Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. 2023ರ ಚುನಾವಣೆಯಲ್ಲಿ ಸೋಲಿಸಲು...

2023ರ ಚುನಾವಣೆಯಲ್ಲಿ ಸೋಲಿಸಲು ಮತಗಳ್ಳತನದ ಷಡ್ಯಂತ್ರ ನಡೆದಿತ್ತು: ಶಾಸಕ ಬಿ.ಆರ್. ಪಾಟೀಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ9 Sept 2025 7:49 PM IST
share
2023ರ ಚುನಾವಣೆಯಲ್ಲಿ ಸೋಲಿಸಲು ಮತಗಳ್ಳತನದ ಷಡ್ಯಂತ್ರ ನಡೆದಿತ್ತು: ಶಾಸಕ ಬಿ.ಆರ್. ಪಾಟೀಲ್ ಆರೋಪ
"ಬಿಜೆಪಿಯನ್ನೇ ಅಧಿಕಾರದಲ್ಲಿ ಕೂರಿಸುವ ಯತ್ನ ಚುನಾವಣಾ ಆಯೋಗದ್ದು"

ಕಲಬುರಗಿ: 2023ರ ವಿಧಾನಸಭಾ ಚುನಾವಣೆ ವೇಳೆಗೆ ಆಳಂದ ಮತಕ್ಷೇತ್ರದಲ್ಲಿರುವ ಆರು ಸಾವಿರಕ್ಕೂ ಹೆಚ್ಚು ನನ್ನ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಷಡ್ಯಂತ್ರ ನಡೆದಿತ್ತು ಎಂದು ರಾಜ್ಯ ಯೋಜನಾ ಮತ್ತು ನೀತಿ ಆಯೋಗದ ಉಪಾಧ್ಯಕ್ಷರೂ ಆಗಿರುವ ಆಳಂದ ಶಾಸಕ ಬಿ.ಆರ್ ಪಾಟೀಲ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಬಲಿಗರನ್ನು ಮತದಾರರಪಟ್ಟಿಯಿಂದ ಅಳಿಸಿ ಹಾಕಲು ನಕಲಿ ಫಾರಂ-7 ಬಳಸಿದ್ದರು. ತೆಗೆದು ಹಾಕಲು ಸಲ್ಲಿಕೆಯಾಗಿದ್ದ 6,018 ಅರ್ಜಿಗಳ ಪೈಕಿ 24 ಅರ್ಜಿಗಳ ಮಾತ್ರವೇ ನೈಜವೆಂದು ಗೊತ್ತಾಗಿತ್ತು. ಉಳಿದಂತೆ 5,994 ಅರ್ಜಿಗಳು ನಕಲಿ ಎಂದು ಗೊತ್ತಾಗಿತ್ತು. ಈಗ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ʼವೋಟ್ ಚೋರಿʼ ಅಭಿಯಾನಕ್ಕೆ ಆಳಂದ ಕ್ಷೇತ್ರದ ಪ್ರಕರಣವೇ ದೊಡ್ಡ ಜೀವಂತ ಸಾಕ್ಷಿಯಾಗಿದೆ ಎಂದರು.

ಈ ಕುರಿತಂತೆ ಆಗಿನ ಚುನಾವಣಾಧಿಕಾರಿ ಮಮತಾ ಕುಮಾರಿ ಅವರು, ಆಳಂದ ವಿಧಾನಸಭಾ ಮತಕ್ಷೇತ್ರದಲ್ಲಿ 254 ಮತಗಟ್ಟೆಗಳಿಂದ 5994 ಮತದಾರರ ಪಟ್ಟಿಯಿಂದ ಮೂಲ ಮತದಾರರ ಗಮನಕ್ಕೆ ಬಾರದೆ ಪಟ್ಟಿಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿರುವ ತಪ್ಪಿತಸ್ಥರ ವಿರೋಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಳಂದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೂ ತಾರ್ಕಿಕ ಅಂತ್ಯ ಕಾಣಲಿಲ್ಲ. ಹಾಗಾಗಿ ನಮ್ಮ ಸರ್ಕಾರ ಬಂದ ಬಳಿಕ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿಗೂ ಚುನಾವಣಾ ಆಯೋಗವು ನಕಲಿ ಅರ್ಜಿಗಳನ್ನು ಸಲ್ಲಿಸಿದ ಸಾಧನಗಳನ್ನು ಗುರುತಿಸಲು ಅಗತ್ಯವಿರುವ ಡೆಸ್ಟಿನೇಷನ್ ಐಪಿಗಳು ಹಾಗೂ ಪೋರ್ಟ್ ವಿವರಗಳನ್ನು ನೀಡದೆ ಇರುವುದರಿಂದ ತನಿಖೆ ಅಲ್ಲಿಗೆ ನಿಂತು ಹೋಗಿದೆ. ಈಗ ಅದು ಸೈಬರ್ ಕ್ರೈಂ ನಲ್ಲಿ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು.

ಬಿಜೆಪಿಯನ್ನೇ ಅಧಿಕಾರದಲ್ಲಿ ಕೂರಿಸುವ ಯತ್ನ ಚುನಾವಣಾ ಆಯೋಗದ್ದು:

ಮತದಾರರ ಪಟ್ಟಿಯಿಂದ ಆರು ಸಾವಿರಕ್ಕೂ ಹೆಚ್ಚಿನ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವ ಷಡ್ಯಂತ್ರ ಮಾಡುತ್ತಿರುವುದರ ಹಿಂದೆ ಯಾರ ಕೈವಾಡವಿದೆ ಎಂಬುದರ ಪತ್ತೆ ಹಚ್ಚಬೇಕು. ಈಗಾಗಲೇ ಪ್ರಕರಣ ದಾಖಲಾಗಿದ್ದರೂ ತನಿಖೆಗೆ ಚುನಾವಣಾ ಆಯೋಗ ಯಾಕೆ ಸಹರಿಸುತ್ತಿಲ್ಲ? ಸಂವಿಧಾನ ಬದ್ಧವಾಗಿರುವ ಸಂಸ್ಥೆ ಬಿಜೆಪಿಯನ್ನೇ ಅಧಿಕಾರದಲ್ಲಿ ಕೂರಿಸಲು ಯತ್ನ ಮಾಡುತ್ತಿದೆ ಎಂದ ಅವರು, ಇಂತಹ ಘಟನೆಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿವೆ ಎಂದು ಬಿಆರ್ ಪಾಟೀಲ್ ವಾಗ್ದಾಳಿ ನಡೆಸಿದರು.

ಈಗಾಲೇ ಮತಗಳ್ಳತನ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ, ವೇಣುಗೋಪಾಲ ಸೇರಿದಂತೆ ಹಲವರು ಟ್ವೀಟ್ ಮಾಡಿ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ದತ್ತಾಂಶ ತಂಡವೂ ಮಾಹಿತಿ ಪಡೆದಿದ್ದು, ಪಕ್ಷವೂ ನನ್ನ ಜೊತೆ ನಿಂತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X