Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಮುಖ್ಯ ಶಿಕ್ಷಕರ...

Chitapur | ಮುಖ್ಯ ಶಿಕ್ಷಕರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಲಿ: ಕೆ.ಎಚ್.ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ17 Nov 2026 7:38 PM IST
share
Chitapur | ಮುಖ್ಯ ಶಿಕ್ಷಕರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಲಿ: ಕೆ.ಎಚ್.ಮಲ್ಲಿಕಾರ್ಜುನ

ಚಿತ್ತಾಪುರ: ಮುಖ್ಯ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಇಲಾಖೆಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅವರ ಮೇಲೆ ಯಾವುದೇ ರೀತಿಯ ಅನಗತ್ಯ ಒತ್ತಡ ಹೇರದೆ, ಪರಸ್ಪರ ಸಮನ್ವಯ ಮತ್ತು ಸಹಕಾರದೊಂದಿಗೆ ಕಾರ್ಯನಿರ್ವಹಿಸಲು ಅನುಕೂಲಕರ ವಾತಾವರಣ ಕಲ್ಪಿಸಬೇಕು. ಅದೇ ರೀತಿ ಮುಖ್ಯ ಶಿಕ್ಷಕರು ಕೂಡ ಇಲಾಖೆಯ ದೈನಂದಿನ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಕಲಬುರಗಿ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್.ಮಲ್ಲಿಕಾರ್ಜುನ ಅಧಿಕಾರಿಗಳಿಗೆ ಮನವಿ ಮಾಡಿದರು.

ಪಟ್ಟಣದ ಸರ್ಕಾರಿ ಕನ್ಯಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪದಾಧಿಕಾರಿಗಳ ಪದಗ್ರಹಣ, ಮುಖ್ಯ ಶಿಕ್ಷಕರ ಸನ್ಮಾನ, ಶಿಕ್ಷಕರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಜ್ಞಾನಜ್ಯೋತಿ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಮುಖ್ಯ ಶಿಕ್ಷಕರು ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವ್ಯವಸ್ಥೆಯ ಪ್ರಮುಖ ಕೊಂಡಿಯಾಗಿದ್ದಾರೆ. ಶಾಲೆಯ ಸಮಗ್ರ ಅಭಿವೃದ್ಧಿ, ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸುವುದು ಹಾಗೂ ಶಿಕ್ಷಕರನ್ನು ಸಮನ್ವಯದಿಂದ ಮುನ್ನಡೆಸುವ ಮಹತ್ವದ ಜವಾಬ್ದಾರಿ ಅವರ ಮೇಲಿದೆ. ಆದರೆ, ಇಲಾಖೆಯ ವಿವಿಧ ಕೆಲಸಗಳ ಒತ್ತಡದಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಬಾರದು. ಅಧಿಕಾರಿಗಳು ಮುಖ್ಯ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮುಖ್ಯ ಶಿಕ್ಷಕರ ಹಕ್ಕುಗಳು, ಗೌರವ ಮತ್ತು ವೃತ್ತಿಪರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘ ಸದಾ ಧ್ವನಿಯಾಗಿ ಕಾರ್ಯನಿರ್ವಹಿಸಲಿದೆ. ಶಿಕ್ಷಕರು ಮತ್ತು ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಹಾಗೂ ಪರಸ್ಪರ ವಿಶ್ವಾಸ ಮೂಡಿದಾಗ ಮಾತ್ರ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಲೂಂಡಗಿ ಮಾತನಾಡಿ, ಶಿಕ್ಷಕರ ಸಂಘಟನೆ, ನೌಕರರ ಒಗ್ಗಟ್ಟು, ಶೈಕ್ಷಣಿಕ ಪ್ರಗತಿ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಮುಖ್ಯ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರು ಸಂಘಟಿತರಾಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ನಟರಾಜು ಕೆ. ಪುಟ್ಟೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಉದ್ದೇಶ, ಶಿಕ್ಷಕರ ಒಗ್ಗಟ್ಟು, ಸಂಘಟನೆಯ ಮಹತ್ವ ಹಾಗೂ ಮುಖ್ಯ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಸಂಘದ ಬದ್ಧತೆಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ತಾಲೂಕು ಅಧ್ಯಕ್ಷ ಸುರೇಶ ಸರಾಫ್ ವಹಿಸಿದ್ದರು. ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಶಂಕರ ಡಾಂಗೆ ಹಾಗೂ ತಾಲೂಕು ದೈಹಿಕ ಪರಿವೀಕ್ಷಕ ಶಿವಶರಣಪ್ಪ ಮಂಟಾಳೆ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾರಂಭದಲ್ಲಿ ಸಂಘದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ, ಸಂಘಟನೆಯ ಜವಾಬ್ದಾರಿಗಳನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವಂತೆ ಶುಭ ಹಾರೈಸಲಾಯಿತು. ತಾಲೂಕಿನ ಮುಖ್ಯ ಶಿಕ್ಷಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಶಿಕ್ಷಕರಿಗೆ ವೃತ್ತಿಪರ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆ, ಪರಿಶ್ರಮ, ಸಮರ್ಪಣೆ ಹಾಗೂ ಶೈಕ್ಷಣಿಕ ಸಾಧನೆ ಮೆರೆದ ಶ್ರೀಕಾಂತ ಮು.ಶಿ., ಬಸಯ್ಯ ಎಸ್. ರುದ್ರಮುನಿ, ಅಮೀನೋದ್ದಿನ ಎಂ., ಸುರೇಶ್ ಓಂಕಾರ, ಚಾಮುಂಡಿ, ಸತ್ಯನಾರಾಯಣ, ಶಶಿಕಲಾ, ಜುಹ್ರಾ ಜಬೀನ್ ಹಾಗೂ ಶೋಭಾದೇವಿ ಅವರಿಗೆ ಜ್ಞಾನಜ್ಯೋತಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮರಪ್ಪ ಹಸನಗೋಳ, ಅಪ್ಪಾಸಾಹೇಬ ಪಾಟೀಲ್, ಉಮಾಕಾಂತ, ಶಿವಾನಂದ ನಾಲವಾರ, ಸಂಗನಗೌಡ, ರಾಜೇಂದ್ರ ಪ್ರಸಾದ, ಸೊಂದಪ್ಪ ಬಬಲಾದ, ನಾಗೂಬಾಯಿ, ಹುಸೇನ್ ಪಾಷಾ, ಸಿದ್ರಾಮ ವಾಲಿ, ಶರಣಪ್ಪ ಐಕೂರ, ರೇವಣಸಿದ್ದಪ್ಪ ರೋಣದ, ರವಿಕುಮಾರ ಹಾದಿಮನಿ, ಶರಣಪ್ಪ ಕಟ್ಟಿ, ಕಾಶೀರಾಯ ಕಲಾಲ, ನಾಗೇಂದ್ರಪ್ಪ, ಕನಕಪ್ಪ, ವಿಜಯಕುಮಾರ ವಾಡಿ, ಶ್ರೀಮಂತ ಗಂಜಿ, ಗುಲಾಬ್ ಶಾ, ಬೇಬಿ ಬಿರಾದಾರ, ನಿರ್ಮಲಾದೇವಿ, ಶ್ರೀದೇವಿ, ಜ್ಯೋತಿಲಕ್ಷ್ಮಿ, ಗೌತಮಾ, ನಿಂಗಪ್ಪ ಹಾಜಿ ಸಾಬ್, ವೀರಸಂಗಪ್ಪ, ದೇವಪ್ಪ, ವಿಜಯಕುಮಾರ್ ಹಾಗೂ ಜಯಶ್ರೀ ಸೇರಿದಂತೆ ಅನೇಕ ಗಣ್ಯರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಶಿಕ್ಷಕರಲ್ಲಿ ಒಗ್ಗಟ್ಟು, ಪರಸ್ಪರ ಬಾಂಧವ್ಯ ಹಾಗೂ ವೃತ್ತಿಪರ ಗೌರವವನ್ನು ಹೆಚ್ಚಿಸುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

ಸಂಘದ ಉಪಾಧ್ಯಕ್ಷ ಆದಪ್ಪ ಬಗಲಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಶಿವಾನಂದ ನಿರೂಪಿಸಿದರು. ಸಹಕಾರ್ಯದರ್ಶಿ ಸಂಜೀವ್ ವಂದಿಸಿದರು.

Tags

KalaburagiheadmastersChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X