ಕಾಂಗ್ರೆಸ್ ಸರಕಾರದಿಂದ ಹಣ ಮಾಡಲೆಂದೇ ಸ್ಮಾರ್ಟ್ ಮೀಟರ್ ಅಳವಡಿಕೆ: ಮಾಜಿ ಶಾಸಕ ರಾಜಕುಮಾರ ತೇಲ್ಕೂರ ಆರೋಪ

ಕಲಬುರಗಿ: ಹಣ ಮಾಡುವ ಏಕೈಕ ಉದ್ದೇಶದಿಂದಲೇ ಕಾಂಗ್ರೆಸ್ ಸರಕಾರವು ಸ್ಮಾರ್ಟ್ ಮೀಟರನ್ನು ಅಳವಡಿಸಲು ಮುಂದಾಗಿದೆ ಎಂದು ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ಅವರು ಗಂಭೀರ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಎಲ್ಲ ನಿಯಮ ಗಾಳಿಗೆ ತೂರಿ ಸ್ಮಾರ್ಟ್ ಮೀಟರ್ ಖರೀದಿ ಕುರಿತಂತೆ ಮುಖ್ಯಮಂತ್ರಿ, ಇಂಧನ ಸಚಿವರು ಉತ್ತರಿಸಬೇಕಿದೆ ಎಂದು ಆಗ್ರಹಿಸಿದರು.
ಅರ್ಹತೆ ಇಲ್ಲದ ಗುತ್ತಿಗೆದಾರನಿಗೆ ಗುತ್ತಿಗೆ, ಬ್ಲ್ಯಾಕ್ ಲಿಸ್ಟೆಡ್ ಕಂಪೆನಿ ಜೊತೆ ಒಡಂಬಡಿಕೆ, ನಿಯಮಾವಳಿ ಉಲ್ಲಂಘನೆ ಮಾಡಿದ್ದನ್ನು ಹಾಗೂ ರಾಷ್ಟ್ರದಲ್ಲೇ ಗರಿಷ್ಠ- ದುಬಾರಿ ದರ ವಿಧಿಸುತ್ತಿರುವುದು, ಕಡ್ಡಾಯ ಇಲ್ಲದಿದ್ದರೂ ಕಡ್ಡಾಯ ಮಾಡಿದ್ದಾರೆ ಎಂದು ದೂರಿದರು.
ಸ್ಮಾರ್ಟ್ ಮೀಟರ್ ಅಳವಡಿಕೆಯ 15 ಸಾವಿರ ಕೋಟಿ ರೂ. ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ವಜಾಗೊಳಿಸಬೇಕು. ಅವರ ರಾಜೀನಾಮೆ ಪಡೆಯಬೇಕು ಎಂದು ತೇಲ್ಕೂರ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಆದ ಅಕ್ರಮದ ಕುರಿತು ರಾಹುಲ್ ಗಾಂಧಿಯವರು ಆಪಾದಿಸಿದ ಪ್ರತಿಕ್ರಿಯೆ ನೀಡಿರುವ ತೇಲ್ಕೂರ ಅವರು, ಆಗ ಕಾಂಗ್ರೆಸ್ ಪಕ್ಷವೇ ಇಲ್ಲಿ ಆಡಳಿತದಲ್ಲಿತ್ತು. ಇದು ಆಧಾರರಹಿತ ಹೇಳಿಕೆ ಇದನ್ನು ಖಂಡಿಸುತ್ತೇವೆ. ಇದಕ್ಕೆ ಚುನಾವಣಾ ಇಲಾಖಾಧಿಕಾರಿಗಳು, ಸರಕಾರವೇ ಉತ್ತರ ಕೊಡಬೇಕಾಗುತ್ತದೆ ಎಂದರು.







