Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ನಾಗಾವಿ ಯಲ್ಲಮ್ಮ ಪಲ್ಲಕ್ಕಿ...

Chitapur | ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ನಾಗಯ್ಯ ಹಿರೇಮಠ

ವಾರ್ತಾಭಾರತಿವಾರ್ತಾಭಾರತಿ8 Oct 2026 7:49 PM IST
share
Chitapur | ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ನಾಗಯ್ಯ ಹಿರೇಮಠ

ಚಿತ್ತಾಪುರ: ಪಟ್ಟಣದ ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ಯಶಸ್ವಿಗೊಳಿಸಲು ಅಧಿಕಾರಿಗಳೊಂದಿಗೆ ತಾಲೂಕಿನ ಎಲ್ಲ ಸಮಾಜದ ಮುಖಂಡರು, ಭಕ್ತಾಧಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ನಾಗಯ್ಯ ಹಿರೇಮಠ ಕರೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವ (ಜಾತ್ರಾ ಮಹೋತ್ಸವ)ದ ಪ್ರಯುಕ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ನಾನು ಕೇವಲ ಅಧಿಕಾರಿಯಲ್ಲ, ಒಬ್ಬ ದೇವಿಯ ಭಕ್ತ. ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುವುದು” ಎಂದು ಹೇಳಿದರು.

ಪಲ್ಲಕ್ಕಿ ಉತ್ಸವಕ್ಕೆ ರಾಜ್ಯ ಸೇರಿದಂತೆ ಹೊರರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಭಕ್ತಾಧಿಗಳಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ದೇವಸ್ಥಾನಕ್ಕೆ ತೆರಳುವ ರಸ್ತೆಯ ಎರಡೂ ಬದಿಯಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು. ಕುಡಿಯುವ ನೀರು ಹಾಗೂ ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ಸೂಚಿಸಿದರು. ವಿದ್ಯುತ್ ವ್ಯವಸ್ಥೆ ಕಲ್ಪಿಸಿ ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು. ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಾತ್ರೆಯ ಸಂದರ್ಭದಲ್ಲಿ ಯಾವುದೇ ರೀತಿಯ ಬೆಂಕಿ ಅನಾಹುತ ಸಂಭವಿಸದಂತೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾತ್ರೆಗೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಬಸ್ ಘಟಕ ವ್ಯವಸ್ಥಾಪಕರಿಗೆ ತಿಳಿಸಿದರು. ಅಕ್ರಮ ಮದ್ಯ ಮಾರಾಟ ನಡೆಯದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಭೀಮಣ್ಣ ಕರದಳ್ಳಿ, ಮಲ್ಲರೆಡ್ಡಿ ಗೋಪಸೇನ್ ಹಾಗೂ ಈರಪ್ಪ ಭೋವಿ ಮಾತನಾಡಿ, ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಟಿಪ್ಪರ್‌ಗಳ ಸಂಚಾರದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಇದರಿಂದ ಭಕ್ತಾಧಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಹೀಗಾಗಿ ಕೂಡಲೇ ರಸ್ತೆ ದುರಸ್ತಿ ಮಾಡಬೇಕು. ವಿದ್ಯುತ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಆಗ್ರಹಿಸಿದರು.

ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಮಾತನಾಡಿ, ಪುರಸಭೆಗೆ ವಹಿಸಿರುವ ಎಲ್ಲ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುವುದು ಎಂದರು. ಸಿಪಿಐ ಎಸ್.ಸಿ. ಪಾಟೀಲ ಹಾಗೂ ಪಿಎಸ್‌ಐ ಮಂಜುನಾಥ ರೆಡ್ಡಿ ಮಾತನಾಡಿ, ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರತ್ನಾಕರ ನಾಯಕ ಮಾತನಾಡಿ, ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹೀಗಾಗಿ ಎಲ್ಲರೂ ಸಹಕರಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಜಾತ್ರೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಮುಖಂಡರಾದ ಚಂದ್ರಶೇಖರ್ ಅವಂಟಿ, ವಿಠಲ್ ಕಟ್ಟಿಮನಿ, ನರಸಪ್ಪ ಭೋವಿ, ಶರಣಪ್ಪ ಕೋರವಾರ, ಅಂಬಾದಾಸ್ ತುರೆ, ಭಾಸ್ಕರ್ ಪುಣೆ, ಶರಣಪ್ಪ ನಾಟೀಕಾರ ಹಾಗೂ ಸುರೇಶ್ ಬೆನಕನಳ್ಳಿ ಮಾತನಾಡಿದರು.

ಈ ಸಂದರ್ಭದಲ್ಲಿ ಭೀಮಣ್ಣ ಸಾಲಿ, ನಾಗರೆಡ್ಡಿ ಗೋಪಸೇನ್, ನಾಗರಾಜ ಭಂಕಲಗಿ, ಮಲ್ಲಿಕಾರ್ಜುನ ಬೊಮ್ಮನಳ್ಳಿ, ಸುರೇಶ್ ಅಳ್ಳೋಳ್ಳಿ, ಲಕ್ಷ್ಮೀಕಾಂತ್ ತಾಂಡೂರಕರ್, ಶಿವಾಜಿ ಕಾಶಿ, ರಾಮಲಿಂಗ ಬಾನರ್, ಶಿವಕಾಂತ್ ಬೆಣ್ಣೂರಕರ್, ಸಾಬಣ್ಣ ಹೊಳಿಕಟ್ಟಿ, ಭೀಮರಾಯ ಹೊತಿನಮಡಿ, ಶ್ರೀನಿವಾಸ ಪಾಸ್ಮೆ, ಮಹೇಶ್ ಕಾಶಿ, ರಾಮು ಹರವಾಳ, ನಾಗೇಂದ್ರ ಬುರ್ಲಿ, ಸಂಜಯ್ ಬುಳಕರ್, ಬಸವರಾಜ ಮುಡಬೂಳಕರ್ ಸೇರಿದಂತೆ ಸಿಬ್ಬಂದಿಗಳಾದ ಅಶ್ವತ್ಥ ನಾರಾಯಣ, ಮೈನೋದ್ದಿನ್, ಮಂಜುನಾಥ, ಮಾರ್ಥಂಡ ಮುಡಬೂಳ ಹಾಗೂ ಶಂಕರ್ ಸೇರಿದಂತೆ ಇತರರು ಇದ್ದರು.

ಸಂಗಮೇಶ ನಿರೂಪಿಸಿದರು. ಗ್ರೇಡ್-2 ತಹಶೀಲ್ದಾರ್ ರಾಜಕುಮಾರ್ ಮರತೂರಕರ್ ವಂದಿಸಿದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X