Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಪಟ್ಟಣದ ಸ್ವಚ್ಛತೆ...

Chitapur | ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು: ಭಾರತಿ ದಂಡೋತಿ

ವಾರ್ತಾಭಾರತಿವಾರ್ತಾಭಾರತಿ24 Sept 2026 6:47 PM IST
share
Chitapur | ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು: ಭಾರತಿ ದಂಡೋತಿ

ಚಿತ್ತಾಪುರ: ಪಟ್ಟಣದ ಸೌಂದರ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಚಿತ್ತಾಪುರ ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಹೇಳಿದರು.

ಪಟ್ಟಣದ ಕಿಂಗ್ ಪ್ಯಾಲೇಸ್ ಸಭಾಂಗಣದಲ್ಲಿ ಚಿತ್ತಾಪುರ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೌರ ಕಾರ್ಮಿಕರು ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದಲೇ ಕರ್ತವ್ಯಕ್ಕೆ ಹಾಜರಾಗಿ, ಸಾರ್ವಜನಿಕರು ಎಚ್ಚರಗೊಳ್ಳುವ ಮುನ್ನವೇ ಪಟ್ಟಣದ ಪ್ರಮುಖ ಹಾಗೂ ಆಂತರಿಕ ರಸ್ತೆಗಳನ್ನು ಸ್ವಚ್ಛಗೊಳಿಸುತ್ತಾರೆ. ಅವರ ಈ ನಿಸ್ವಾರ್ಥ ಸೇವೆಗೆ ಸಮಾಜ ಕೃತಜ್ಞತೆ ಮತ್ತು ಗೌರವ ಸಲ್ಲಿಸಬೇಕು ಎಂದು ಹೇಳಿದರು.

ಪೌರ ಕಾರ್ಮಿಕರು ದುಶ್ಚಟಗಳಿಂದ ದೂರವಿದ್ದು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಸಮಾರಂಭವನ್ನು ಉದ್ಘಾಟಿಸಿದ ಸಿಪಿಐ ಎಸ್.ಸಿ.ಪಾಟೀಲ್ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಜೊತೆಗೆ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಅವರ ಉಜ್ವಲ ಭವಿಷ್ಯ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.

ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸಾಯಬಣ್ಣ ಕಾಶಿ, ಉಪಾಧ್ಯಕ್ಷ ವೆಂಕಟೇಶ ಅಧಿಕಾರಿಗಳಾದ ಶಬಾನಾ ಬೇಗಂ, ವಿಠಲ್ ಹಾದಿಮನಿ, ಸುನೀಲ್ ಕುಮಾರ್, ಲೋಹಿತ್ ಕಟ್ಟಿಮನಿ, ಶರಣಕುಮಾರ ಮುಕೆ, ಮುತ್ತಣ್ಣ ಭಂಡಾರಿ, ರವಿಶಂಕರ್, ಕ್ರಾಂತಿದೇವಿ ಮಲ್ಲಿಕಾರ್ಜುನ, ಮರೇಪ್ಪ, ರಾಜಕುಮಾರ್, ಅಂಬಾರಾಯ, ಭೀಮು ಸೇರಿದಂತೆ ಪುರಸಭೆಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಕಾರ್ಮಿಕರು ಇದ್ದರು.

ಇದೇ ವೆಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೌರ ಕಾರ್ಮಿಕರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಇದಕ್ಕೂ ಮುನ್ನ ಪುರಸಭೆ ಕಚೇರಿಯಿಂದ ಲಾಡ್ಜಿಂಗ್ ಕ್ರಾಸ್ ವರೆಗೆ ಮೆರವಣಿಗೆ ನಡೆಯಿತು.

Tags

Chittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X