Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ನವೆಂಬರ್‌ನಲ್ಲಿ ಬಸವ ಭವನ...

Chitapur | ನವೆಂಬರ್‌ನಲ್ಲಿ ಬಸವ ಭವನ ಉದ್ಘಾಟನೆ; ಸೆ.27ರಂದು ಪೂರ್ವಭಾವಿ ಸಭೆ : ನಾಗರಾಜ ಭಂಕಲಗಿ

ವಾರ್ತಾಭಾರತಿವಾರ್ತಾಭಾರತಿ21 Sept 2026 6:01 PM IST
share
Chitapur | ನವೆಂಬರ್‌ನಲ್ಲಿ ಬಸವ ಭವನ ಉದ್ಘಾಟನೆ; ಸೆ.27ರಂದು ಪೂರ್ವಭಾವಿ ಸಭೆ : ನಾಗರಾಜ ಭಂಕಲಗಿ

ಚಿತ್ತಾಪುರ : ಪಟ್ಟಣದಲ್ಲಿ ನಿರ್ಮಾಣವಾಗಿರುವ ಬಸವ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ನವೆಂಬರ್ ತಿಂಗಳ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದ್ದು, ಅದರ ಸಿದ್ಧತೆಗಾಗಿ ಸೆಪ್ಟೆಂಬರ್ 27ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ನಾಗರಾಜ ಭಂಕಲಗಿ ತಿಳಿಸಿದ್ದಾರೆ.

ಪಟ್ಟಣದ ಬಸವ ಭವನ ನಿರ್ಮಾಣ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವ ಭವನ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಉದ್ಘಾಟನಾ ಸಮಾರಂಭವನ್ನು ಸಮಾಜದ ಎಲ್ಲ ವರ್ಗಗಳ ಸಮ್ಮುಖದಲ್ಲಿ ಭವ್ಯವಾಗಿ ನಡೆಸಲು ಯೋಜನೆ ರೂಪಿಸಲಾಗಿದೆ. ಈ ಹಿಂದೆ ನೀಡಿದ ಭರವಸೆಯಂತೆ ವಸತಿ ನಿಲಯದ ಉದ್ಘಾಟನೆಯನ್ನೂ ಶೀಘ್ರದಲ್ಲೇ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಆಗಮಿಸಿ ಬಸವ ಭವನ ಉದ್ಘಾಟಿಸಲಿದ್ದಾರೆ. ಗೃಹ ಸಚಿವ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ ವಹಿಸಲಿದ್ದು, ಸಂಸದ ರಾಧಾಕೃಷ್ಣ ದೊಡ್ಡಮನಿ, ಸಚಿವರಾದ ಈಶ್ವರ್ ಖಂಡ್ರೆ, ಶರಣಪ್ರಕಾಶ ಪಾಟೀಲ್, ಶಾಸಕ ಶರಣಬಸಪ್ಪ ದರ್ಶನಾಪುರ, ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶರಣಕುಮಾರ್ ಮೋದಿ ಸೇರಿದಂತೆ ಸಮಾಜದ ಹಿರಿಯರು ಹಾಗೂ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ನವೆಂಬರ್‌ನಲ್ಲಿ ಉದ್ಘಾಟನೆ ನಡೆದ ಬಳಿಕ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗಾಗಿ ನವೆಂಬರ್ 27ರ ನಂತರ ಬಸವ ಭವನದ ಬುಕ್ಕಿಂಗ್ ಆರಂಭಿಸಲಾಗುವುದು ಎಂದರು.

ಪೂರ್ವಭಾವಿ ಸಭೆಯನ್ನು ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ಬಸವ ಭವನ ಆವರಣದಲ್ಲಿ ಆಯೋಜಿಸಲಾಗಿದೆ. ಬಸವಾಭಿಮಾನಿಗಳು, ಸಮಾಜದ ಹಿರಿಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡುವಂತೆ ನಾಗರಾಜ ಭಂಕಲಗಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರೆಡ್ಡಿ ಪಾಟೀಲ್ ಕರದಾಳ, ಉಪಾಧ್ಯಕ್ಷ ಡಾ. ಪ್ರಭುರಾಜ ಕಾಂತಾ, ಚಂದ್ರಶೇಖರ ಟೆಂಗಳಿ ಸಾತನೂರ, ಅಣ್ಣಾರಾವ ಪಾಟೀಲ್ ಮುಡಬೂಳ, ಎಸ್.ಎನ್ ಪಾಟೀಲ್, ಅನೀಲ್ ವಡ್ಡಡಗಿ, ಶ್ರೀನಿವಾಸ ರೆಡ್ಡಿ ಪಾಲಪ್, ಶಿವರಾಜ ಪಾಳೇದ್, ಶಾಂತಕುಮಾರ್ ಹತ್ತಿ, ಶರಣಪ್ಪ ಸಜ್ಜನ್ ದಿಗ್ಗಾಂವ, ಪ್ರಭು ಬಮ್ಮನಳ್ಳಿ ಸೇರಿದಂತೆ ಇತರರು ಇದ್ದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X