Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಡಾ.ಶಿವರಾಮ ಕಾರಂತರ ಸಾಹಿತ್ಯ...

Chitapur | ಡಾ.ಶಿವರಾಮ ಕಾರಂತರ ಸಾಹಿತ್ಯ ವಿದ್ಯಾರ್ಥಿಗಳಿಗೆ ಆದರ್ಶ: ನರಸಪ್ಪ ಚಿನ್ನಾಕಟ್ಟಿ

ವಾರ್ತಾಭಾರತಿವಾರ್ತಾಭಾರತಿ6 Aug 2026 10:22 PM IST
share
Chitapur | ಡಾ.ಶಿವರಾಮ ಕಾರಂತರ ಸಾಹಿತ್ಯ ವಿದ್ಯಾರ್ಥಿಗಳಿಗೆ ಆದರ್ಶ: ನರಸಪ್ಪ ಚಿನ್ನಾಕಟ್ಟಿ

ಚಿತ್ತಾಪುರ : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಬದುಕು, ಬರಹ ಹಾಗೂ ಸಾಹಿತ್ಯದ ಮೌಲ್ಯಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಚಿತ್ತಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನರಸಪ್ಪ ಚಿನ್ನಾಕಟ್ಟಿ ಹೇಳಿದರು.

ತಾಲೂಕಿನ ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಲಕುಂದಿ ಗ್ರಾಮದಲ್ಲಿ ಆಯೋಜಿಸಿದ್ದ “ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಬದುಕು, ಬರಹ ಮತ್ತು ಸಾಹಿತ್ಯದ ಅರಿವು” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ. ಶಿವರಾಮ ಕಾರಂತರು ಕನ್ನಡ ಸಾಹಿತ್ಯದ ಶ್ರೇಷ್ಠ ಚಿಂತಕರಾಗಿದ್ದು, ಸಾಹಿತ್ಯ, ವಿಜ್ಞಾನ, ಯಕ್ಷಗಾನ, ಪರಿಸರ ಸಂರಕ್ಷಣೆ ಹಾಗೂ ಸಮಾಜ ಸುಧಾರಣೆಯ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ‘ಮೂಕಜ್ಜಿಯ ಕನಸುಗಳು’ ಕಾದಂಬರಿಗೆ 1978ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು, ‘ಚೋಮನ ದುಡಿ’, ‘ಮರಳಿ ಮಣ್ಣಿಗೆ’, ‘ಬೆಟ್ಟದ ಜೀವ’ ಸೇರಿದಂತೆ ಅನೇಕ ಕೃತಿಗಳ ಮೂಲಕ ಮಾನವೀಯ ಮೌಲ್ಯಗಳು, ವೈಜ್ಞಾನಿಕ ಮನೋಭಾವ ಹಾಗೂ ಮೂಢನಂಬಿಕೆ ವಿರೋಧಿ ಚಿಂತನೆಯನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮವನ್ನು ನಾಲವಾರ ವಲಯ ಕಸಾಪದ ಗೌರವ ಸಲಹೆಗಾರ ಶಿವಕುಮಾರ ಸುಣಗಾರ ತಾಯಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಉದ್ಘಾಟಿಸಿದರು.

ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಂಜುನಾಥ ಎಸ್. ನಾಯ್ಕಲ್ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ವಿಶೇಷವಾಗಿ ಸರ್ಕಾರಿ ಶಾಲಾ ಮಕ್ಕಳಲ್ಲಿ ಕನ್ನಡದ ಬಗ್ಗೆ ಅಭಿಮಾನ ಮತ್ತು ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕವನ ವಾಚನ, ಜನಪದ ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಪ್ರಶಾಂತ ಕುಲಕರ್ಣಿ, ರಶ್ಮಿ ಕುಲಕರ್ಣಿ ಹಾಗೂ ಶಿವಲೀಲಾ ತುನ್ನೂರ ಅವರು ಕವನ ವಾಚನ ನಡೆಸಿದರೆ, ಶಂಕರ ಹಡಪದ ಅವರ ಗಾಯನ ಮತ್ತು ಮೌನೇಶ ಶಹಾಪೂರ ಅವರ ತಬಲಾ ವಾದನ ಕಾರ್ಯಕ್ರಮಕ್ಕೆ ಮೆರುಗು ತಂದಿತು.

ಈ ಸಂದರ್ಭದಲ್ಲಿ ಮಲ್ಲುಗೌಡ ಪಾಟೀಲ್, ಸಿದ್ದುಗೌಡ, ನಾಗು ಸಾಹುಕಾರ, ಮಲ್ಲೇಶ ಪೂಜಾರಿ, ಈರಣ್ಣ ಪೂಜಾರಿ, ಸಾಯಿಬಣ್ಣ ವನಬಾ, ಮಹಾದೇವ ಮಡಿವಾಳ, ಹಯ್ಯಾಳ ಪೂಜಾರಿ, ಮೌನೇಶ, ಈರಣ್ಣ ನೀಲೂರ, ಸತೀಶ್, ಎಸ್‌ಡಿಎಂಸಿ ಅಧ್ಯಕ್ಷ ವಿರೇಶ ಹಡಪದ, ರವಿ ಮಠದ, ಶ್ರೀಧರ ಪತ್ತಾರ, ದೇವರಾಜ ಪೂಜಾರಿ, ಶರಣು ಸಾಹು ಮದರಕಿ, ಉಮೇಶ ಯರಗೋಳ ಸೇರಿದಂತೆ ಗ್ರಾಮಸ್ಥರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಬಿ. ಹಡಪದ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರುಣಕುಮಾರ ಸುಣಗಾರ ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾರ್ಜುನ ತಳವಾರ ವಂದನಾರ್ಪಣೆ ಸಲ್ಲಿಸಿದರು.

Tags

studentsChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X