Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ | ಭೂಮಿ ನೀಡಿದ ರೈತರಿಗೆ ಉದ್ಯೋಗ...

ಚಿಂಚೋಳಿ | ಭೂಮಿ ನೀಡಿದ ರೈತರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಸಿಪಿಐಎಂನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 April 2026 7:22 PM IST
share
ಚಿಂಚೋಳಿ | ಭೂಮಿ ನೀಡಿದ ರೈತರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಸಿಪಿಐಎಂನಿಂದ ಪ್ರತಿಭಟನೆ

ಚಿಂಚೋಳಿ : ತಾಲ್ಲೂಕಿನ ಚೆಟ್ಟಿನಾಡು ಸಿಮೆಂಟ್ ಕಾರ್ಖಾನೆಗೆ ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ನೀಡಿ ಈಗ ಸಂಕಷ್ಟಕ್ಕೆ ಸಿಲುಕಿರುವ ರೈತ ಕುಟುಂಬಗಳಿಗೆ ಕಾಯಂ ನೌಕರಿ ನೀಡದೆ ವಂಚಿಸುತ್ತಿರುವ ಕಂಪನಿಯ ಧೋರಣೆಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐಎಂ) ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಾರ್ಖಾನೆಯ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಮತ್ತು ಸಂತ್ರಸ್ತ ರೈತರು ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾರ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, ಭೂಮಿ ನೀಡುವ ವೇಳೆ ಪ್ರತಿ ಕುಟುಂಬದ ಒಬ್ಬರಿಗೆ ಕಾಯಂ ನೌಕರಿ ನೀಡುವ ಭರವಸೆ ನೀಡಲಾಗಿತ್ತು. ಆದರೆ ಆ ಭರವಸೆ ಇಂದಿಗೂ ಈಡೇರಿಲ್ಲ. ಸ್ಥಳೀಯ ಅರ್ಹ ಯುವಕರನ್ನು ಕಡೆಗಣಿಸಿ ಅನ್ಯ ರಾಜ್ಯದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದಲ್ಲದೆ, ಕಂಪನಿಯ ಮಧ್ಯವರ್ತಿಗಳ ಮೂಲಕ ಭೂಮಿ ಕಳೆದುಕೊಂಡ ನೈಜ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದ್ದು, ಭರವಸೆಗಳನ್ನು ಕೂಡಲೇ ಈಡೇರಿಸಬೇಕು. ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಕಲ್ಲೂರು ಗ್ರಾಮದ ಭೂಮಿ ಕಳೆದುಕೊಂಡ 17 ರೈತ ಕುಟುಂಬಗಳಿಗೆ ತಕ್ಷಣವೇ ಕಾಯಂ ನೌಕರಿ ನೀಡಬೇಕು. ಜೊತೆಗೆ ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರರಿಗೆ ಹಾಗೂ ಕಂಪನಿ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಮುಖಂಡರಾದ ಜಾಫರ್ ಮೀರಿಯಾಣ, ಪ್ರಭು ಪ್ಯಾ ರಾಬದಿ, ಜಗದೇವಿ ಚಂದನಕೇರಾ, ಹಣಮಂತರಾವ್ ದೇಶಪಾಂಡೆ, ಭೀಮಶಾ ಕೊರದಂಪಳ್ಳಿ ಸೇರಿದಂತೆ ನೂರಾರು ರೈತರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags

ChincholiCPI(M)protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X