Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ...

ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 July 2026 7:45 PM IST
share
ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ ಹಾಗೂ ಮೂಲನಿವಾಸಿ ವಾಹನ ಚಾಲಕರ ಸಂಘದ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಚಿಂಚೋಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸ್ ಡಿಪೋ ಕ್ರಾಸ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಪ್ರತಿಭಟನಾಕಾರರು ಹೂವಿನಬಾವಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು, ಕೆಟ್ಟುಹೋಗಿರುವ ಹೈಮಾಸ್ಟ್ ವಿದ್ಯುತ್ ದೀಪಗಳನ್ನು ಬದಲಾಯಿಸಬೇಕು, ಪರಿಶಿಷ್ಟ ಜಾತಿ ಬಡಾವಣೆಗಳಿಗೆ ಪ್ರತ್ಯೇಕ ಪಂಪ್ ಆಪರೇಟರ್ ನೇಮಕ ಮಾಡಬೇಕು, ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು, ಬೀದಿ ದೀಪಗಳನ್ನು ಅಳವಡಿಸಬೇಕು ಹಾಗೂ ಶಾಲೆಗಳಿಗೆ ಹೆಚ್ಚಿನ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಗ್ರಾಮದ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಅಬಕಾರಿ ಇಲಾಖೆಗೆ ಸಲ್ಲಿಸಿದ ಮನವಿಯಲ್ಲಿ ತಾಜಲಪೂರ ಗ್ರಾಮದಲ್ಲಿ ಕೆಲವು ಕಿರಾಣಿ ಅಂಗಡಿಗಳು ಹಾಗೂ ಹೋಟೆಲ್‌ಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿದರು. ಇದರಿಂದ ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಶಾಲಾ ಮಕ್ಕಳ ಮೇಲೂ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಹಾಗೂ ತಾಜಲಪೂರ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಬಕಾರಿ ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸದಿದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾರುತಿ ಗಂಜಗಿರಿ, ಮೋಹನ್ ಐನಾಪೂರ, ಅಮರನಾಥ ಮೇತ್ರಿ, ಕಮಲಾಕರ ಕೊರವಿ, ಮಾರುತಿ ಜಾಧವ್, ಸಿದ್ದು ರಂಗನೂರು, ನೀಲಗಂಗಾ, ಶೃತಿ, ಮೈಬೂಬ್ ಸವಾರಿ, ಚಂದ ಮಾರ್ನಳ್ಳಿ, ನಯೀಂ ಪಟೇಲ್, ಮಹಾನಂದ, ರತ್ನಮ್ಮ, ಕಸ್ತೂರಿಬಾಯಿ, ಸೋನಮ್ಮ, ಮಂಜುಳ, ವೈಜಿನಾಥ, ರಂಜಿತ್, ಜಗನ್ನಾಥ್ ರೆಡ್ಡಿ, ಬಬ್ಬು ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

ChincholiProtestillegalliquor sale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X