Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ಶಾರದಾ ಶಾಲೆಯಲ್ಲಿ ಕಲಿಕಾ...

Chincholi | ಶಾರದಾ ಶಾಲೆಯಲ್ಲಿ ಕಲಿಕಾ ಚಟುವಟಿಕೆ ಸಂಭ್ರಮ; ಮಕ್ಕಳ ಪ್ರತಿಭೆಗೆ ವೇದಿಕೆ

ವಾರ್ತಾಭಾರತಿವಾರ್ತಾಭಾರತಿ11 July 2026 6:57 PM IST
share
Chincholi | ಶಾರದಾ ಶಾಲೆಯಲ್ಲಿ ಕಲಿಕಾ ಚಟುವಟಿಕೆ ಸಂಭ್ರಮ; ಮಕ್ಕಳ ಪ್ರತಿಭೆಗೆ ವೇದಿಕೆ

ಚಿಂಚೋಳಿ : ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ತಾಲೂಕಿನ ಚಂದಾಪುರದ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ‘ಕಲಿಕಾ ಚಟುವಟಿಕೆ’ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಗೋಪಾಲ ಗಾರಂಪಳ್ಳಿ, ಪ್ರತಿಯೊಬ್ಬ ಮಗುವಿನಲ್ಲೂ ವಿಶಿಷ್ಟ ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಶಾಲೆ ಹಾಗೂ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ಇಂತಹ ಕಲಿಕಾ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಕಲಿಕಾ ಸಾಮರ್ಥ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ತಿಳಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಶಿಕ್ಷಣದ ಸಂದೇಶವನ್ನು ಉಲ್ಲೇಖಿಸಿದ ಅವರು, ಶಿಕ್ಷಣವು ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದ ಮೂಲಕ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿ ಅರುಣ ಲಾಲ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಶಕ್ತಿ ಮತ್ತು ಸಾಮರ್ಥ್ಯವನ್ನು ಹೊರತರಲು ಇಂತಹ ಶೈಕ್ಷಣಿಕ ಚಟುವಟಿಕೆಗಳು ಪೂರಕವಾಗಿವೆ. ಪಾಲಕರು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಶಾಲೆಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಕಲಿಕಾ ಚಟುವಟಿಕೆಗಳು, ಚಿತ್ರಕಲೆ, ಶೈಕ್ಷಣಿಕ ಮಾದರಿಗಳು ಹಾಗೂ ಪ್ರದರ್ಶನಗಳ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು. ಪಾಲಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳ ಸಾಧನೆಯನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಜಗದೇವಿ, ಶಾಲಾ ಆಡಳಿತ ಮಂಡಳಿ ಅಧಿಕಾರಿ ರಾಜೇಂದ್ರಪ್ರಸಾದ್, ಸಿದ್ದಿಕ, ಅಪರಂಜಿ, ಸುಷ್ಮಾ, ಕವಿತಾ, ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಪಾಲಕರು ಉಪಸ್ಥಿತರಿದ್ದರು.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X