Chincholi | ಸುಲೇಪಟ್ನಲ್ಲಿ ಪಟಾಕಿ ಅಂಗಡಿಗೆ ಬೆಂಕಿ: ಅಂಗಡಿ ಸಂಪೂರ್ಣ ಭಸ್ಮ, ಅಕ್ಕಪಕ್ಕದ ಅಂಗಡಿಗಳಿಗೂ ಹಾನಿ

ಚಿಂಚೋಳಿ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ರಸ್ತೆ ಬದಿಯಲ್ಲಿ ತೆರೆಯಲಾಗಿದ್ದ ಪಟಾಕಿ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಚಿಂಚೋಳಿ ತಾಲೂಕಿನ ಸುಲೇಪಟ್ನಲ್ಲಿ ನಡೆದಿದೆ.
ಸುಲೇಪಟ್ನ ಬಸವೇಶ್ವರ ವೃತ್ತದಲ್ಲಿ ಸಿದ್ದ ಸೀರಿ ಬ್ಯಾಂಕ್ ಎದುರು ದೀಪಾವಳಿ ಹಬ್ಬದ ನಿಮಿತ್ತ ಪಟಾಕಿ ಮಾರಾಟಕ್ಕಾಗಿ ತೆರೆಯಲಾಗಿದ್ದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಅಂಗಡಿಯಲ್ಲಿದ್ದ ಪಟಾಕಿಗಳು ಸ್ಫೋಟಗೊಂಡಿದ್ದು, ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಇದರಿಂದ ಸಮೀಪದ ಅಂಗಡಿಗಳಿಗೂ ಹಾನಿಯಾಗಿದೆ.
ಅಂಗಡಿಯ ಸಮೀಪ ನಿಲ್ಲಿಸಲಾಗಿದ್ದ ಆಟೊ ರಿಕ್ಷಾ ಹಾಗೂ ಬೈಕ್ಗಳ ಟೈರ್ಗಳಿಗೂ ಬೆಂಕಿ ತಗುಲಿ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ಸ್ಥಳೀಯರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಸಂಭವಿಸಿದ ನಷ್ಟದ ಪ್ರಮಾಣ ಇನ್ನೂ ತಿಳಿದುಬಂದಿಲ್ಲ.
Next Story




