Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ| ಸಿದ್ಧಸಿರಿ ಎಥೆನಾಲ್ ಕಾರ್ಖಾನೆ...

ಚಿಂಚೋಳಿ| ಸಿದ್ಧಸಿರಿ ಎಥೆನಾಲ್ ಕಾರ್ಖಾನೆ ಆರಂಭಕ್ಕೆ ಆಗ್ರಹಿಸಿ ಸುಲೇಪೇಟೆ ಬಂದ್ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ11 Nov 2026 10:31 PM IST
share
ಚಿಂಚೋಳಿ| ಸಿದ್ಧಸಿರಿ ಎಥೆನಾಲ್ ಕಾರ್ಖಾನೆ ಆರಂಭಕ್ಕೆ ಆಗ್ರಹಿಸಿ ಸುಲೇಪೇಟೆ ಬಂದ್ ಯಶಸ್ವಿ

ಚಿಂಚೋಳಿ: ಚಿಂಚೋಳಿ ಮತ್ತು ಕಾಳಗಿ ತಾಲ್ಲೂಕಿನ ರೈತರು ಸಿದ್ಧಸಿರಿ ಎಥೆನಾಲ್ ಕಾರ್ಖಾನೆಯನ್ನು ತಕ್ಷಣವೇ ಪುನರಾರಂಭಿಸಬೇಕು ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಬುಧವಾರ ಕರೆ ನೀಡಲಾಗಿದ್ದ 'ಸುಲೇಪೇಟೆ ಬಂದ್' ಯಶಸ್ವಿಯಾಯಿತು.

ಸುಲೇಪೇಟೆಯ ಮುಖ್ಯ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ರೈತರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆಯಿಂದಲೇ ವಿವಿಧ ಹಳ್ಳಿಗಳಿಂದ ಆಗಮಿಸಿದ ರೈತರು ಸುಲೇಪೇಟೆ ಸರ್ಕಲ್‌ನಲ್ಲಿ ಧರಣಿ ನಡೆಸಿದರು.

ಧರಣಿ ಉದ್ದೇಶಿಸಿ ಮಾತನಾಡಿದ ರೈತ ನಾಯಕ ಮಲ್ಲಿಕಾರ್ಜುನ ದೇಸಾಯಿ, ಸಿದ್ಧಸಿರಿ ಎಥೆನಾಲ್ ಕಾರ್ಖಾನೆಗೆ ತಕ್ಷಣವೇ ಕಬ್ಬು ಖರೀದಿ ಮತ್ತು ನುರಿಸಲು ಅಧಿಕೃತ ಅನುಮತಿ ನೀಡಬೇಕು. ಪ್ರತಿ ಟನ್ ಕಬ್ಬಿಗೆ ಕನಿಷ್ಠ 5,500ರೂ. ಬೆಂಬಲ ಬೆಲೆ ಹಾಗೂ ಸೂಕ್ತ FRP ದರ ನಿಗದಿಪಡಿಸಬೇಕು. ಬರಗಾಲದಿಂದ ನಷ್ಟ ಅನುಭವಿಸಿದ ರೈತರಿಗೆ ತಕ್ಷಣ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ನಾಯಕ ವೀರಣ್ಣ ಗಂಗಾಣಿ, ಸರಕಾರಗಳು ತಕ್ಷಣವೇ ಎಚ್ಚೆತ್ತುಕೊಂಡು ಕಾರ್ಖಾನೆ ಆರಂಭಕ್ಕೆ ಅನುಮತಿ ನೀಡದಿದ್ದರೆ ಮುಂಬರುವ ದಿನಗಳಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ನಿಡಗುಂದಾದ ಕಂಚಾಳಕುಂಟಿ ಕರುಣೇಶ್ವರ ಸ್ವಾಮೀಜಿ, ಚಿಮ್ಮಾ ಇದಲಾಯಿಯ ಮಹಾಂತೇಶ್ವರ ಸ್ವಾಮೀಜಿ, ಸುಲೇಪೇಟ ಖಟ್ವಾಂಗೇಶ್ವರ ಮಠದ ಪ್ರಭುದೇವರು, ಮಾರುತಿ ಗಂಜಗೇರಿ, ವೀರಣ್ಣ ಗಂಗಾಣಿ, ಮಲ್ಲಿಕಾರ್ಜುನ ದೇಸಾಯಿ, ಮಲ್ಲು ರಾಯಪಗೊಳ, ರವಿ ರಾಠೋಡ, ಮಶಾಕ ಸಾಬ್, ಶಿವರಾಮ ರಾಠೋಡ, ಪ್ರಕಾಶ ಸಜ್ಜನ, ಜಗನ್ನಾಥ ದಸ್ತಾಪುರ, ಜಾಕೀರ ಪಟೇಲ್, ಶರಣು ಸ್ವಂತ, ಮಲ್ಲಿಕಾರ್ಜುನ ಮಾಳಗಿ, ರಜಾಕ್ ಪಟೇಲ್, ಸಿರಾಜ್ ಪಟೇಲ್, ಅಂಬ್ರೇಶ್ ಗಣಾಪುರ, ನಾರಾಯಣ ರೆಡ್ಡಿ, ರೇವಣಸಿದ್ದಪ್ಪ ಅಣಕಲ್ ಸೇರಿದಂತೆ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಪಾಲ್ಗೊಂಡಿದ್ದರು.

Tags

ChincholiSulepet bandhethanol factory
share
ವಾರ್ತಾಭಾರತಿ
ವಾರ್ತಾಭಾರತಿ
Next Story
X