ಜ.12ರಂದು ಸೇಡಂ ಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಆಗಮನ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಸೇಡಂ: ಏತ ನೀರಾವರಿ, ಪಿಡಬ್ಲೂಡಿ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಅಡಿಗಲ್ಲು ಹಾಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ಜ.12 ರಂದು ಸೇಡಂ ಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು, ಡಿಕೆ ಶಿವುಕುಮಾರ ಸೇರಿದಂತೆ ಇನ್ನಿತರ ಸಚಿವರು ಆಗಮಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಆಡಳಿತ ಸೌಧದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇಡಂ ತಾಲೂಕು ಕ್ರೀಡಾಂಗಣದಲ್ಲಿ 12 ರಂದು ಮಧ್ಯಾಹ್ನ 2:30 ಗಂಟೆಗೆ ರಾಜ್ಯಸರಕಾರದಿಂದ ಸೇಡಂ ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು 500 ಕೋಟಿ ರೂ.ಗೂ ಅಧಿಕ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಹೀಗಾಗಿ ಈ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವುಕುಮಾರ್, ಸೇರಿದಂತೆ ಇನ್ನಿತರ ಸಚಿವರ ದಂಡು ಬರಲಿದ್ದ ಮೇಲಿನ ಕಾರ್ಯಕ್ರಮಗಳಿಗೆ ಅಡಿಗಲ್ಲು ಹಾಕಲಿದ್ದಾರೆ ಎಂದರು.
ತಾಲೂಕು ಕ್ರಿಡಾಂಗಣದ ವೇದಿಕೆ, ಒಳಾಂಗಣ ಕ್ರೀಡಾಂಗಣ, ಏತಾನೀರವಾರಿ ಯೋಜನೆ, ಪಿಡಬ್ಲೂಡಿ, ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿನ ಅಭಿವೃದ್ಧಿಕಾಮಗಾರಿಗಳ ಜೊತೆಗೆ ಸೇಡಂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.
ತಾಲೂಕು ಕ್ರೀಡಾಂಗಣಕ್ಕೆ ಭೇಟಿ, ಸ್ಥಳ ಪರಿಶೀಲನೆ :
ಸುದ್ದಿಗೋಷ್ಠಿಗೂ ಮುನ್ನ ಕಾರ್ಯಕ್ರಮ ನಡೆಯುವ ತಾಲೂಕು ಕ್ರೀಡಾಂಗಣಕ್ಕೆ ತೆರಳಿ ಕಾರ್ಯಕ್ರಮದ ಮುಖ್ಯ ವೇದಿಕೆ, ಜನರು ಕುಳಿತುಕೊಳ್ಳುವ ಸ್ಥಳ, ಪಾರ್ಕಿಂಗ್, ಊಟದ ಸ್ಥಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನ ಪಡೆದುಕೊಂಡರು.
ಇನ್ನು ಸಿಎಂ ಅವರು ಬರುವುದರಿಂದ ಪ್ರತಿ ಹಳ್ಳಿಯಿಂದಲೂ ಕಾರ್ಯಕರ್ತರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬರಲಿದ್ದು, ಯಾವುದೇ ತೊಂದರೆಯಾಗದಂತೆ ಅಚ್ಷುಕಟ್ಟಾದ ವ್ಯವಸ್ಥೆಯನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸಿಲ್ದಾರ್ ಶ್ರೀಯಾಂಕ ಧನಶ್ರೀ, ಡಿಎಸ್ಪಿ ಸಂಗಮನಾಥ ಹಿರೇಮಠ, ಬಸವರಾಜ ಪಾಟೀಲ ಊಡಗಿ, ಶಿವಶರಣರೆಡ್ಡಿ ಪಾಟೀಲ್, ರವೀಂದ್ರ ನಂದಿಗಾಮ್, ವಿಶ್ವನಾಥ ಪಾಟೀಲ್ ಬೊಮ್ಮನಹಳ್ಳಿ, ನಾಗೇಶ್ವರರಾವ್ ಮಾಲೀಪಾಟೀಲ್ ಸೇರಿದಂತೆ ಇನ್ನಿತರರಿದ್ದರು.







