Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ದಂಡೋತಿ ಮೊರಾರ್ಜಿ ವಸತಿ...

Chitapur | ದಂಡೋತಿ ಮೊರಾರ್ಜಿ ವಸತಿ ಶಾಲೆಗೆ ಬಿಜೆಪಿ ನಾಯಕರ ಭೇಟಿ : ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ15 July 2026 6:55 PM IST
share
Chitapur | ದಂಡೋತಿ ಮೊರಾರ್ಜಿ ವಸತಿ ಶಾಲೆಗೆ ಬಿಜೆಪಿ ನಾಯಕರ ಭೇಟಿ : ಪರಿಶೀಲನೆ
ಅಧಿಕಾರಿಗಳ ಅಮಾನತು, ಆಹಾರ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಆಗ್ರಹ

ಚಿತ್ತಾಪುರ : ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕರಾದ ಬಸವರಾಜ ಮತ್ತಿಮೂಡ, ಡಾ. ಅವಿನಾಶ ಜಾಧವ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿ ಶಾಲೆಯಲ್ಲಿನ ಸೌಲಭ್ಯಗಳು ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಶಾಲೆಯ ಆಹಾರ ಸಂಗ್ರಹಣಾ ಕೇಂದ್ರ, ಅಡುಗೆ ಕೋಣೆ, ಆಡಳಿತ ವಿಭಾಗ, ಶೌಚಾಲಯ, ಕುಡಿಯುವ ನೀರಿನ ಘಟಕ, ಗಾರ್ಡನ್, ಆಟದ ಮೈದಾನ ಹಾಗೂ ಸ್ವಚ್ಛತೆ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳು, ಪಾಲಕರು ಮತ್ತು ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳು ಹಾಗೂ ಪಾಲಕರು, ವಸತಿ ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ, ಕುಡಿಯುವ ನೀರಿನ ಅಭಾವ, ಗುಣಮಟ್ಟದ ಆಹಾರ ನೀಡದಿರುವುದು ಹಾಗೂ ಸ್ವಚ್ಛತೆ ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡರು.

ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಮಾತನಾಡಿ, ಇತ್ತೀಚೆಗೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡದಿರುವುದು ಬೇಜವಾಬ್ದಾರಿತನದ ನಡೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಮಾನತುಗೊಳಿಸಿ, ಆಹಾರ ಸರಬರಾಜು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೆನು ಪ್ರಕಾರ ಆಹಾರ ವಿತರಿಸಲಾಗುತ್ತಿಲ್ಲ. ವೆಜ್, ನಾನ್‌ವೆಜ್, ಮೊಟ್ಟೆ, ತರಕಾರಿ ಸೇರಿದಂತೆ ಹಲವು ಆಹಾರ ಪದಾರ್ಥಗಳ ಪೂರೈಕೆಯಲ್ಲಿ ಅಕ್ರಮ ನಡೆದಿದ್ದು, ವಾರ್ಡನ್ ಹಾಗೂ ಸಂಬಂಧಿತ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಫುಡ್ ಪಾಯಿಸನ್ ಘಟನೆಯಿಂದ ಭಯಗೊಂಡಿರುವ ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರಲು ಅಗತ್ಯ ಮೂಲಸೌಕರ್ಯ ಹಾಗೂ ಸುರಕ್ಷತಾ ಕ್ರಮಗಳನ್ನು ತಕ್ಷಣ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಶಾಲೆಯಲ್ಲಿನ ಲೋಪದೋಷಗಳ ಕುರಿತು ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಸಲ್ಲಿಸಲಾಗುವುದು. ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಸ್ಥಿತಿ ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಕರೆಯಬೇಕು ಎಂದು ತೇಲ್ಕೂರ್ ಹೇಳಿದರು.

ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲಿಯೇ ಇಂತಹ ಪರಿಸ್ಥಿತಿ ಇದ್ದರೆ ಉಳಿದ ತಾಲೂಕುಗಳ ಸ್ಥಿತಿ ಹೇಗಿರಬಹುದು ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಾಬುರಾವ್ ಚವ್ಹಾಣ, ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಮುಖಂಡರಾದ ಶರಣಪ್ಪ ತಳವಾರ, ಧರ್ಮಣ್ಣ ಇಟಗಿ, ಮಲ್ಲಿಕಾರ್ಜುನ ಎಮ್ಮೆನೋರ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಆನಂದ ಪಾಟೀಲ ಆಳಂದ, ಗುಂಡು ಮತ್ತಿಮುಡ್, ವೀರಣ್ಣ ಯಾರಿ, ಸುರೇಶ್ ರಾಠೋಡ ಸೇರಿದಂತೆ ಇತರರು ಇದ್ದರು.

Tags

Morarji residential schoolBJPChittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X