Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಪ್ರಿಯಾಂಕ್ ಖರ್ಗೆ ಜನ್ಮದಿನ:...

Chitapur | ಪ್ರಿಯಾಂಕ್ ಖರ್ಗೆ ಜನ್ಮದಿನ: ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ22 Nov 2026 8:15 PM IST
share
Chitapur | ಪ್ರಿಯಾಂಕ್ ಖರ್ಗೆ ಜನ್ಮದಿನ: ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

ಚಿತ್ತಾಪುರ : ರಾಜಕೀಯವೆಂದರೆ ಕೇವಲ ಅಧಿಕಾರ ಮತ್ತು ಸ್ವಾರ್ಥ ಸಾಧನೆಯಲ್ಲ. ಜನರ ಬದುಕಿನಲ್ಲಿ ಬದಲಾವಣೆ ತಂದು, ಶಿಕ್ಷಣ ಹಾಗೂ ಅಭಿವೃದ್ಧಿಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಕಲ್ಪಿಸುವುದೇ ನಿಜವಾದ ಜನಸೇವೆ. ಈ ನಿಟ್ಟಿನಲ್ಲಿ ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಜನಪರ ನಾಯಕ, ಅಭಿವೃದ್ಧಿಯ ಹರಿಕಾರ ಹಾಗೂ ಶಿಕ್ಷಣ ಪ್ರೇಮಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದರು.

ತಾಲೂಕಿನ ಇಂಗನಕಲ್ ಗ್ರಾಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.

ಪ್ರಿಯಾಂಕ್ ಖರ್ಗೆ ಅವರು ಅಧಿಕಾರವನ್ನು ಜನಸೇವೆಯ ಸಾಧನವನ್ನಾಗಿ ಬಳಸಿಕೊಂಡು ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಚಿತ್ತಾಪುರ ಹಾಗೂ ವಾಡಿ ಪಟ್ಟಣಗಳಲ್ಲಿ ಬೃಹತ್ ಶಿಕ್ಷಣ ಹಬ್ಬದಂತಹ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಆಶಾವಾದ ಮೂಡಿಸಿದ್ದಾರೆ. ಬಡವರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಏಳಿಗೆಯನ್ನು ತಮ್ಮ ರಾಜಕೀಯದ ಪ್ರಮುಖ ಆಶಯವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಚಿತ್ತಾಪುರ ಕ್ಷೇತ್ರದ ಮತದಾರರು ಸತತ ಮೂರು ಬಾರಿ ಗೆಲ್ಲಿಸುವ ಮೂಲಕ ಪ್ರಿಯಾಂಕ್ ಖರ್ಗೆ ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟಿದ್ದಾರೆ. ಈ ಜನಬೆಂಬಲ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಬಲ ನೀಡಿದೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ವಿಚಾರದಲ್ಲಿಯೂ ಅವರು ಕಠಿಣ ನಿಲುವು ಹೊಂದಿದ್ದಾರೆ. ಇಂತಹ ನಾಯಕನ ಜನ್ಮದಿನವನ್ನು ಕೇವಲ ಆಡಂಬರದ ಆಚರಣೆಗೆ ಸೀಮಿತಗೊಳಿಸದೆ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಮೂಲಕ ಸಮಾಜಕ್ಕೆ ಉಪಯುಕ್ತವಾಗುವ ರೀತಿಯಲ್ಲಿ ಆಚರಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜಕಾರಣದಲ್ಲಿ ಅಧಿಕಾರಕ್ಕೆ ಬಂದ ಕೆಲವರು ತಮ್ಮ ಕುಟುಂಬದ ಆಸ್ತಿ ಸಂಪಾದನೆಗೆ ಆದ್ಯತೆ ನೀಡುತ್ತಾರೆ. ಆದರೆ ಪ್ರಿಯಾಂಕ್ ಖರ್ಗೆ ಅವರು ಯಾವುದೇ ಸ್ವಾರ್ಥದ ಹಿತಾಸಕ್ತಿಗೆ ಒಳಗಾಗದೆ, ಎಲ್ಲ ಜಾತಿ, ಧರ್ಮ ಹಾಗೂ ಸಮುದಾಯಗಳ ಜನರನ್ನು ತಮ್ಮವರೆಂದು ಭಾವಿಸಿ, ಅವರ ಏಳಿಗೆಯನ್ನೇ ತಮ್ಮ ಏಳಿಗೆಯೆಂದು ಪರಿಗಣಿಸಿದ್ದಾರೆ. ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಹೊಂದಿದ್ದ ಚಿತ್ತಾಪುರ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪೆನ್ನು, ಪುಸ್ತಕ, ಕಂಪಾಸ್, ಪರೀಕ್ಷಾ ಪ್ಯಾಡ್, ಕಲಿಕಾ ಪುಸ್ತಕಗಳು, ನೋಟ್‌ಬುಕ್‌ಗಳು ಹಾಗೂ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಅಂಕಲಿಪಿಗಳನ್ನು ವಿತರಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಸ್ಲೇಟ್, ಪೆನ್ಸಿಲ್ ಹಾಗೂ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.

ಮುಖಂಡರಾದ ಅನಿಲಕುಮಾರ ಹುಣಚಿಕರ್, ನಾಗರಾಜ ಗಾಯಕವಾಡ ಹಾಗೂ ಪ್ರಭುಲಿಂಗ ಮಂಗಲಗಿ ಮಾತನಾಡಿದರು.

ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ ದಂಡೆ, ಸಿದ್ದಣ್ಣ ಮಗಿ, ನಾಗರಾಜ ಬಂಡಿವಡ್ಡರ್, ದೇವಾನಂದ ಮಂಗಲಗಿ, ರೇವಣಸಿದ್ಧ ಹಡಪದ್, ರೇವಣಸಿದ್ಧ ಮಂಗಲಗಿ, ಸುನೀಲ ಮಂಗಲಗಿ, ಮಲ್ಲಪ್ಪ ಕಂದಗೋಳ, ಮಹಾದೇವ ಮಹಾಗಾಂವಕರ್, ಮನೋಹರ ಕಟ್ಟಿಮನಿ, ದೀಪಕ ಹೊಸ್ಮನಿ, ಕಾಶಿನಾಥ ಬೆಳಗುಂಪಾ, ಶರಣಪ್ಪ ಕದ್ದರಗಿ, ಚಂದ್ರಶೇಖರ ಕೊರಬಾ, ಶಿವಯೋಗಿ ಹೊಸಮನಿ, ರಫೀಕ್ ದುಕಾನದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಲ್ಕಪ್ಪ ತೆಂಗಳಿ ನಿರೂಪಿಸಿದರು. ಪರಮೇಶ್ವರ ಬೆನಕನಪಳ್ಳಿ ಸ್ವಾಗತಿಸಿದರು. ಹಾಜಿಸಾಬ್ ದುಕಾನದಾರ್ ವಂದಿಸಿದರು.

Tags

ChitapurPriyank KhargeChildrenGovernment Schools
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X