ಚಿತ್ತಾಪುರ | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ನೆರವು : 35 ಸಾವಿರ ಮಾದರಿ ಪ್ರಶ್ನೆ ಪತ್ರಿಕೆ ಪುಸ್ತಕ ವಿತರಣೆ

ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಯಕ್ತಿಕ ಹಣದಿಂದ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಕೆಗೆ ನೆರವಾಗುವ ಉದ್ದೇಶದಿಂದ ಪಠ್ಯಕ್ರಮ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿಯ 35,000 ಪುಸ್ತಕಗಳನ್ನು ವಿತರಿಸುತ್ತಿದ್ದಾರೆ.
ಈ ಯೋಜನೆಯಡಿ ಕಲಬುರಗಿಯಲ್ಲಿ ಸಾಂಕೇತಿಕವಾಗಿ ಐದು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಚಾಲನೆ ನೀಡಿದರು.
ಚಿತ್ತಾಪುರ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ 4,800 ಮಾದರಿ ಪ್ರಶ್ನೆ ಪತ್ರಿಕೆ ಪುಸ್ತಕಗಳನ್ನು ನೀಡಲಾಗಿದೆ. ಇದುವರೆಗೆ ತಾಲೂಕಿನ ಶೇ.95 ಶಾಲೆಗಳಿಗೆ ವಿತರಣೆ ಪೂರ್ಣಗೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಮಾಹಿತಿ ನೀಡಿದರು.
Next Story





