Chitapur | ತೊಗರಿ, ಹತ್ತಿ ಬೆಳೆ ವಿಮೆ ನೋಂದಣಿಗೆ ಜು.31 ಕೊನೆಯ ದಿನ : ಸಂಜೀವಕುಮಾರ

ಚಿತ್ತಾಪುರ: 2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೊಗರಿ ಹಾಗೂ ಹತ್ತಿ ಬೆಳೆಗಳಿಗೆ ವಿಮೆ ನೋಂದಣಿ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ್ ತಿಳಿಸಿದ್ದಾರೆ.
ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಯಾದಲ್ಲಿ ರೈತರು ಬೆಳೆ ವಿಮೆ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಆದ್ದರಿಂದ ಅರ್ಹ ರೈತರು ಕೊನೆಯ ದಿನಾಂಕದೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಮಳೆ ಆಶ್ರಿತ ತೊಗರಿ ಬೆಳೆಗೆ ಪ್ರತಿ ಎಕರೆಗೆ 466 ರೂ. ಹಾಗೂ ಮಳೆ ಆಶ್ರಿತ ಹತ್ತಿ ಬೆಳೆಗೆ ಪ್ರತಿ ಎಕರೆಗೆ 1,208 ರೂ. ವಿಮಾ ಪ್ರೀಮಿಯಂ ಪಾವತಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ಯಾಂಕ್‌ಗಳು, ನಾಗರಿಕ ಸೇವಾ ಕೇಂದ್ರಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




