Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಂಗ್ರೆಸ್ ಸ್ಟಿಂಗ್ ಆಪರೇಷನ್‌ಗಳನ್ನು...

ಕಾಂಗ್ರೆಸ್ ಸ್ಟಿಂಗ್ ಆಪರೇಷನ್‌ಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ : ಛಲವಾದಿ ನಾರಾಯಣಸ್ವಾಮಿ ಆರೋಪ

"ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ"

ವಾರ್ತಾಭಾರತಿವಾರ್ತಾಭಾರತಿ14 Oct 2026 8:07 PM IST
share
ಕಾಂಗ್ರೆಸ್ ಸ್ಟಿಂಗ್ ಆಪರೇಷನ್‌ಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ : ಛಲವಾದಿ ನಾರಾಯಣಸ್ವಾಮಿ ಆರೋಪ

ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಟಿಂಗ್ ಆಪರೇಷನ್‌ಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಪಕ್ಷವೇ ಸ್ಟಿಂಗ್ ಆಪರೇಷನ್‌ಗಳ ಕಾರ್ಖಾನೆಯಾಗಿದೆ ಎಂದು ಟೀಕಿಸಿದರು.

“ನನಗೂ ಸ್ಟಿಂಗ್ ಆಪರೇಷನ್ ಮಾಡಿಸಬೇಕೆಂದು ಹೇಳಿದ್ದೇನೆ. ಮುಖ್ಯಮಂತ್ರಿಯವರ ಸ್ಟಿಂಗ್ ಆಪರೇಷನ್ ಮಾಡಿದವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಅಥವಾ ಸಚಿವರು ಹಾಗೂ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಲು ಅದನ್ನು ಬಳಸಿಕೊಳ್ಳಲಾಗಿದೆಯೇ?” ಎಂದು ಪ್ರಶ್ನಿಸಿದರು.

ಅಧಿಕಾರದಲ್ಲಿದ್ದಾಗ ನಡೆಯದ ಸ್ಟಿಂಗ್ ಆಪರೇಷನ್‌ಗಳು ಅಧಿಕಾರದಿಂದ ದೂರವಾದ ಬಳಿಕ ಏಕೆ ನಡೆಯುತ್ತಿವೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿ ಗಂಭೀರವಾಗಿ ನಡೆದುಕೊಳ್ಳಬೇಕು. ಜನರು ಮುಖ್ಯಮಂತ್ರಿಯ ಹೇಳಿಕೆಗಳನ್ನು ನೋಡಿ ನಗುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದರು.

ಲಿಂಗಾಯತ ಮಠಾಧೀಶರನ್ನು ರಾಯಭಾರಿಗಳಾಗಿ ಬಳಸಿಕೊಳ್ಳಬೇಕು ಎಂಬ ರೀತಿಯ ಹೇಳಿಕೆಗಳು ಚಿಂತಾಜನಕವಾಗಿವೆ. ಸಾರ್ವಜನಿಕ ಜೀವನದಲ್ಲಿರುವವರು ಜನರ ಭಾವನೆಗಳಿಗೆ ಗೌರವ ನೀಡುವ ರೀತಿಯಲ್ಲಿ ಮಾತನಾಡಬೇಕು ಎಂದು ಹೇಳಿದರು.

ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲಿ :

ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆದು ಮೂರು ದಿನ ಕಳೆದರೂ ಸೂಕ್ತ ಪರಿಹಾರ ದೊರೆತಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದರೂ ಸರ್ಕಾರ ಕೇವಲ 2,500 ರೂ. ಘೋಷಿಸಿದೆ. ಘೋಷಿಸಿರುವ ಪರಿಹಾರದ ಹಣವೂ ಇನ್ನೂ ರೈತರ ಖಾತೆಗಳಿಗೆ ಜಮೆಯಾಗಿಲ್ಲ ಎಂದು ದೂರಿದರು.

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದ ಅವರು, ಸರ್ಕಾರ ತನ್ನ ಹಣಕಾಸಿನ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಬೇಕು. ಬಳಿಕ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್‌) ಅಡಿ ಪರಿಹಾರ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್ ವಿರುದ್ಧದ ಹೋರಾಟ ರಾಜಕೀಯ ಪ್ರೇರಿತ :

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಮಾತನಾಡಿದ ಅವರು, 2002ರಲ್ಲಿಯೂ ಎಸ್‌ಐಆರ್ ನಡೆದಿತ್ತು. ಈಗಲೂ ಅದೇ ಪ್ರಕ್ರಿಯೆ ನಡೆಯುತ್ತಿದೆ. ಒಬ್ಬರ ಹೆಸರೇ ಎರಡು-ಮೂರು ಬಾರಿ ದಾಖಲಾಗಿದ್ದರೆ, ಮೃತಪಟ್ಟವರು ಹಾಗೂ ವಿದೇಶದಲ್ಲಿರುವವರ ಹೆಸರುಗಳು ಪಟ್ಟಿಯಲ್ಲಿದ್ದರೆ ಅವುಗಳನ್ನು ತೆಗೆದುಹಾಕುವುದು ಈ ಪ್ರಕ್ರಿಯೆಯ ಉದ್ದೇಶವಾಗಿದೆ ಎಂದರು.

ಸುಪ್ರೀಂ ಕೋರ್ಟ್‌ ಕುರಿತು ಆರೋಪಗಳನ್ನು ಮಾಡುವ ಬದಲು, ಸಮಸ್ಯೆಗಳಿದ್ದರೆ ನ್ಯಾಯಾಲಯದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು. ಅನ್ಯಾಯ ಅಥವಾ ಅಪಮಾನವನ್ನು ಸಹಿಸಿಕೊಂಡು ಮೌನವಾಗಿರುವುದು ಇಡೀ ಕರ್ನಾಟಕಕ್ಕೆ ಅಪಮಾನ ಮಾಡಿದಂತಾಗುತ್ತದೆ ಎಂದು ಹೇಳಿದರು.

ದಲಿತರಿಗೆ ಶೇ.24ರಷ್ಟು ಮೀಸಲಾತಿ ಉಳಿಸಲು ಆಗ್ರಹ :

ಪರಿಶಿಷ್ಟ ಜಾತಿಗಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಛಲವಾದಿ ನಾರಾಯಣಸ್ವಾಮಿ ದೂರಿದರು.

ಬಿಜೆಪಿ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಿತ್ತು. ಇದರಿಂದ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶಗಳು ದೊರೆಯುತ್ತಿದ್ದವು. ಒಳಮೀಸಲಾತಿಯಲ್ಲಿಯೂ ಇದರ ಪ್ರಯೋಜನ ಲಭಿಸುತ್ತಿತ್ತು ಎಂದು ಹೇಳಿದರು.

ನಮೋಶಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ :

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಲ್ಯಾಣ ಕರ್ನಾಟಕದ ಸಮಸ್ಯೆಗಳಿಗೆ ನಿರಂತರವಾಗಿ ಧ್ವನಿಯಾಗುತ್ತಿರುವ ನಮೋಶಿ ಅವರಿಗೆ ಶಿಕ್ಷಕರು ಮೊದಲ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಮನವಿ ಮಾಡಿದರು.

ಶಶೀಲ್ ಜಿ. ನಮೋಶಿ ಅವರು ಜನರ ಆಶೀರ್ವಾದದಿಂದ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಮಾತ್ರ ಸೀಮಿತವಾಗದೆ, ಪದವೀಧರರು, ವಿದ್ಯಾರ್ಥಿಗಳು, ದಲಿತರು ಹಾಗೂ ರೈತರು ಸೇರಿದಂತೆ ಎಲ್ಲ ವರ್ಗಗಳ ಸಮಸ್ಯೆಗಳಿಗೆ ಪಕ್ಷಭೇದ ಮರೆತು ಸ್ಪಂದಿಸಿದ್ದಾರೆ. ಯಾವುದೇ ಸಮಸ್ಯೆ ಎದುರಾದರೂ ಮೊದಲು ಧ್ವನಿ ಎತ್ತಿ ನ್ಯಾಯಕ್ಕಾಗಿ ಹೋರಾಡುವ ಗುಣ ಅವರಲ್ಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ವಿಭಾಗ ಸಹಪ್ರಭಾರಿ ಶರಣಪ್ಪ ತಳವಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ, ಶಿವರಾಜ ಪಾಟೀಲ್ ರದ್ದೇವಾಡಗಿ, ಅಂಬಾರಾಯ್ ಅಷ್ಟಗಿ, ಧರ್ಮಣ್ಣ ಇಟಗಾ, ಗಿರಿರಾಜ್ ಯಳಮೇಲಿ, ರಾಜು ನಾಗೇನಹಳ್ಳಿ, ಸಂತೋಷ ಹಾದಿಮನಿ, ಆನಂದ ಪಾಟೀಲ್, ಮಹೇಂದ್ರ ಪೂಜಾರಿ, ಗಿರೀಶ್ ಭಜಂತ್ರಿ, ಬಾಬುರಾವ್ ಹಾಗರಗುಂಡಗಿ, ಶಿವ ಅಷ್ಟಗಿ ಹಾಗೂ ನಾಗರಾಜ್ ಮಹಾಗಾಂವಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Chalavadi NarayanaswamypoliticalCongresssting operation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X