ಚಿತ್ತಾಪುರ: ಪೊಲೀಸ್ ಬಂದೋಬಸ್ತ್ ನಲ್ಲಿ ಆರೆಸ್ಸೆಸ್ ಪಥ ಸಂಚಲನ

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸುಮಾರು 300 ಗಣವೇಶಧಾರಿಗಳಿಂದ ಆರೆಸ್ಸೆಸ್ ಪಥ ಸಂಚಲನ ರವಿವಾರ ನಡೆಯಿತು.
ಚಿತ್ತಾಪುರ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾದ ಪಥ ಸಂಚಲನ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ ವೃತ್ತ, ಅಂಬೇಡ್ಕರ್ ವೃತ್ತ, ರಾಘವೇಂದ್ರ ಖಾನಾವಳಿ, ಕೆನರಾ ಬ್ಯಾಂಕ್, ತಾ.ಪಂ ಕಚೇರಿ ವೃತ್ತದ ಮೂಲಕ ಪುನಃ ಬಜಾಜ್ ಕಲ್ಯಾಣ ಮಂಟಪಕ್ಕೆ ತಲುಪಿತು.
300 ಗಣವೇಶಧಾರಿಗಳು ಹಾಗೂ 50 ಜನ ಘೋಷವಾದಕರಿಂದ ಪಥ ಸಂಚಲನ ನಡೆಯಿತು.
ಪಥ ಸಂಚಲನದಲ್ಲಿ ಭಾಗವಹಿಸಿದ ಗಣವೇಶಧಾರಿಗಳಿಗೆ ಹಲವರು ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಆರೆಸ್ಸೆಸ್ ನ ಹಲವು ಮುಖಂಡರು ಸೇರಿದಂತೆ ಇತರರು ಇದ್ದರು.
ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
Next Story







