Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಜಿಲ್ಲಾ ಕಾಂಗ್ರೆಸ್...

Chitapur | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ : ವಿಶ್ವಜಿತ್ ಕದಂ

ವಾರ್ತಾಭಾರತಿವಾರ್ತಾಭಾರತಿ8 Aug 2026 6:11 PM IST
share
Chitapur | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ : ವಿಶ್ವಜಿತ್ ಕದಂ

ಚಿತ್ತಾಪುರ: ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂಬಂಧ ಜಿಲ್ಲೆಯಾದ್ಯಂತ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಎಐಸಿಸಿ ವೀಕ್ಷಕ ವಿಶ್ವಜಿತ್ ಕದಂ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಅಪಾರ ಸಂಖ್ಯೆಯ ಮುಖಂಡರು ಮತ್ತು ಕಾರ್ಯಕರ್ತರಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನಾ ಸೃಜನ್ ಅಭಿಯಾನದ ಮೂಲಕ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರ ಸೇರಿದಂತೆ ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ದೊಡ್ಡ ಕಾರ್ಯಕರ್ತರ ಬಳಗವಿದೆ. ಬೆಳೆಯುವ ನಾಯಕರೊಂದಿಗೆ ಇತರರನ್ನು ಬೆಳೆಸುವ ನಾಯಕರೂ ಇದ್ದಾರೆ. ಆದ್ದರಿಂದ ಜಿಲ್ಲೆಯ ಪ್ರತಿಯೊಂದು ತಾಲೂಕು ಹಾಗೂ ಬ್ಲಾಕ್‌ಗಳಿಗೆ ತೆರಳಿ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಪ್ರತಿಯೊಂದು ಕ್ಷೇತ್ರಕ್ಕೆ ತೆರಳಿ ಜನಪ್ರತಿನಿಧಿಗಳು, ಶಾಸಕರು, ಸಚಿವರು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುವುದು. ಆಗಸ್ಟ್ 15ರೊಳಗೆ ಆಕಾಂಕ್ಷಿಗಳ ಅಂತಿಮ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಲಾಗುವುದು. ಬಳಿಕ ಹೈಕಮಾಂಡ್ ಯಾರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತದೆಯೋ, ಪಕ್ಷದ ಪ್ರತಿಯೊಬ್ಬರೂ ಆ ನಿರ್ಧಾರಕ್ಕೆ ಬದ್ಧರಾಗಬೇಕು ಎಂದು ವಿಶ್ವಜಿತ್ ಕದಂ ಹೇಳಿದರು.

ಈ ಸಂದರ್ಭದಲ್ಲಿ ಎಂಎಲ್‌ಸಿ ಜಗದೇವ ಗುತ್ತೇದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹಾಗೂ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ, ಸದಸ್ಯ ನಾಗರೆಡ್ಡಿ ಪಾಟೀಲ್, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಶಿವಾನಂದ ಪಾಟೀಲ್, ಶಿವರುದ್ರ ಭೀಣಿ, ಶೀಲಾ ಕಾಶಿ, ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ನಾಮದೇವ ರಾಠೋಡ, ಅಜೀಜ್ ಸೇಠ್, ಶ್ರೀನಿವಾಸ ಸಗರ, ಜಗಣ್ಣಗೌಡ, ವೀರಣ್ಣಗೌಡ, ಮಲ್ಲಪ್ಪ ಹೊಸ್ಮನಿ, ದೇವು ಯಾಬಾಳ, ನಾಗರೆಡ್ಡಿ ಗೋಪಸೇನ್, ನಿಂಗಣ್ಣ ಹೇಗಲೇರಿ, ದೇವಿಂದ್ರ ಅಣಕಲ್, ರಸೂಲ್ ಮುಸ್ತಫಾ, ಎಂ.ಎ ರಶೀದ್, ಜಫರುಲ್ ಹಸನ್, ವೆಂಕಟೇಶ ಕುಲಕರ್ಣಿ, ಶೇಖ ಬಬ್ಲು, ನಯೀಮ್, ವಿನ್ನು ಜೆ.ಡಿ, ರವಿ ಸಾಗರ, ಶರಣು ಡೋಣಗಾಂವ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Tags

CongressChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X