Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ | ಮಾನಸಿಕ ಅಶಕ್ತ ಮಕ್ಕಳ...

ಚಿತ್ತಾಪುರ | ಮಾನಸಿಕ ಅಶಕ್ತ ಮಕ್ಕಳ ಮಾಸಾಶನ ಮೂರು ತಿಂಗಳಿಂದ ಸ್ಥಗಿತ: ಸಂಕಷ್ಟದಲ್ಲಿ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ20 Jun 2026 11:04 PM IST
share
ಚಿತ್ತಾಪುರ | ಮಾನಸಿಕ ಅಶಕ್ತ ಮಕ್ಕಳ ಮಾಸಾಶನ ಮೂರು ತಿಂಗಳಿಂದ ಸ್ಥಗಿತ: ಸಂಕಷ್ಟದಲ್ಲಿ ಕುಟುಂಬ

ಚಿತ್ತಾಪುರ: ಪಟ್ಟಣದ ಖಾಜಿಪುರ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಜಿ ನಜೀಮೊದ್ದಿನ್ (ಅಂಜುಮ್) ಅವರ ಇಬ್ಬರು ಮಾನಸಿಕ ಅಶಕ್ತರು ಮಕ್ಕಳಿಗೆ ಕಳೆದ ಮೂರು ತಿಂಗಳಿಂದ ಮಾಸಾಶನ ಹಣ ಜಮೆಯಾಗದೆ ಇರುವುದರಿಂದ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಬಾಕಿ ಇರುವ ಮಾಸಾಶನ ಬಿಡುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ಖಾಜಿಪುರ ನಿವಾಸಿ ಖಾಜಿ ನಜೀಮೊದ್ದಿನ್ ಅವರು ಸುಮಾರು ಇಪ್ಪತ್ತು ವರ್ಷಗಳ ಕಾಲ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದರು. ವಯೋಸಹಜ ಕಾರಣಗಳಿಂದ ಆ ಕೆಲಸವನ್ನು ತೊರೆದು, ಪ್ರಸ್ತುತ ಮನೆಯ ಸಮೀಪ ಸಣ್ಣ ಅಂಗಡಿ ನಡೆಸುತ್ತ ಜೀವನ ಸಾಗಿಸುತ್ತಿದ್ದಾರೆ. ಅವರಿಗೆ ಇಬ್ಬರು ಮಾನಸಿಕ ಅಶಕ್ತ ಮಕ್ಕಳಿದ್ದು, ಪ್ರೌಢಾವಸ್ಥೆಗೆ ಬಂದಿದ್ದರೂ ಸ್ವಯಂ ಜೀವನ ನಡೆಸುವ ಸಾಮರ್ಥ್ಯ ಹೊಂದಿಲ್ಲ. ತಂದೆ-ತಾಯಿ ಆರೈಕೆ ಮಾಡಿದಾಗ ಮಾತ್ರ ದಿನನಿತ್ಯದ ಚಟುವಟಿಕೆಗಳನ್ನು ನಿರ್ವಹಿಸುವ ಪರಿಸ್ಥಿತಿಯಲ್ಲಿದ್ದಾರೆ.

ಕೊರೊನಾ ಅವಧಿಯಲ್ಲಿ ಪತ್ನಿಯನ್ನು ಕಳೆದುಕೊಂಡಿರುವ ನಜೀಮೊದ್ದಿನ್ ಅವರು, ಈಗ ಮಕ್ಕಳ ಆರೈಕೆ ಹಾಗೂ ಜೀವನ ನಿರ್ವಹಣೆಯ ಹೊಣೆಗಾರಿಕೆಯನ್ನು ಏಕಾಂಗಿಯಾಗಿ ನಿಭಾಯಿಸುತ್ತಿದ್ದಾರೆ. ಕಡು ಬಡತನದ ನಡುವೆಯೂ ಮಕ್ಕಳ ಚಿಕಿತ್ಸಾ ವೆಚ್ಚ, ಆಹಾರ ಮತ್ತು ಇತರ ಅಗತ್ಯಗಳನ್ನು ಪೂರೈಸಲು ಹರಸಾಹಸ ಪಡುತ್ತಿದ್ದಾರೆ.

ಸರ್ಕಾರದಿಂದ ಪ್ರತಿ ಮಗುವಿಗೆ ಮಾಸಾಶನವಾಗಿ ದೊರೆಯುವ ಹಣವೇ ಕುಟುಂಬದ ಪ್ರಮುಖ ಆಧಾರವಾಗಿತ್ತು. ಆದರೆ ಕಳೆದ ಮೂರು ತಿಂಗಳಿಂದ ಮಾಸಾಶನ ಜಮೆಯಾಗದ ಕಾರಣ ಮಕ್ಕಳಿಗೆ ಅಗತ್ಯವಿರುವ ಮಾತ್ರೆಗಳು, ಸಿರಪ್ ಹಾಗೂ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಮಕ್ಕಳ ಆರೋಗ್ಯದಲ್ಲಿಯೂ ಏರುಪೇರಾಗುತ್ತಿರುವುದಾಗಿ ನಜೀಮೊದ್ದಿನ್ ಅವರು ಅಳಲು ತೋಡಿಕೊಂಡಿದ್ದಾರೆ.

“ಮಾಸಾಶನಕ್ಕಾಗಿ ಸಂಬಂಧಪಟ್ಟ ಕಚೇರಿಗಳಿಗೆ ಅಲೆದಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಮಕ್ಕಳ ಆರೈಕೆ ಮತ್ತು ಚಿಕಿತ್ಸೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದೇನೆ,” ಎಂದು ಅವರು ತಿಳಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯ ದೃಷ್ಟಿಯಿಂದ ಪ್ರಕರಣವನ್ನು ಪರಿಗಣಿಸಿ, ಬಾಕಿ ಇರುವ ಮೂರು ತಿಂಗಳ ಮಾಸಾಶನವನ್ನು ತಕ್ಷಣ ಬಿಡುಗಡೆ ಮಾಡಿ ಫಲಾನುಭವಿಗಳ ಮನೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags

Chittapurmentally challengedchildren
share
ವಾರ್ತಾಭಾರತಿ
ವಾರ್ತಾಭಾರತಿ
Next Story
X