ಚಿತ್ತಾಪುರ | ಸೇಂದಿ ಡಿಪೋಗೆ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ : ಪರಿಶೀಲನೆ

ಚಿತ್ತಾಪುರ : ಪಟ್ಟಣದ ಸೇಂದಿ ಡಿಪೋಗೆ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಜ.12ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಿತ್ತಾಪುರ ಪಟ್ಟಣಕ್ಕೆ ಆಗಮಿಸುತ್ತಿದ್ದು, ಹೀಗಾಗಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪ್ರತಿಯೊಬ್ಬರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಇದೇ ವೇಳೆ ಪಾರ್ಕಿಂಗ್ ವ್ಯವಸ್ಥೆ, ಊಟದ ವ್ಯವಸ್ಥೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಿಇಓ ಭಂವ್ಹಾರ್ ಸಿಂಗ್ ಮೀನಾ, ಸೇಡಂ ಎಸಿ ಪ್ರಭು ರೆಡ್ಡಿ, ಡಿವೈಎಸ್ಪಿ ಶಂಕರಗೌಡ ಪಾಟೀಲ್, ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾಪಂ ಇಓ ಅಕ್ರಂ ಪಾಶಾ, ಮಹೇಮೂದ್ ಸಾಹೇಬ್, ನಾಗರೆಡ್ಡಿ ಪಾಟೀಲ್, ಮುಕ್ತಾರ ಪಟೇಲ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.
Next Story







