Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ | ಜೋಡೆತ್ತಿನ ಕೃಷಿಕರಿಗೆ ಮಾಸಿಕ...

ಚಿಂಚೋಳಿ | ಜೋಡೆತ್ತಿನ ಕೃಷಿಕರಿಗೆ ಮಾಸಿಕ 11 ಸಾವಿರ ರೂ. ಪ್ರೋತ್ಸಾಹಧನಕ್ಕೆ ಆಗ್ರಹ

ರಾಜ್ಯ ಬಜೆಟ್‌ನಲ್ಲಿ ಶೇ.10ರಷ್ಟು ಅನುದಾನ ಮೀಸಲಿಡಲು ಆಗ್ರಹಿಸಿ ಎತ್ತಿನ ಬಂಡಿಗಳೊಂದಿಗೆ ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Oct 2026 8:07 PM IST
share
ಚಿಂಚೋಳಿ | ಜೋಡೆತ್ತಿನ ಕೃಷಿಕರಿಗೆ ಮಾಸಿಕ 11 ಸಾವಿರ ರೂ. ಪ್ರೋತ್ಸಾಹಧನಕ್ಕೆ ಆಗ್ರಹ

ಚಿಂಚೋಳಿ: ಜೋಡೆತ್ತಿನ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸಲು ರಾಜ್ಯ ಬಜೆಟ್‌ನಲ್ಲಿ ಶೇ. 10ರಷ್ಟು ಅನುದಾನ ಮೀಸಲಿಡುವ ಕಾನೂನು ಜಾರಿಗೆ ತರಬೇಕು ಹಾಗೂ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು 11 ಸಾವಿರ ರೂ. ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕು ಘಟಕಗಳ ನೇತೃತ್ವದಲ್ಲಿ ರೈತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂದಿ ಕೃಷಿ ಸಂಸ್ಕೃತಿಯ ಪುನಶ್ಚೇತನಕ್ಕಾಗಿ ವಿಶೇಷ ಕಾನೂನು ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯದೊಂದಿಗೆ 150ಕ್ಕೂ ಹೆಚ್ಚು ಎತ್ತಿನ ಬಂಡಿಗಳಲ್ಲಿ ಆಗಮಿಸಿದ ರೈತರು ಸರ್ಕಾರದ ಗಮನ ಸೆಳೆದರು.

ಸಂಘದ ಅಧ್ಯಕ್ಷ ವಿರಣ್ಣ ಗಂಗಾಣಿ ಮಾತನಾಡಿ, ಎತ್ತಿನ ನೇಗಿಲಿನಿಂದ ಉಳುಮೆ ಮಾಡುವ ರೈತರು ಮಣ್ಣು ಮತ್ತು ಪ್ರಕೃತಿಯ ಸಂರಕ್ಷಣೆಯೊಂದಿಗೆ ನಾಗರಿಕತೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಂತಹ ಕೃಷಿಕರನ್ನು ನೇಗಿಲಯೋಗಿಗಳು ಎಂದು ಗೌರವಿಸಬೇಕು. ಆದರೆ, ಜೋಡೆತ್ತಿನ ಕೃಷಿಯ ಮಹತ್ವವನ್ನು ನಿರ್ಲಕ್ಷಿಸುತ್ತಿರುವುದರಿಂದ ಸಾಂಪ್ರದಾಯಿಕ ಕೃಷಿ ಪದ್ಧತಿ ಅವನತಿಯತ್ತ ಸಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸ್ವಾತಂತ್ರ್ಯಪೂರ್ವದಲ್ಲಿ ಮಣ್ಣಿನ ಸರಾಸರಿ ಸಾವಯವ ಇಂಗಾಲದ ಪ್ರಮಾಣ ಶೇ. 1ರಷ್ಟಿತ್ತು. ಇದೀಗ ಅದು ಶೇ. 0.33ಕ್ಕೆ ಕುಸಿದಿದೆ. ಮಣ್ಣಿನ ಫಲವತ್ತತೆ ಹಾಗೂ ಪರಿಸರ ಸಂರಕ್ಷಣೆಗೆ ಪೂರಕವಾಗಿರುವ ನೈಸರ್ಗಿಕ ಕೃಷಿ ಪದ್ಧತಿಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಜ್ಞಾನಯೋಗಿ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಪ್ರೇರಣೆಯಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಮತ್ತು ಕೃಷಿ ಪದವೀಧರರು ಆರಂಭಿಸಿರುವ ‘ನಂದಿ ಕೂಗು’ ಅಭಿಯಾನದ ಮೂಲಕ ಕಳೆದ ಮೂರು ವರ್ಷಗಳಿಂದ ಎತ್ತಿನ ಕೃಷಿ ಸಂಸ್ಕೃತಿಯ ಉಳಿವಿಗಾಗಿ ಜನಜಾಗೃತಿ ಮೂಡಿಸಲಾಗುತ್ತಿದೆ. ಬಯಲುಸೀಮೆಯ ಗ್ರಾಮಗಳನ್ನು ಸ್ವಾವಲಂಬಿಗಳನ್ನಾಗಿಸಲು ಎಲ್ಲ ಸಮಾಜಗಳ ಜನರು ಒಗ್ಗೂಡಿ ಈ ಸಂಸ್ಕೃತಿಯ ಪುನಶ್ಚೇತನಕ್ಕೆ ಮುಂದಾಗಬೇಕು ಎಂದು ಹೇಳಿದರು.

ನಂದಿ ಕೃಷಿ ಸಂಸ್ಕೃತಿಯ ಪುನಶ್ಚೇತನಕ್ಕಾಗಿ ರಾಜ್ಯ ಬಜೆಟ್‌ನಲ್ಲಿ ಶೇ. 10ರಷ್ಟು ಅನುದಾನ ಮೀಸಲಿಡಬೇಕು. ಜೋಡೆತ್ತಿನ ಕೃಷಿಕರಿಗೆ ಮಾಸಿಕ 11 ಸಾವಿರ ರೂ. ಪ್ರೋತ್ಸಾಹಧನ ನೀಡಬೇಕು. ಇದರೊಂದಿಗೆ ನಂದಿ ವಿದ್ಯುತ್, ಗ್ಯಾಸ್, ಅಡುಗೆ ಎಣ್ಣೆ, ಔಷಧ, ಗೊಬ್ಬರ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಉತ್ತೇಜನ ನೀಡುವ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ರೈತರು ಆಗ್ರಹಿಸಿದರು.

ಜೋಡೆತ್ತಿನ ಕೃಷಿಕರ ಬದುಕು ಹಾಗೂ ಗ್ರಾಮೀಣ ಕೃಷಿ ಸಂಸ್ಕೃತಿಯನ್ನು ಉಳಿಸುವ ಉದ್ದೇಶದಿಂದ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು. ರೈತರ ಬೇಡಿಕೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಚಿಮ್ಮಾಇದಲಾಯಿ ಮಠದ ಮಹಾಂತೇಶ್ವರ ಶಿವಾಚಾರ್ಯರು, ನೀಡಗುಂದದ ಕರುಣೇಶ್ವರ ಶಿವಾಚಾರ್ಯರು, ನರನಾಳದ ಶಿವಕುಮಾರ ಶಿವಾಚಾರ್ಯರು, ಚಂದನಕೇರಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಹಾಗೂ ಸುಲೆಪೇಟದ ಪ್ರಭುದೇವರು ಉಪಸ್ಥಿತರಿದ್ದರು.

ರೈತ ಮುಖಂಡರಾದ ಗೌತಮ್ ಪಾಟೀಲ, ಗೋಪಾಲ್ ರಾವ್ ಕಟೀಮನಿ, ಸಂತೋಷ್ ಗಂಡಂತಿ, ರೇವಣಸಿದ್ದಪ್ಪ ಅರಣಕಲ್, ಹಣಮಂತ ಪೂಜಾರಿ, ಕೆ.ಎಂ. ಬಾರೀ, ಅಮರ್ ಲೋಡನೂರ, ಶಂಕರ್ ಅಲಾಪುರ, ಎಂ.ಪಿ. ಗೋಪಾಲ್, ರಾಮರೆಡ್ಡಿ ಪಾಟೀಲ, ಶರಣಪ್ಪ ಹಲಚೇರಿ, ವೀರೇಶ್ ಎಂಪಳ್ಳಿ, ಲೋಕೇಶ್ ಶೇಳಿಗಿ ಸೇರಿದಂತೆ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ರೈತರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags

farmersChincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X