ಚಿತ್ತಾಪುರ | ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಸನ್ಮಾನ

ಕಲಬುರಗಿ : ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ನೂತನ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ದೇವು ಯಾಬಾಳ ದಿಗ್ಗಾಂವ ಹಾಗೂ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಜು ಬುಳಕರ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ನಂತರ ಕೆಪಿಸಿಸಿ ಸದಸ್ಸ ನಾಗರೆಡ್ಡಿ ಪಾಟೀಲ್ ಕರದಾಳ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಯುವಕರ ಪಾತ್ರ ಮಹತ್ವದಾಗಿದೆ. ಹೀಗಾಗಿ ಪ್ರತಿಯೊಬ್ಬ ಯುವಕರು ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರಳು ದುಡಿಯಬೇಕು ಎಂದರು.
ಹಿಂದಿನ ಯುವ ಕಾಂಗ್ರೆಸ್ ಅಧ್ಯಕ್ಷ ಸಂಜು ಬುಳಕರ್ ಅವರು ಪಟ್ಟಣ ಸೇರಿದಂತೆ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪಕ್ಷ ಸಂಘಟಿಸುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದಾರೆ. ಅವರಂತೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವು ಅವರು ಕೂಡ ರಾಜಕೀಯದಲ್ಲಿ ಸಣ್ಣ ಪುಟ್ಟ ವೈಮನಸ್ಸುಗಳಿಂದ ದೂರ ಉಳಿದಿರುತ್ತಾರೆ. ಅಂತವರ ವೈಮನಸ್ಸನ್ನು ಕಡೆಗಣಿಸುವ ಮೂಲಕ ಪಕ್ಷಕ್ಕೆ ಕರೆತರುವ ಕೆಲಸ ಮಾಡಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ದೇವು ಯಾಬಾಳ ಅವರು ಚುನಾವಣೆ ಮೂಲಕ ಅಧ್ಯಕ್ಷರಾಗಿದ್ದಾರೆ. ಯುವಕರು ಬೇರೆ ಬೇರೆ ಪಕ್ಷದ ಕಡೆ ಒಲವು ತೋರಿದ್ದಾರೆ. ಅಂತಹವರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ತರುವ ಕೆಲಸ ಮಾಡಬೇಕು ಎಂದರು.
ಕಾಂಗ್ರೆಸ್ ಪಕ್ಷ ಯಾವುದೇ ಕೆಲಸ ನೀಡಿದರು ಅದನ್ನು ಚಾಚು ತಪ್ಪದೇ ಮಾಡಬೇಕು. ಪಕ್ಷಕ್ಕಿಂತ ದೊಡ್ಡವರು ಯಾರು ಇಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅವರ ಆದೇಶವನ್ನು ಪಾಲಿಸಿ ಯುವ ಕಾರ್ಯಕರ್ತರು ಚಾಚು ತಪ್ಪದೇ ತಮ್ಮ ಕೆಲಸಗಳನ್ನು ಮಾಡಬೇಕು ಎಂದರು.
ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮುಕ್ತಾರ ಪಟೇಲ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮ ಎನ್ನುವುದು ಇಲ್ಲ. ಇಲ್ಲಿ ಎಲ್ಲರಿಗೂ ಸಮನಾದ ಅವಕಾಶಗಳಿವೆ ಎಂದರು.
ಇದೇ ವೆಳೆ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ದೇವು ಯಾಬಾಳ ದಿಗ್ಗಾಂವ ಅವರನ್ನು ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಅಭಾನಿಗಳು ಸನ್ಮಾನಿಸಿ ಗೌರವಿಸಿದರು.
ನಂತರ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಜು ಬುಳಕರ್ ಅವರು ನೂತನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ದೇವು ಯಾಬಾಳ ಅವರಿಗೆ ಧ್ವಜವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಾಳಗಿ, ಚಂದ್ರಶೇಖರ ಕಾಶಿ, ಹಣಮಂತ ಸಂಕನೂರ, ರಾಮಲಿಂಗ ಬಾನಾರ್, ನಿಂಗಣ್ಣ ಹೇಗಲೇರಿ, ನಾಗರೆಡ್ಡಿ ಗೋಪಸೇನ್, ಬಸವರಾಜ ಚಿನ್ನಮಳ್ಳಿ, ಮಲ್ಲಿಕಾರ್ಜುನ ಡೋಣಗಾಂವ, ಶೇಖ ಬಬ್ಲು, ಶರಣು ಡೋಣಗಾಂವ, ವಿಜಯ ಯಾಗಾಪುರ, ನಯೀಮ್, ಸಾಬಣ್ಣ ಡಿಗ್ಗಿ, ವಿನ್ನು ಕುಮಾರ, ನಜೀರ ಆಡಕಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.







