Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ| ವಿವಿಧ ಬೇಡಿಕೆಗಳ ಈಡೇರಿಕೆಗೆ...

ಚಿಂಚೋಳಿ| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Nov 2026 7:26 PM IST
share
ಚಿಂಚೋಳಿ| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಚಿಂಚೋಳಿ : ಕುಡಿಯುವ ನೀರಿನ ಸಮಸ್ಯೆ, ಬರಗಾಲದ ಸಂಕಷ್ಟ ಹಾಗೂ ಕಬ್ಬು ಕಟಾವಿನ ಅನಿಶ್ಚಿತತೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಮಿರಿಯಾಣ ಗ್ರಾಮದಲ್ಲಿ ತಾಂಡೂರು ಮುಖ್ಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ರೈತ ಮುಖಂಡ ಶರಣಬಸ್ಸಪ್ಪ ಮಮಶೆಟ್ಟಿ ಮಾತನಾಡಿ, ಗ್ರಾಮದಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿ ಕಳಪೆಯಾಗಿದ್ದು, ಪೈಪ್‌ಗಳು ಒಡೆದು ನೀರು ಪೂರೈಕೆ ಸ್ಥಗಿತಗೊಂಡಿದೆ. ಸಿಸಿ ರಸ್ತೆಗಳನ್ನು ಅಗೆದು ಹಾಳು ಮಾಡಿರುವುದರಿಂದ ಸಾರ್ವಜನಿಕರ ಸಂಚಾರಕ್ಕೂ ತೊಂದರೆಯಾಗಿದೆ. ಒಡೆದ ಪೈಪ್‌ಗಳನ್ನು ದುರಸ್ತಿಗೊಳಿಸಿ ಸಮರ್ಪಕ ನೀರು ಪೂರೈಸಬೇಕು ಹಾಗೂ ಕಾಲುವೆಯ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಚಿಂಚೋಳಿ ತಾಲೂಕಿನಲ್ಲಿ ಸುಮಾರು 2,500 ಹೆಕ್ಟೇರ್ ಹಾಗೂ ಕಾಳಗಿ ತಾಲೂಕಿನಲ್ಲಿ 650 ರಿಂದ 700 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ. ಅನಾವೃಷ್ಟಿಯಿಂದ ಬಾವಿ, ಕೊಳವೆ ಬಾವಿಗಳು ಬತ್ತಿ ಕಬ್ಬು ಒಣಗುತ್ತಿದ್ದು, ಕಟಾವಿಗೆ ಬಂದ ಬೆಳೆಯನ್ನು ಉಳಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದಸಿರಿ ಎಥನಾಲ್ ಕಾರ್ಖಾನೆಯನ್ನೇ ನಂಬಿ ಕಬ್ಬು ಬೆಳೆದ ರೈತರು ಕಾರ್ಖಾನೆ ಆರಂಭದ ಅನಿಶ್ಚಿತತೆಯಿಂದ ಆತಂಕಕ್ಕೀಡಾಗಿದ್ದಾರೆ. ಕೇಂದ್ರ ಸರಕಾರ ತನ್ನ ಎಥನಾಲ್ ನೀತಿಯನ್ನು ಮರುಪರಿಶೀಲಿಸಿ ಕಾರ್ಖಾನೆ ಆರಂಭಕ್ಕೆ ಅವಕಾಶ ಕಲ್ಪಿಸಬೇಕು. ಕಾರ್ಖಾನೆ ಕಾರ್ಯಾರಂಭವಾಗುವವರೆಗೆ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಕಬ್ಬನ್ನು ಜಿಲ್ಲೆಯ ಇತರೆ ಸಕ್ಕರೆ ಕಾರ್ಖಾನೆಗಳಿಗೆ ಗ್ರಾಮವಾರು ಹಂಚಿಕೆ ಮಾಡಿ, ವೈಜ್ಞಾನಿಕ ದರ ನಿಗದಿಪಡಿಸಿ ತಕ್ಷಣ ಕಟಾವಿಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಇದಲ್ಲದೆ ಬರ ಪರಿಹಾರ, ಸಾಲ ಮನ್ನಾ, ಬೆಳೆ ನಷ್ಟ ಪರಿಹಾರ, ಬಾಕಿ ಬೆಳೆ ವಿಮೆ ಪಾವತಿ, ವಿಬಿಜಿ ಗ್ರಾಮೀಣ ಉದ್ಯೋಗ ಯೋಜನೆಯ ಸಮರ್ಪಕ ಜಾರಿ ಹಾಗೂ ಬಾಕಿ ವೇತನ ಬಿಡುಗಡೆಗೂ ಒತ್ತಾಯಿಸಿದರು, ಬಳಿಕ ಉಪತಹಶೀಲ್ದಾರ್ ಶಶಿಧರ್ ಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.

ರೈತ ಮುಖಂಡ ಜಾಫರ್ ಖಾನ್ ಮಿರಿಯಾಣ, ಅಂಜಿಲಪ್ಪ, ಗೌಸೋದ್ದಿನ್ ಖುರೇಶಿ, ಭೀಮಪ್ಪ ಕೊಂಡ, ಭೀಚ್ಚಪ್ಪ ಕೊಂಡ, ಶಿವ ಬುರದೊಡ್ಡಿ, ರಾಘವೇಂದ್ರ, ದೇವರಾಜ ಕಟ್ಟಿಮನಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Tags

ChincholiProtestfarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X