Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ರಾಜ್ಯದಲ್ಲಿಯೇ ಚಿತ್ತಾಪುರ ಮಾದರಿ...

ರಾಜ್ಯದಲ್ಲಿಯೇ ಚಿತ್ತಾಪುರ ಮಾದರಿ ಕ್ಷೇತ್ರವಾಗಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ4 July 2025 7:38 PM IST
share
ರಾಜ್ಯದಲ್ಲಿಯೇ ಚಿತ್ತಾಪುರ ಮಾದರಿ ಕ್ಷೇತ್ರವಾಗಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಳೆದ ಒಂದೂವರೆ ವರ್ಷದಿಂದ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಚಿತ್ತಾಪುರ ಕ್ಷೇತ್ರದ ಪ್ರತಿ ಹಳ್ಳಿ ಅಭಿವೃದ್ಧಿಗಾಗಿ ನೀಲಿನಕ್ಷೆ ತಯಾರಿಸಲಾಗಿದ್ದು, ಮುಂದಿನ ಎರಡು ವರ್ಷದಲ್ಲಿ ಅಭಿವೃದ್ಧಿಯ ಪರ್ವ ಚಿತ್ತಾಪುರ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ-ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ಅವರು ಚಿತ್ತಾಪುರ ಪಟ್ಟಣದಲ್ಲಿ18.41 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಜಾಸೌಧ ಕಟ್ಟಡ ಉದ್ಘಾಟಿಸಿ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿ ಒಟ್ಟು 517 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದ ಅವರು, ಚಿತ್ತಾಪುರ ಹಾಗೂ ವಾಡಿಗೆ ಸಂಬಂಧಿಸಿದಂತೆ ಇನ್ನೊಂದೆರೆಡು ತಿಂಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಹಾಗೂ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಚಿತ್ತಾಪುರ ಕ್ಷೇತ್ರದ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗಾಗಿ ಪ್ರತಿ ಹಳ್ಳಿಗೂ 10 ಕೋಟಿ ರೂ. ನಂತೆ ಯೋಜನೆ ಜಾರಿಗೆ ತರಲಾಗಿದೆ. ಪ್ರತಿ ಹಳ್ಳಿ ಅಭಿವೃದ್ಧಿಗಾಗಿ ಇಡಿ ರಾಜ್ಯದಲ್ಲಿಯೇ ಚಿತ್ತಾಪುರದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದರು.

ಇಂದು ಚಿತ್ತಾಪುರದಲ್ಲಿ 8 ರಿಂದ 10 ವಿವಿಧ ಭೂ ದಾಖಲೆಗಳನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ವಿವಿಧ ರೀತಿಯ ಆಸ್ತಿಗಳ ಡಿಜಿಟಲ್ ಹಕ್ಕು ಪತ್ರಗಳನ್ನು ವಿತರಿಸಲು ಚಾಲನೆ ನೀಡಲಾಗಿದೆ. ಇ-ಸ್ವತ್ತಿನ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಕಂಡುಕೊಂಡು ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರಿಗಾಗಿ ಮನೆ ಬಾಗಿಲನಲ್ಲಿ ಹಕ್ಕು-ಪತ್ರ ವಿತರಿಸಲಾಗಿದೆ ಎಂದು ಹೇಳಿದರು.

ಮುಂದಿನ ಮೂರು ವಾರದಲ್ಲಿ ಸಮೃದ್ಧಿ ಯೋಜನೆಯಡಿಯಲ್ಲಿ 50 ಕೋಟಿ ರೂ. ಅನುದಾನವನ್ನು ಚಿತ್ತಾಪುರದ ಮತಕ್ಷೇತ್ರಕ್ಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದ ಸಚಿವರು, ರಾಜ್ಯದಲ್ಲಿ ಕಂದಾಯ ಇಲಾಖೆಯಲ್ಲಿ ಅಮುಲಾಗ್ರ ಬದಲಾವಣೆ ತರಲಾಗಿದೆ. ಅದೇ ರೀತಿ ಜಿಲ್ಲೆಯಲ್ಲಿಯೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಾರ್ವಜನಿಕರಿಗೆ ತ್ವರಿತಗತಿಯಾಗಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಅಂಕಿ-ಅಂಶಗಳ ಅನ್ವಯ ಕರ್ನಾಟಕ ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ನಂಬರ್ ಒನ್ ಎಂದು ಹೇಳಿದೆ. ರಾಜ್ಯ ಸರ್ಕಾರ ಸಹ ದೇಶದಲ್ಲಿಯೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಇಲ್ಲಿನ ನೂತನ ಯೋಜನೆಗಳು ಹೇಳುತ್ತಿವೆ. ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳ ಸೃಜನೆ ಮಾಡಲಾಗಿದ್ದು, 15 ಲಕ್ಷ ಕಾಮಗಾರಿಗಳು ನಡೆದು 47 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿದೆ. ನಮ್ಮ ಇಲಾಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಲಬುರಗಿ ರೊಟ್ಟಿ ಬಗ್ಗೆ ಮಾತಾಡಿದ್ದಕ್ಕೆ ಪ್ರಧಾನಿಗೆ ಧನ್ಯವಾದ:

ಮನ್ ಕೀ ಬಾತ್ ನಲ್ಲಿ ಮಾತನಾಡಿದ ಪ್ರಧಾನಿಗಳು ಕಲಬುರಗಿ ರೊಟ್ಟಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಪ್ರಧಾನಿಯವರು ಮಹಿಳೆಯರ ಸ್ವಾವಲಂಬಿ ಜೀವನದ ಬಗ್ಗೆ ಕೊಂಡಾಡಿದ್ದಾರೆ, ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇಂತಹ ಸಾಧನೆ ಮಾಡಿರುವ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಪ್ರೋತ್ಸಾಹ ರೂಪದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಎಂದರು.

ಮುಂದಿನ ಮೂರು ವರ್ಷದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಿಸಲಾಗಿದೆ. ಕಲಬುರಗಿ ಹಾಗೂ ಚಿತ್ತಾಪುರ ಮತ್ತು ವಾಡಿ ಪಟ್ಟಣಗಳ ಅಭಿವೃದ್ದಿಗೆ ಖಾಸಗಿ ಸಂಸ್ಥೆಯೊಂದಿಗೆ ಮಾತುಕತೆ ನಡೆದಿದೆ. ಇದಕ್ಕೆ ಸಂಸದರ ಆಶೀರ್ವಾದ ಬೇಕಾಗುತ್ತದೆ. ವಾಡಿ ಹಾಗೂ ಚಿತ್ತಾಪುರ ಅಭಿವೃದ್ದಿಗೆ ತಲಾ100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ವೇದಿಕೆಯ ಮೇಲಿದ್ದ ಅದಾನಿ ಸಿಮೆಂಟ್ಸ್ ಕಂಪನಿಯ ಸಿ ಎಸ್ ಆರ್ ಫಂಡ್ ಅಧಿಕಾರಿಗಳಿಗೆ ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರು, ಶಾಸಕರಾದ ಎಂ ವೈ ಪಾಟೀಲ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಮಾತನಾಡಿದರು.

ವೇದಿಕೆಯ ಮೇಲೆ ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ ವೈ ಪಾಟೀಲ್, ಎಂಎಲ್ ಸಿ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರು, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಾಬುರಾವ್ ಚಿಂಚನಸೂರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು, ಅನ್ನಪೂರ್ಣ ನಾಗಪ್ಪ ಕಲ್ಲಕ್, ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಎಸಿ ಪ್ರಭುರೆಡ್ಡಿ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ನಾಗರೆಡ್ಡಿಕರದಾಳ, ಭೀಮಣ್ಣ ಸಾಲಿ, ಶ್ರೀನಿವಾಸ ಸಗರ, ಮಹೇಮೂದ್ ಸಾಹೇಬ್, ಅಝೀಝ್‌ ಸೇಠ ರಾವೂರು, ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X