. ರಾಠೋಡ್, ಪ್ರಿಯಾಂಕ್ ಖರ್ಗೆ ಅವರು ಕಾನೂನು ಮತ್ತು ಸಂವಿಧಾನಾತ್ಮಕ ವ್ಯವಸ್ಥೆಗೆ ಗೌರವ ನೀಡುವ ಪ್ರಬುದ್ಧ ಹಾಗೂ ಆದರ್ಶ ರಾಜಕಾರಣಿಯಾಗಿದ್ದಾರೆ. ಸಮಾರಂಭಗಳಲ್ಲಿ ಹೂವಿನ ಹಾರಗಳ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ಪ್ರೋತ್ಸಾಹಿಸುತ್ತಾರೆ. ಹೀಗೆ ಸಂಗ್ರಹವಾದ ಸಾವಿರಾರು ಪುಸ್ತಕಗಳನ್ನು ಶಾಲೆಗಳಿಗೆ ವಿತರಿಸುವ ಮೂಲಕ ಸಮಾಜದಲ್ಲಿ ಪುಸ್ತಕ ಸಂಸ್ಕೃತಿ ಬೆಳೆಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಆಶೀರ್ವಾದದಿಂದ ತಮಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತಿದ್ದು, ಸಮುದಾಯದ ಹಿತದೃಷ್ಟಿಯಿಂದ ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದರು.

ಆನಂದಕುಮಾರ ಟೈಗರ್ ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರು ಪ್ರಬುದ್ಧ ಆಡಳಿತಗಾರರಾಗಿದ್ದು, ಸಮಾಜದ ಎಲ್ಲ ವರ್ಗದ ಜನರ ಹಿತಾಸಕ್ತಿಯ ಬಗ್ಗೆ ಕಾಳಜಿ ಹೊಂದಿರುವ ಜನಪರ ನಾಯಕರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಸವರಾಜ್ ಮಲಿ, ಬಾಬುರಾವ್ ಪಾಟೀಲ್, ದೀಪಕ್ ನಾಗ ಪುಣ್ಯಶೆಟ್ಟಿ, ಅಬ್ದುಲ್ ಬಾಸಿತ್, ಅಜೀತ್ ಪಾಟೀಲ್, ಆರ್. ಗಣಪತರಾವ್, ಶ್ರೀನಿವಾಸ ಬಂಡಿ, ಲಕ್ಷ್ಮಣ ಅವಂಟಿ, ಶಬ್ಬೀರ್ ಅಹ್ಮದ್, ನರಸಿಂಹಲು ಕುಂಬಾರ, ಜಗದೇವ ಗೌತಮ್, ನಾಗೇಶ ಗುಣಾಜಿ, ಖಲಿಲ್ ಪಟೇಲ್, ನರಸಮ್ಮ ಅವಂಟಿ, ಮಸೂದ್ ಸೌದಗರ್, ಅಕ್ರಂ ಪಟೇಲ್, ರವಿ ದಸ್ತಾಪುರ, ಶಂಕರ ಗುತ್ತಿ, ಸಮೀರ್ ಪಟೇಲ್, ಜಗನ್ನಾಥ ಕಟ್ಟಿ, ವಿಜಯಕುಮಾರ ಘಾಟಗೆ, ಶಶಿಕುಮಾರ ಮೈತ್ರಿ, ಕೈಲಾಸ ದೇಗಲಮಡಿ, ನಾಗಾರ್ಜುನ ಕಟ್ಟಿ, ಅನಿಲ್ ಕಟ್ಟಿ, ಮಸ್ತಾನ್ ಇಟಲಿ, ಅಹ್ಮದ್ ಬಾಗವಾನ್, ಅನ್ವರ್ ಖತೀಬ್, ಮಲ್ಲಿನಾಥ ಹೂವಿನಬಾವಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Priyank KhargeChincholi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X