ಕಲಬುರಗಿ| ಚಿರಂಜೀವಿ ದೊಡ್ಡಪ್ಪ ಅಪ್ಪ ಜನ್ಮದಿನದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ

ಕಲಬುರಗಿ: ಪೂಜ್ಯ ಶ್ರೀ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಜನ್ಮದಿನದ ಪ್ರಯುಕ್ತ ನಗರದ ಕೋಟನೂರು (ಡಿ) ಪ್ರವೇಶದ ಕೆಸರಟಗಿ ರಸ್ತೆಯಲ್ಲಿರುವ, ಆಕಾಶವಾಣಿ ಹಿಂಭಾಗ ಹಾಗೂ ಸಮಾಧಾನ ಮಠದ ಸಮೀಪದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಪೂಜ್ಯ ಶ್ರೀ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರು ಚಾಲನೆ ನೀಡಿದರು.
ಅನುಗ್ರಹ ಕಣ್ಣಿನ ಆಸ್ಪತ್ರೆ (ಭೋರುಕಾ ನೇತ್ರಾಲಯ), ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಫ್ಯಾಮಿಲಿ ಟ್ರಸ್ಟ್, ಶರಣಬಸವೇಶ್ವರ ಸಂಸ್ಥಾನ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕುಮಾರಿ ಭವಾನಿ, ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವರಾದ ಲಕ್ಷ್ಮೀ ಪಾಟೀಲ್ ಮಾಕಾ, ಡಾ. ಅಲ್ಲಮಪ್ರಭು ದೇಶಮುಖ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಡಾ. ಪ್ರಭುಗೌಡ ಬಿ.ಎಲ್. ಮತ್ತು ಡಾ. ಮಾಲಿನಿ ಪ್ರಭುಗೌಡ ಅವರ ನೇತೃತ್ವದಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಶಿಬಿರ ನಡೆಯಿತು. ಕೋಟನೂರು (ಡಿ) ಪ್ರದೇಶದ ಕೆಸರಟಗಿ ರಸ್ತೆಯಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆ (ಭೋರುಕಾ ನೇತ್ರಾಲಯ) ಹಾಗೂ ಅಶೋಕ ನಗರ ಪೊಲೀಸ್ ಠಾಣೆ ಎದುರು, ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಲಾಯಿತು.
ಶಿಬಿರದಲ್ಲಿ ಕಣ್ಣಿನ ಪೊರೆ (ಮೋತಿಬಿಂದು) ಮತ್ತು ಟೆರಿಜಿಯಂ ಶಸ್ತ್ರಚಿಕಿತ್ಸೆಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾಡಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿತ್ತು. ನೇತ್ರ ತಜ್ಞರು ಸಾರ್ವಜನಿಕರಿಗೆ ಕಣ್ಣಿನ ಆರೋಗ್ಯದ ಕುರಿತು ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಶಿಬಿರದಲ್ಲಿ ಒಟ್ಟು 890 ಹೊರರೋಗಿಗಳು (ಒಪಿಡಿ) ನೇತ್ರ ತಪಾಸಣೆ ಮಾಡಿಸಿಕೊಂಡರು.






