Chitapur | ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಕಲಬುರಗಿ : 2026-27ನೇ ಸಾಲಿನಲ್ಲಿ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಹಾಗೂ ಪರಿಶಿಷ್ಟ ಜಾತಿ/ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989ರಡಿ ವಿಚಾರಗೋಷ್ಠಿ ಕಾರ್ಯಾಗಾರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲು ಚಿತ್ತಾಪೂರ ತಾಲೂಕಿನ ವ್ಯಾಪ್ತಿಯ ಅರ್ಹ ಸರ್ಕಾರೇತರ ಸಂಘ-ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸ್ವಯಂ ಸೇವಾ ಸಂಸ್ಥೆಯು ನೋಂದಣಿಗೊಂಡಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು. ಪ.ಜಾತಿ ಮತ್ತು ಪ.ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು. ಎಸ್.ಸಿ. / ಎಸ್.ಟಿ. ಜನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪ.ಜಾತಿ ಮತ್ತು ಪ.ಪಂಗಡಗಳ ಸಂಘಗಳು, ಸಂಸ್ಥೆ/ಸಂಘ ಪ್ರತಿ ವರ್ಷ ಆಡಿಟ್ ಮಾಡಿಸಿರಬೇಕು. ಸಂಸ್ಥೆ-ಸಂಘವು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿರುವ ಅನುಭವ ಹೊಂದಿರಬೇಕು.
ಇಚ್ಛೆಯುಳ್ಳ ಸರ್ಕಾರೇತರ ಸಂಘ-ಸಂಸ್ಥೆಗಳು ತಮ್ಮ ಸಂಘದ ಲೇಟರ್ ಪ್ಯಾಡ್ ಮೇಲೆ ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ (ಸಾರ್ವತ್ರಿಕ ರಜೆ ಹೊರತುಪಡಿಸಿ) 2026ರ ಜುಲೈ 20 ರೊಳಗಾಗಿ ಚಿತ್ತಾಪುರ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.




