Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಕಾಳಗಿ ಹಿರಿಯ ಸಿವಿಲ್...

Chitapur | ಕಾಳಗಿ ಹಿರಿಯ ಸಿವಿಲ್ ಪ್ರಕರಣಗಳ ನ್ಯಾಯವ್ಯಾಪ್ತಿ ಬದಲಾವಣೆ ಮರುಪರಿಶೀಲನೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Sept 2026 5:43 PM IST
share
Chitapur | ಕಾಳಗಿ ಹಿರಿಯ ಸಿವಿಲ್ ಪ್ರಕರಣಗಳ ನ್ಯಾಯವ್ಯಾಪ್ತಿ ಬದಲಾವಣೆ ಮರುಪರಿಶೀಲನೆಗೆ ಆಗ್ರಹ

ಚಿತ್ತಾಪುರ: ಕಾಳಗಿ ತಾಲೂಕಿನ ಹಿರಿಯ ಸಿವಿಲ್ ವಿಭಾಗದ ಪ್ರಕರಣಗಳ ನ್ಯಾಯವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಮರುಪರಿಶೀಲಿಸಿ, ಚಿತ್ತಾಪುರದ ಮೂಲ ಹಿರಿಯ ಸಿವಿಲ್ ನ್ಯಾಯವ್ಯಾಪ್ತಿಯನ್ನು ಪುನಃ ಸ್ಥಾಪಿಸಬೇಕು ಎಂದು ಆಗ್ರಹಿಸಿ ಚಿತ್ತಾಪುರ ವಕೀಲರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಮನವಿ ಪತ್ರವನ್ನು ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.

ಕಾಳಗಿ ತಾಲೂಕಿನ ಹಿರಿಯ ಸಿವಿಲ್ ಪ್ರಕರಣಗಳ ನ್ಯಾಯವ್ಯಾಪ್ತಿಯಲ್ಲಿ ಮಾಡಿರುವ ಬದಲಾವಣೆ ಹಾಗೂ ಪರಿಷ್ಕರಣೆ ಚಿತ್ತಾಪುರದ ಕಕ್ಷಿದಾರರು ಮತ್ತು ವಕೀಲರಿಗೆ ಅಂಗೀಕಾರಾರ್ಹವಾಗಿಲ್ಲ. ಈ ಅಧಿಸೂಚನೆಯ ವಿರುದ್ಧ ಸಂಘವು ಈಗಾಗಲೇ ಆಕ್ಷೇಪಣೆ ಸಲ್ಲಿಸಿದೆ ಎಂದು ಪದಾಧಿಕಾರಿಗಳು ತಿಳಿಸಿದರು.

ದೀರ್ಘಕಾಲದಿಂದ ಚಿತ್ತಾಪುರ ಹಿರಿಯ ಸಿವಿಲ್ ನ್ಯಾಯಾಲಯದ ಮೂಲ ನ್ಯಾಯವ್ಯಾಪ್ತಿ ಜಾರಿಯಲ್ಲಿದ್ದು, ಕಕ್ಷಿದಾರರು ಅದೇ ವ್ಯವಸ್ಥೆಗೆ ಹೊಂದಿಕೊಂಡಿದ್ದಾರೆ. ಇದೀಗ ಮಾಡಿರುವ ಬದಲಾವಣೆಯಿಂದ ಕಕ್ಷಿದಾರರು ಮತ್ತು ವಕೀಲರಿಗೆ ತೀವ್ರ ಅನಾನುಕೂಲ ಉಂಟಾಗಿದ್ದು, ಅಸ್ತಿತ್ವದಲ್ಲಿರುವ ನ್ಯಾಯಾಂಗ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಾಳಗಿ ನ್ಯಾಯಾಲಯವನ್ನು ರದ್ದುಪಡಿಸುವ ಅಥವಾ ಮುಚ್ಚುವಂತೆ ತಾವು ಒತ್ತಾಯಿಸುತ್ತಿಲ್ಲ. ಬದಲಾಗಿ ಚಿತ್ತಾಪುರದ ಮೂಲ ನ್ಯಾಯವ್ಯಾಪ್ತಿಯನ್ನು ಪುನಃ ಸ್ಥಾಪಿಸಬೇಕು. ಕಾಳಗಿ ಹಿರಿಯ ಸಿವಿಲ್ ನ್ಯಾಯವ್ಯಾಪ್ತಿಗೆ ಸಂಬಂಧಿಸಿದ ಹಿಂದಿನ ಅಧಿಸೂಚನೆಯನ್ನು ಮರುಪರಿಶೀಲಿಸಿ, ವಕೀಲರ ಸಂಘ ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಗಣಿಸಬೇಕು. ಕಾಳಗಿಗೆ ಸಂಬಂಧಿಸಿದ ಹಿರಿಯ ಸಿವಿಲ್ ಪ್ರಕರಣಗಳನ್ನು ಕಲಬುರಗಿ ನ್ಯಾಯಾಲಯದಿಂದ ಹಿಂಪಡೆಯಬೇಕು ಎಂದು ಮನವಿ ಮಾಡಿದರು.

ನ್ಯಾಯಸಮ್ಮತ ಬೇಡಿಕೆಗಳನ್ನು ಸಮಂಜಸ ಅವಧಿಯಲ್ಲಿ ಪರಿಗಣಿಸಿ ಕ್ರಮ ಕೈಗೊಳ್ಳದಿದ್ದರೆ, ಚಿತ್ತಾಪುರ ವಕೀಲರ ಸಂಘವು ಕಾನೂನುಬದ್ಧ ಹಾಗೂ ಪ್ರಜಾಸತ್ತಾತ್ಮಕ ರೀತಿಯಲ್ಲಿ ನ್ಯಾಯಾಲಯದ ಕಾರ್ಯದಿಂದ ದೂರವಿರುವುದು, ಮುಷ್ಕರ ಸೇರಿದಂತೆ ಮುಂದಿನ ಹೋರಾಟದ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್‌.ಬಿ.ಕರದಳ್ಳಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ವಾಡಿ, ನ್ಯಾಯವಾದಿಗಳಾದ ಶರಣಗೌಡ ಪಾಟೀಲ, ಎಸ್.ಎಂ.ಹೋಳಿ, ಬಿ.ಬಿ.ದೊಡ್ಡಮನಿ, ಎಸ್.ಪಿ.ಸಾತನೂರಕರ್, ಎ.ಟಿ.ರಾಠೋಡ, ಎಲ್.ಎ.ಪಾಟೀಲ್, ಎಸ್.ಇ.ಅನ್ವರಕರ್, ಅಶ್ವಥ್ ರಾಠೋಡ ಸೇರಿದಂತೆ ಇತರರು ಇದ್ದರು.

Tags

KalagiChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X