Chitapur | ಸೆ.19ರಂದು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

ಚಿತ್ತಾಪುರ : ಅನುದಾನ ರಹಿತ (ಖಾಸಗಿ) ಶಿಕ್ಷಣ ಸಂಸ್ಥೆಗಳು ಹಾಗೂ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ತಾಲೂಕು ಅಧ್ಯಕ್ಷ ಜಗದೇವ ದಿಗ್ಗಾಂವಕರ್ ಹಾಗೂ ಕಾರ್ಯದರ್ಶಿ ರವಿ ಕುಲಕರ್ಣಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾವೂರಿನ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ಮ.ನಿ.ಪ್ರ. ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದು, ಗೃಹ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಡಿಪಿಐ ಶಂಕ್ರಮ್ಮ ಡವಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಖ್ಯಾತ ವೈದ್ಯ ಹಾಗೂ ಸಮಾಜಸೇವಕ ಡಾ. ಫಾರೂಕ್ ಮಣ್ಣೂರ, ಉದ್ಯಮಿ ಶಿವರೆಡ್ಡಿಗೌಡ ಪಾಟೀಲ್ ಹಾಗೂ ಒಕ್ಕೂಟದ ಜಿಲ್ಲಾಧ್ಯಕ್ಷ ಸುನೀಲ್ ಹುಡಗಿ ಭಾಗವಹಿಸಲಿದ್ದಾರೆ.
ಗೌರವ ಸಲಹೆಗಾರರಾದ ನಾಗರೆಡ್ಡಿ ಪಾಟೀಲ್ ಕರದಾಳ, ಲಿಂಗರೆಡ್ಡಿಗೌಡ ಬಾಸರೆಡ್ಡಿ ನಾಲವಾರ, ಅಮರೇಶ್ವರಿ ಬಾಬುರಾವ ಚಿಂಚನಸೂರ ಹಾಗೂ ಡಾ. ಚಂದ್ರಶೇಖರ ಕಾಂತ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ತಾಲೂಕಿನ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಒಕ್ಕೂಟ ಮನವಿ ಮಾಡಿದೆ.






