Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ | ದಿ.ವಿಠಲ್ ಹೇರೂರ ಮೂರ್ತಿ...

ಚಿತ್ತಾಪುರ | ದಿ.ವಿಠಲ್ ಹೇರೂರ ಮೂರ್ತಿ ಸರಕಾರವೇ ಸ್ಥಾಪನೆ ಮಾಡುವಂತೆ ಕೋಲಿ ಸಮಾಜ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Oct 2026 10:19 PM IST
share
ಚಿತ್ತಾಪುರ | ದಿ.ವಿಠಲ್ ಹೇರೂರ ಮೂರ್ತಿ ಸರಕಾರವೇ ಸ್ಥಾಪನೆ ಮಾಡುವಂತೆ ಕೋಲಿ ಸಮಾಜ ಆಗ್ರಹ

ಚಿತ್ತಾಪುರ; ಕಲಬುರಗಿ ನಗರದಲ್ಲಿನ ಹೈಕೋರ್ಟ್ ಹತ್ತಿರ ಅಫಜಲಪುರಕ್ಕೆ ಸಂಪರ್ಕಿಸುವ ವೃತ್ತದಲ್ಲಿ ಕೋಲಿ, ಕಬ್ಬಲಿಗ ಸಮಾಜದ ನಾಯಕ, ಹೋರಾಟಗಾರ ದಿ.ವಿಠಲ್ ಹೇರೂರ ಅವರ ಮೂರ್ತಿಯನ್ನು ಸರ್ಕಾರವೇ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ ಅವರ ನೇತೃತ್ವದಲ್ಲಿ ಮುಖಂಡರು ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾ‌ರ್ ಅವರಿಗೆ ಸಲ್ಲಿಸಿದರು.

ಕೋಲಿ, ಕಬ್ಬಲಿಗ ಸಮಾಜವನ್ನು ಸಂಘಟಿಸಿದ ಸಂಘಟನಾಕಾರ, ಸಮಾಜಕ್ಕೆ ಸಾಮಾಜಿಕ ನ್ಯಾಯ ಕೊಡಿಸಲು ತಮ್ಮ ಜೀವನವೇ ಪಣವಾಗಿಟ್ಟು ಕೊನೆ ಉಸುರಿನ ತನಕ ಹೋರಾಟ ನಡೆಸಿದ ಧೀಮಂತ ಹೋರಾಟಗಾರ, ಸರ್ವ ಸಮಾಜಗಳ ಪ್ರೀತಿ, ವಿಶ್ವಾಸ ಗಳಿಸಿದ ಸಾಮಾಜಿಕ ಹೋರಾಟಗಾರ ಕೋಲಿ, ಕಬ್ಬಲಿಗ ಸಮಾಜದ ನೇತಾರ ದಿ.ವಿಠಲ್ ಹೇರೂರ ಜೀ ಅವರ ಮೂರ್ತಿಯನ್ನು ಕಲಬುರಗಿ ನಗರದಲ್ಲಿರುವ ಹೈಕೋರ್ಟ್ ಸಮೀಪದಲ್ಲಿರುವ ಅಫಜಲಪುರಕ್ಕೆ ಸಂಪರ್ಕಿಸುವ ವೃತ್ತದಲ್ಲಿ ಸರ್ಕಾರದಿಂದ ಸ್ಥಾಪಿಸಬೇಕು ಅಥವಾ ಮೂರ್ತಿ ಸ್ಥಾಪನೆ ಮಾಡಿಕೊಳ್ಳಲು ಸಮಾಜಕ್ಕೆ ಸರ್ಕಾರದಿಂದ ಅಧಿಕೃತವಾಗಿ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.

ಕಳೆದ 2013 ರಿಂದ ಸದರಿ ವೃತ್ತದಲ್ಲಿ ದಿ.ವಿಠಲ್ ಹೇರೂರ ಅವರ ಭಾವಚಿತ್ರವುಳ್ಳ ನಾಮಫಲಕ ಹಾಕಿ ಪ್ರತಿ ವರ್ಷ ಪುಣ್ಯಸ್ಮರಣೆ, ಜಯಂತಿ, ಅನ್ನದಾಸೋಹ, ಪೂಜಾ ಕಾರ್ಯಕ್ರಮ ಮಾಡುತ್ತಾ ಬರಲಾಗುತ್ತಿದೆ. ಸದರಿ ವೃತ್ತವು ಈಗಾಗಲೇ ದಿ.ವಿಠಲ್ ಹೇರೂರ ವೃತ್ತ ಎಂದು ಪ್ರಸಿದ್ಧಿಯಾಗಿದೆ. ಆದರೆ, ಸದರಿ ವೃತ್ತದಲ್ಲಿ ಕುರುಬ ಸಮಾಜದ ಕೆಲವರು ರಾತ್ರೋರಾತ್ರಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಮೂರ್ತಿ ಇಟ್ಟಿದ್ದನ್ನು ಮಹಾನಗರ ಪಾಲಿಕೆ ಆಡಳಿತ ತಕ್ಷಣ ಸ್ಥಳದಿಂದ ತೆರವುಗೊಳಿಸಿದೆ. ಒಂದು ಸಮಾಜದ ನಾಯಕನ ಹೆಸರಲ್ಲಿ ನಾಮಫಲಕ ಹಾಕಿದ್ದು ಗೊತ್ತಿದ್ದರೂ ಮೂರ್ತಿ ತಂದು ಕೂಡಿಸಿದ್ದು ಕೋಲಿ, ಕಬ್ಬಲಿಗ ಸಮಾಜಕ್ಕೆ ಅವಮಾನಿಸುವ, ಸಮಾಜದ ಸ್ವಾಭಿಮಾನಕ್ಕೆ ಧಕ್ಕೆ ತರುವ, ದಿ.ವಿಠಲ್ ಹೇರೂರ ಅವರಿಗೆ ಅವಮಾನಿಸುವ ಕೆಲಸ ಮಾಡಲಾಗಿದೆ. ಇದನ್ನು ಸಮಾಜವು ಎಂದಿಗೂ ಸಹಿಸುವುದಿಲ್ಲ. ಸದರಿ ವೃತ್ತದಲ್ಲಿ ದಿ.ವಿಠಲ್ ಹೇರೂರ ಅವರ ಮೂರ್ತಿ ಹೊರತುಪಡಿಸಿ ಬೇರೆ ಯಾರದ್ದೆ ಮೂರ್ತಿ ಕೂಡಿಸಲು ಬಿಡುವುದಿಲ್ಲ. ಸಮಾಜದ ಘನತೆ, ಗೌರವ, ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಯಾರೆ ಮಾಡಿದರೂ ಅದನ್ನು ಸಹಿಸುವುದಿಲ್ಲ ಮತ್ತು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.

ಸರಕಾರವು ಕುರುಬ ಸಮಾಜಕ್ಕೆ ಮನವರಿಕೆ ಮಾಡಿಕೊಟ್ಟು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ಸ್ಥಾಪನೆಗೆ ಅವಕಾಶ ಮಾಡಿಕೊಡಬಾರದು. ಕೋಲಿ, ಕಬ್ಬಲಿಗ ಸಮಾಜದ ಮನವಿ ಕಡೆಗಣಿಸಿದರೆ ಸಮಾಜವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಮುಖಂಡರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕೋಲಿ ಸಮಾಜದ ಗೌರವಾಧ್ಯಕ್ಷ ರಾಮಲಿಂಗ ಬಾನರ್, ಪ್ರಧಾನ ಕಾರ್ಯದರ್ಶಿ ಕರಣಕುಮಾರ ಅಲ್ಲೂರ, ನಗರಾಧ್ಯಕ್ಷ ಪ್ರಭು ಹಲಕರ್ಟಿ, ಮುಖಂಡರಾದ ಭೀಮಣ್ಣ ಹೊತಿನಮಡಿ, ಶರಣಪ್ಪ ನಾಶಿ, ಬಸವರಾಜ ಚಿನ್ನಮಳ್ಳಿ, ಮಲ್ಲಿಕಾರ್ಜುನ ಎಮ್ಮೆನೋರ, ಲಕ್ಷ್ಮೀಕಾಂತ ಸಾಲಿ, ಮುನಿಯಪ್ಪ ಕೊಳ್ಳಿ, ಚಂದ್ರು ಕಾಳಗಿ, ದೇವಿಂದ್ರ ಅರಣಕಲ್‌, ದತ್ತು ಮೈನಾಳಕರ್, ರಾಜು ಮುಧೋಳ, ಶರಣಪ್ಪ ಸಿದ್ರಾಮಗೋಳ, ಮಾರುತಿ ಇವಣಿ, ಶಿವಪ್ಪ ದೊಡ್ಡಮನಿ, ದಶರಥ ದೊಡ್ಡಮನಿ, ಮಲ್ಲು ಕೊಳಕೋರ ಸೇರಿದಂತೆ ಇತರರು ಇದ್ದರು.

Tags

Chittapurgovernment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X