Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಬಸವರಾಜ ಪೂಜಾರಿಗೆ ನಿಗಮ...

Chitapur | ಬಸವರಾಜ ಪೂಜಾರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲು ಸಚಿವ ಪ್ರಿಯಾಂಕ್ ಖರ್ಗೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ29 Aug 2026 4:47 PM IST
share
Chitapur | ಬಸವರಾಜ ಪೂಜಾರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲು ಸಚಿವ ಪ್ರಿಯಾಂಕ್ ಖರ್ಗೆಗೆ ಒತ್ತಾಯ

ಚಿತ್ತಾಪುರ: ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ಮೊಗಲಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ಪೂಜಾರಿ ಅವರನ್ನು ರಾಜ್ಯದ ಯಾವುದಾದರೂ ನಿಗಮ ಅಥವಾ ಮಂಡಳಿಯ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಬೇಕು ಎಂದು ಕುರುಬ ಸಮಾಜದ ಮುಖಂಡರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

ಗೃಹ ಸಚಿವರನ್ನು ಭೇಟಿ ಮಾಡಿದ ಮುಖಂಡರು, ಬಸವರಾಜ ಪೂಜಾರಿ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಲೋಕಸಭೆ, ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಅವರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಮೊಗಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡವರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ಕೆಲಸವನ್ನು ಬಸವರಾಜ ಪೂಜಾರಿ ಮಾಡಿದ್ದಾರೆ. ಆದರೂ ಪಕ್ಷದಿಂದ ಇದುವರೆಗೆ ಅವರಿಗೆ ಯಾವುದೇ ಸ್ಥಾನಮಾನ ದೊರೆತಿಲ್ಲ ಎಂದು ಮುಖಂಡರು ಹೇಳಿದರು.

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ನಿಗಮ-ಮಂಡಳಿಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಬಸವರಾಜ ಪೂಜಾರಿ ಅವರನ್ನು ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡುವ ಮೂಲಕ ಕುರುಬ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕುರುಬ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಪೂಜಾರಿ ಭಂಕೂರ, ಮಹಾಂತೇಶ್ ಕೌಲಗಿ, ಸೂರ್ಯಕಾಂತ ಪೂಜಾರಿ ಚಿತ್ತಾಪುರ, ಯಲ್ಲಾಲಿಂಗ ದಿಡ್ಡಿಮನಿ ಇವಣಿ, ಹಣಮಂತ ಯಾಗಾಪುರ, ಮಲ್ಲಿಕಾರ್ಜುನ ಡಬ್ಬಿಗೇರಿ ಅಣಿಕೇರಿ, ಮಹೇಶ ಧರಿ ಭಂಕೂರ, ಮಲ್ಲಿಕಾರ್ಜುನ ಪೂಜಾರಿ ಮರಗೋಳ, ಬಸವರಾಜ ಕೇಶ್ವರ್ ವಾಡಿ, ಸಂತೋಷ ಪೂಜಾರಿ ಚಿತ್ತಾಪುರ, ಭೋಜು ಶೇರಿ ಭಾಗೋಡಿ, ಮಲ್ಲಿನಾಥ ಪೂಜಾರಿ ರಾಜೋಳಾ, ಸಿದ್ದು ಪೂಜಾರಿ ವಾಡಿ, ನಾಗೇಂದ್ರ ಗಂಗಾಣಿ ಚಿತ್ತಾಪುರ, ಪ್ರದೀಪ್ ಪೂಜಾರಿ ಕದ್ದರಗಿ, ಶಿವರಾಜ್ ಪೂಜಾರಿ ಮೂಡಬೂಳ, ನಾಗೇಶ್ ಪೂಜಾರಿ ಚಿತ್ತಾಪುರ, ಕಲ್ಯಾಣಿ ಪೂಜಾರಿ ಚಿತ್ತಾಪುರ, ಉಲ್ಲಾಸ್ ಪೂಜಾರಿ ಮೊಗಲಾ ಸೇರಿದಂತೆ ಇತರರು ಇದ್ದರು.

Tags

Priyank KhargeChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X