Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ | ಕಣ್ಣಿನ ಆರೋಗ್ಯ...

ಚಿತ್ತಾಪುರ | ಕಣ್ಣಿನ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ : ಡಾ.ನವನೀತಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ12 Jan 2026 9:15 PM IST
share
ಚಿತ್ತಾಪುರ | ಕಣ್ಣಿನ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ : ಡಾ.ನವನೀತಾ ರೆಡ್ಡಿ

ಚಿತ್ತಾಪುರ : ಮನುಷ್ಯನ ಅಂಗಾಂಗಗಳಲ್ಲಿ ಕಣ್ಣು ಅತ್ಯಂತ ಮಹತ್ವದ್ದು ಮತ್ತು ಅಮೂಲ್ಯವಾದದ್ದು, ಕಣ್ಣಿನ ಆರೋಗ್ಯ ಸಮಸ್ಯೆ ಕಂಡು ಬಂದರೇ ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯರನ್ನು ಭೇಟಿ ಮಾಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಯಾದಗಿರಿಯ ವೇಧಾ ಕಣ್ಣಿನ ಆಸ್ಪತ್ರೆಯ ನೇತ್ರ ವೈದ್ಯರಾದ ಡಾ.ನವನೀತಾ ರೆಡ್ಡಿ ಅವರು ಜನರಿಗೆ ಹೇಳಿದರು.

ತಾಲೂಕಿನ ಕಮರವಾಡಿ ಗ್ರಾಮದ ಸಮಾಜ ಸೇವಕ, ಬೆಂಗಳೂರಿನ ಪ್ರತಿಷ್ಠಿತ ಮಣಿಪಾಲ ಆಸ್ಪತ್ರೆಯ ಸೇವಾ ಪುರಸ್ಕೃತ ದಿ.ಶಾಂತಪ್ಪ ಇಂದೂರ ಅವರ ಪ್ರಥಮ ಪುಣ್ಯಸ್ಮರಣೆ ಪ್ರಯುಕ್ತ ಇಂದೂರ ಕುಟುಂಬದಿಂದ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ, ಕನ್ನಡಕ ವಿತರಣೆ ಶಿಬಿರದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ವಯಸ್ಕರು ಕಣ್ಣಿನ ಸಮಸ್ಯೆಯಿಂದ ಬಳಲುವುದು ಕಂಡು ಬರುವುದು ಸಾಮಾನ್ಯವಾಗಿದೆ. ಕಣ್ಣಿನ ಆರೋಗ್ಯ ಸಮಸ್ಯೆ ಕುರಿತು ಸಕಾಲಕ್ಕೆ ಚಿಕಿತ್ಸೆ ಪಡೆಯದ ಕಾರಣ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಬಡವರ್ಗದ ನೇತ್ರ ಸಮಸ್ಯೆಯನ್ನು ಗುರುತಿಸಿ ಶಿಬಿರ ಆಯೋಜಿಸುವ ಮೂಲಕ ಇಂದೂರು ಪರಿವಾರ ಜನಪರ ಕಾಳಜಿ ಮೆರೆದಿರುವುದು ಶ್ಲಾಘನೀಯ ಎಂದು ಅವರು ಶ್ಲಾಘಸಿದರು.

ಗ್ರಾಮದ ಯುವಕ ಮುಖಂಡ, ಶಿಬಿರದ ಆಯೋಜಕ ಭೀಮಾಶಂಕರ ಇಂದೂರ ಮಾತನಾಡಿ, ದಿ.ಶಾಂತಪ್ಪ ಇಂದೂರ ಅವರು ವೈದ್ಯಕೀಯ ಸೇವೆ ಮಾಡುವ ಮೂಲಕ ವಿವಿಧ ಗ್ರಾಮಗಳ ಬಡವರ ಆರೋಗ್ಯ ಕಾಳಜಿ ಮೆರೆದಿದ್ದರು. ಸದಾ ನೊಂದವರ ಪರ ಕಳಕಳಿ ಹೊಂದಿದ್ದರು. ಅವರ ಆಶಯಕ್ಕೆ ಪೂರಕವಾಗಿ ನೇತ್ರ ತಪಾಸಣೆ ಹಾಗೂ ಉಚಿತ ಚಿಕಿತ್ಸಾ ಶಿಬಿರ ಆಯೋಜನೆ ಮಾಡಿದ್ದೇವೆ. ಬಡ ವಯೋವೃದ್ಧರ ಬಾಳಿಗೆ ಬೆಳಕು ಹರಿಸುವ ಸಣ್ಣ ಪ್ರಯತ್ನ ಮಾಡಿರುವುದು ತೃಪ್ತಿ ತಂದಿದೆ ಎಂದರು.

ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಎಸ್. ಬುಳ್ಳಾ, ಹಿರಿಯ ನಿರೀಕ್ಷಣಾಧಿಕಾರಿ ಕಿರಣಕುಮಾರ ಧನವಡಕರ್, ಆಪ್ತ ಸಮಾಲೋಚಕಿ ಮಂಜೂಳಾ ಗುಡುಬಾ, ಜಗದೇವಿ, ರಕ್ತ ತಪಾಸಣೆ ಅಧಿಕಾರಿ ಕೃಷ್ಣಾ, ಯಾದಗಿರಿ ವೇದಾ ಆಸ್ಪತ್ರೆಯ ಸಹಾಯಕ ವ್ಯವಸ್ಥಾಪಕ ನಾಗೇಂದ್ರ ರೆಡ್ಡಿ, ಸಿಬ್ಬಂದಿ ಮಲ್ಲೆಶಿ ಮಡಿವಾಳ, ರೇಶ್ಮಾ ಬೇಗಂ, ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿನಾಥ ಇಂದೂರ, ಬಿಜೆಪಿ ಮುಖಂಡ ವಿಠ್ಠಲ್ ವಾಲ್ಮೀಕಿ ನಾಯಕ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೊಪಸೇನ್, ಜಗದೇವ ದಿಗ್ಗಾವಂಕರ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಗ್ರಾಪಂ ಸದಸ್ಯ ಪ್ರೇಮನಾಥ್ ದ್ಯಾವಕರ, ಮುಖಂಡರಾದ ವೀರಣ್ಣ ಸುಲ್ತಾಪುರ, ನಾಗರಾಜ ರೇಶ್ಮಿ, ಶಿವಶರಣಪ್ಪ ಯರಗಲ್, ಶಿವಶರಣಪ್ಪ ಶಿರವಾಳ, ಅಣ್ಣಪ್ಪಗೌಡ ಪೋ.ಪಾಟೀಲ್, ದೇವಪ್ಪಗೌಡ ಖ್ಯಾಮನೊರ, ಈಶಪ್ಪಗೌಡ ಪಾಟೀಲ, ಧೂಳಪ್ಪ ಯರಗಲ್, ಬಸವರಾಜಗೌಡ ದೇಶಮುಖ, ಅಯ್ಯಣ್ಣಗೌಡ ಪಾಟೀಲ, ಮಲ್ಲು ಇಂದೂರ, ಹರಿಸಿಂಗ್ ಚವ್ಹಾಣ, ಖದೀರ ಮುಲ್ಲಾ, ಮಲ್ಲಿನಾಥ ಕಾಶೇಟ್ಟಿ, ಮಲ್ಲಿನಾಥ ಮಡಿವಾಳ, ದ್ಯಾವಣ್ಣ ತಳವಾರ, ಗಣೇಶ ಗುತ್ತೇದಾರ, ಮಹಾದೇವಪ್ಪ ಕರಕನೋರ, ಬಾಬುರಾವ್ ಅಣಿಕೇರಿ, ಚಂದ್ರಪ್ಪ ಕೊಟಗಾರ, ಮರೆಪ್ಪ ಮಾಂಗ ಸೇರಿದಂತೆ ಇತರರು ಇದ್ದರು.

ಇದೇ ವೇಳೆ ಒಟ್ಟು 278 ಜನರಿಗೆ ನೇತ್ರ ತಪಾಸಣೆ ನಡೆಸಲಾಯಿತು. 91 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. 63 ಜನರ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ಶಿಬಿರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

Tags

healthChittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X