Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪರಿಷ್ಕೃತ ಕನಿಷ್ಠ ವೇತನ ಜಾರಿಗೆ...

ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.10ರಂದು ಕಲಬುರಗಿಯಲ್ಲಿ ಸಿಐಟಿಯು ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Aug 2026 6:51 PM IST
share
ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.10ರಂದು ಕಲಬುರಗಿಯಲ್ಲಿ ಸಿಐಟಿಯು ಬೃಹತ್ ಪ್ರತಿಭಟನೆ

ಕಲಬುರಗಿ: ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಕಾರ್ಮಿಕ ಮತ್ತು ರೈತಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್‌ 10ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸಜ್ಜನ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್‌ ನಿರ್ದೇಶನದ ಆಧಾರದ ಮೇಲೆ ವೈಜ್ಞಾನಿಕ ಲೆಕ್ಕಾಚಾರದಂತೆ ಪರಿಷ್ಕರಿಸಿದ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮೇ 22, 2026ರಂದು ಸರ್ಕಾರ ಹೊರಡಿಸಿದೆ. ಆದರೆ ಎರಡು ತಿಂಗಳು ಕಳೆದರೂ ಪರಿಷ್ಕೃತ ವೇತನ ಜಾರಿಯಾಗಿಲ್ಲ. ಇದರಿಂದ ರಾಜ್ಯದ ಸುಮಾರು ಒಂದು ಕೋಟಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಮಾಲೀಕರ ಒತ್ತಡಕ್ಕೆ ಮಣಿಯದೆ ಕೂಡಲೇ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ರೈತರು ಈಗಾಗಲೇ ಸಾಲದ ಹೊರೆಯಿಂದ ತತ್ತರಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಖಾಸಗೀಕರಣ ನೀತಿಗಳಿಂದ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್, ದಿನಸಿ ಹಾಗೂ ಸಾರಿಗೆ ದರಗಳ ನಿರಂತರ ಏರಿಕೆಯಿಂದ ಜನರ ಜೀವನ ಮತ್ತಷ್ಟು ಸಂಕಷ್ಟಕ್ಕೀಡಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಭೂಸ್ವಾಧೀನ ಮತ್ತು ಕಾರ್ಪೊರೇಟ್ ಭೂ ಕಬಳಿಕೆ ವಿರೋಧಿಸಿ, ಕಾರ್ಮಿಕ ಸಂಹಿತೆಗಳ ಜಾರಿ ಹಿಂಪಡೆಯಲು, ಪರಿಷ್ಕೃತ ಕನಿಷ್ಠ ವೇತನ ಜಾರಿಗೆ, ವಿಬಿ ಗ್ರಾಮ್ ಜಿ ಕಾಯ್ದೆ ರದ್ದುಪಡಿಸಲು, ವಿದ್ಯುತ್ ತಿದ್ದುಪಡಿ ಕಾಯ್ದೆ–2025 ಹಾಗೂ ಬೀಜ ಕಾಯ್ದೆ ಮತ್ತು ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟಿನ ವಿರುದ್ಧವೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ಐತಿಹಾಸಿಕ “ಕ್ವಿಟ್ ಇಂಡಿಯಾ” ಚಳವಳಿಯ ಸ್ಫೂರ್ತಿಯಿಂದ ಆಗಸ್ಟ್‌ 10ರಂದು ತಿಮ್ಮಾಪುರ ಚೌಕದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಮುಖಂಡರಾದ ಶಾಂತಾ ಘಂಟಿ, ನಾಗಯ್ಯ ಸ್ವಾಮಿ, ಬಾಬು ಹೂವಿನಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

KalaburagiprotestCITU
share
ವಾರ್ತಾಭಾರತಿ
ವಾರ್ತಾಭಾರತಿ
Next Story
X