Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ...

ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸಿ : ಶಾಸಕ ಅಲ್ಲಂಪ್ರಭು ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ2 July 2026 5:30 PM IST
share
ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸಿ : ಶಾಸಕ ಅಲ್ಲಂಪ್ರಭು ಪಾಟೀಲ್
ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಜಾಗೃತಿ ವಹಿಸುವಂತೆ ಸಾರ್ವಜನಿಕರಿಗೆ ಮನವಿ

ಕಲಬುರಗಿ : ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯಿಂದ ಪೂರ್ಣಗೊಳಿಸಿ, ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರಗಿ ದಕ್ಷಿಣ ಸೇರಿದಂತೆ ಜಿಲ್ಲೆಯ ಎಲ್ಲ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ವೈಯಕ್ತಿಕ ಮಾಹಿತಿಯನ್ನು ದೋಷರಹಿತವಾಗಿ ನವೀಕರಿಸುವುದರಿಂದ ಮಾತ್ರ ಪ್ರಜಾಪ್ರಭುತ್ವದ ಮೂಲಭೂತ ಹಕ್ಕನ್ನು ರಕ್ಷಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಯುವಕರು ಹಾಗೂ ಸಮಾಜದ ಎಲ್ಲ ವರ್ಗದವರು ಎಸ್‌ಐಆರ್ ಪ್ರಕ್ರಿಯೆಗೆ ಆದ್ಯತೆ ನೀಡಬೇಕು. ನಿಗದಿತ ಅವಧಿಯೊಳಗೆ ಮತದಾರರ ಮಾಹಿತಿ ನಮೂನೆಯನ್ನು ಭರ್ತಿ ಮಾಡಿ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಮನೆಗೆ ಭೇಟಿ ನೀಡುವ ಬಿಎಲ್‌ಒಗಳಿಂದ ಅಧಿಕೃತ ಸ್ವೀಕೃತಿ ರಶೀದಿಯನ್ನು ಪಡೆಯುವುದನ್ನೂ ಖಚಿತಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಎಸ್‌ಐಆರ್ ಫಾರಂ ಅನ್ನು ಪ್ರತಿಯೊಬ್ಬ ಮತದಾರರು ಸ್ವತಃ ಪರಿಶೀಲಿಸಿ ನಿಖರ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ತಮ್ಮ ಹೆಸರಿನ ಜೊತೆಗೆ ಕುಟುಂಬದ ಸದಸ್ಯರು ಹಾಗೂ ನೆರೆಹೊರೆಯವರ ಹೆಸರುಗಳೂ ಮತದಾರರ ಪಟ್ಟಿಯಲ್ಲಿ ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಅರ್ಹ ಮತದಾರರ ಹೆಸರು ಅನಗತ್ಯವಾಗಿ ಕೈಬಿಡದಂತೆ ಜಾಗೃತಿ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಹೆಸರು, ಜನ್ಮ ದಿನಾಂಕ, ವಿಳಾಸ ಹಾಗೂ ಕುಟುಂಬದ ವಿವರಗಳಲ್ಲಿ ತಪ್ಪುಗಳಿದ್ದರೆ ಮುಂದಿನ ದಿನಗಳಲ್ಲಿ ಮತದಾರರ ಪಟ್ಟಿಯಲ್ಲಿ ಸಮಸ್ಯೆಗಳು ಎದುರಾಗಬಹುದು. ಈ ಹಿಂದೆ ದಾಖಲೆಗಳಲ್ಲಿನ ವ್ಯತ್ಯಾಸ ಹಾಗೂ ಜಾಗೃತಿಯ ಕೊರತೆಯಿಂದ ಅನೇಕ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟಿರುವ ಉದಾಹರಣೆಗಳಿವೆ ಎಂದು ಅವರು ಎಚ್ಚರಿಸಿದರು.

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಎಸ್‌ಐಆರ್ ಪ್ರಕ್ರಿಯೆ ವೇಳೆ ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳು ಮತ್ತು ಸಮರ್ಪಕ ಮಾಹಿತಿಯನ್ನು ಒದಗಿಸಿ ಸಹಕರಿಸುವ ಮೂಲಕ ತಮ್ಮ ಮತದಾರರ ಹಕ್ಕನ್ನು ಸುರಕ್ಷಿತಗೊಳಿಸಿಕೊಳ್ಳಬೇಕು ಎಂದು ಶಾಸಕ ಅಲ್ಲಂಪ್ರಭು ಪಾಟೀಲ್ ಕರೆ ನೀಡಿದರು.

Tags

SIRMLA Allamprabhu Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X